ಬೆಂಗಳೂರು: ಫೇಸ್ಬುಕ್ನಲ್ಲಿ ಅಪ್ರಾಪ್ತೆಯ ಪರಿಚಯ ಮಾಡಿಕೊಂಡು ಅತ್ಯಾಚಾರಗೈದ ವಿಡಿಯೋ ಮೂಲಕ ಲೈಂಗಿಕ ಕ್ರಿಯೆಗೆ ಪೀಡಿಸು ತ್ತಿದ್ದ ಉತ್ತರ ಭಾರತ ಮೂಲದ ಪ್ರಗತಿಶ್ (26) ಎಂಬಾತನನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜಾಹಿರಾತು ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸಾಮಾಜಿಕ ಜಾಲ ತಾಣದಲ್ಲಿ ಅಪ್ರಾಪ್ತೆಯನ್ನು ಪರಿಚಯಿಸಿಕೊಂಡು ಬಳಿಕ ಅಪಾರ್ಟ್ಮೆಂಟ್ವೊಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡು ಆಗಾಗ್ಗ ಅಪ್ರಾಪ್ತೆಗೆ ಕರೆ ಮಾಡಿ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಪೀಡಿಸುತ್ತಿದ್ದ.
ಇದರಿಂದ ಬೇಸತ್ತ ಸಂತ್ರಸ್ತೆ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಇಂದಿರಾನಗರದಲ್ಲಿರುವ ಗ್ರೇ ಮೀಡಿಯಾ ಅಡ್ವರ್ಟೆçಸಿಂಗ್ ಮತ್ತು ಫ್ಯಾಷನ್ ಡಿಸೈನರ್ ಸಂಸ್ಥೆಯ ವಿಸಿಟಿಂಗ್ ಕಾರ್ಡ್ ಹೊಂದಿದ್ದ. ಆರೋಪಿ ಕಳೆದ ಒಂದು ತಿಂಗಳ ಹಿಂದೆ ವಿಲ್ಸನ್ ಗಾರ್ಡನ್ ನಿವಾಸಿ ಅಪ್ರಾಪೆಯನ್ನು ಫೇಸ್ಬುಕ್ನಲ್ಲಿ ಪರಿಚಯಿಸಿಕೊಂಡಿದ್ದ.
ಫೇಸ್ಬುಕ್ನಲ್ಲಿ ಇಬ್ಬರು ಮೊಬೈಲ್ ಸಂಖ್ಯೆ ವಿನಿಮಯ ಮಾಡಿಕೊಂಡಿದ್ದರು. ಬಳಿಕ ಬಾಲಕಿ ಜತೆ ಸಲುಗೆಯಿಂದ ಇದ್ದ ಪ್ರಗತಿಶ್ ಆಕೆಯನ್ನು ಒಂದೆರಡು ಬಾರಿ ಭೇಟಿ ಕೂಡ ಮಾಡಿದ್ದ. ಆಕೆಯನ್ನು ಮತ್ತೂಮ್ಮೆ ಭೇಟಿ ಮಾಡುವ ನೆಪದಲ್ಲಿ ತನ್ನ ಅಪಾರ್ಟ್ ಮೆಂಟ್ವೊಂದರ ಫ್ಲ್ಯಾಟ್ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರಿಸಿಕೊಂಡು ಆಗ್ಗಾಗ್ಗೆ ಲೈಂಗಿಕ ಕ್ರಿಯೆಗೆ ಪೀಡಿಸುತ್ತಿದ್ದ.
ಇದಕ್ಕೆ ಒಪ್ಪದ ಬಾಲಕಿಗೆ ಆರೋಪಿ ಪ್ರಾಣ ಬೆದರಿವೊಡ್ಡಿ, ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವಿಡಿಯೋವನ್ನು ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಸುತ್ತಿದ್ದ ಸಂತ್ರಸ್ತ ಬಾಲಕಿ ದೂರಿನಲ್ಲಿ ಹೇಳಿದ್ದಾಳೆ. ಆತನ ಸಮಸ್ಯೆ ತಾಳಲಾರದೆ ಸಂತ್ರಸ್ತ ಬಾಲಕಿ ವಿಲ್ಸನ್ಗಾರ್ಡನ್ ಠಾಣೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಿಸಿದ್ದಳು. ಘಟನೆ ರಾಮಮೂರ್ತಿನಗರದಲ್ಲಿ ನಡೆದ್ದರಿಂದ ರಾಮಮೂರ್ತಿ ನಗರ ಠಾಣೆಗೆ ಪ್ರಕರಣ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.