Advertisement
ವರ್ಷಕ್ಕೊಂದು ಪ್ರಯೋಗಸದಾಶಿವರವರ ಕೃಷಿ ಸಾಧನೆಗೆ ಪ್ರೇರಣೆಯಾದವರು ಬೆಳಗಾವಿ ಜಿಲ್ಲೆಯ ಸುತಗಟ್ಟಿಯ ಕೃಷಿ ಪಂಡಿತ ಅಭಯ ಮುತಾಲಿಕ ದೇಸಾಯಿಯವರು. ಅಲ್ಲದೇ ಸಾವಯವ ಕೃಷಿ ತಜ್ಞರಾದ ಸುಭಾಷ ಪಾಳೇಕಾರ, ಅವರು ಮಾಡುತ್ತಿದ್ದ ಕೃಷಿ ಪದ್ದತಿಯ ಪ್ರಭಾವವೂ ಇವರ ಮೇಲೆ ಪರಿಣಾಮ ಬೀರಿದೆ. ಹೀಗಾಗಿ, ಕಳೆದ ಹತ್ತು ವರ್ಷಗಳಿಂದ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿಯಲ್ಲಿ ತೊಡಗಿದ್ದಾರೆ. ತಮ್ಮ 15 ಎಕರೆ ಜಮೀನಿನಲ್ಲಿ 5 ಎಕರೆ ಚಿಕ್ಕು, 5 ಎಕರೆ ಹುಣಸೆ ಹಾಗೂ 5 ಎಕರೆಯಲ್ಲಿ ಲಿಂಬು, ಪೇರಲ, ಶ್ರೀಗಂಧ ಮತ್ತು ನುಗ್ಗೆಯನ್ನು ಬೆಳೆದಿದ್ದಾರೆ. ಇವರ ತೋಟದಲ್ಲಿ 180 ಚಿಕ್ಕು, 180 ಹುಣಸೆ ಮತ್ತು 650 ನಿಂಬೆ ಗಿಡಗಳು ಸೊಂಪಾಗಿ ಬೆಳೆದಿವೆ. 2016ರಲ್ಲಿ 1200 ಪೇರಲ, 2017ರಲ್ಲಿ 550 ಶ್ರೀಗಂಧ ಹಾಗೂ 6 ತಿಂಗಳ ಹಿಂದೆಯಷ್ಟೇ 550 ನುಗ್ಗೆ ಸಸಿಗಳನ್ನು ನಾಟಿ ಮಾಡಿದ್ದಾರೆ.
ನಿಸರ್ಗದ ಬಗ್ಗೆ ಕೃಷಿ ಹಾಗೂ ಸಸ್ಯ ಸಂಕುಲಗಳ ಬದುಕಿನ ಬಗ್ಗೆ ಆಳವಾದ ಜ್ಞಾನ ಹೊಂದಿರುವ ಇವರು, ಕೃಷಿ ವಿಜ್ಞಾನವನ್ನು ಕಲಿತವರಲ್ಲ. ಹೊಸ ಹೊಸ ಪ್ರಯೋಗಗಳಿಗೆ ತಮ್ಮನ್ನು ಒಡ್ಡಿಕೊಳ್ಳುತ್ತಲೇ ಸಾಕಷ್ಟು ತಿಳಿದುಕೊಂಡವರು. ಈ ಪ್ರಯೋಗಗಳ ಫಲವಾಗಿಯೇ ಇಂದು ಇವರ ಜಮೀನಿನಲ್ಲಿ ತೆಂಗು, ಸೀತಾಫಲ, ಪಪ್ಪಾಯಿ, ಮಾವು ಸೇರಿದಂತೆ ಹಲವು ಬಗೆಯ ಸಸ್ಯ ಪ್ರಭೇದಗಳಿವೆ. ಅದರ ಜತೆಗೆ ನೂರಾರು ಸೂಕ್ಷ್ಮಜೀವಿಗಳು ಇವರ ಜಮೀನಿನಲ್ಲಿ ನೆಲೆಸುವುದರಿಂದ ಇವರ ತೋಟದ ನೆಲ ಹೆಚ್ಚು ಫಲವತ್ತಾಗಿದೆ.
Related Articles
ಸದಾಶಿವರವರು ಹಸುವಿನ ಕೊಠಡಿಯನ್ನು ವ್ಯವಸ್ಥಿತವಾಗಿ ನಿರ್ಮಿಸಿದ್ದು ಸದ್ಯ 3 ಆಕಳು ಹಾಗೂ 2 ಎಮ್ಮೆಗಳಿವೆ. ಅಲ್ಲದೇ 30 ಟಗರು ಮರಿಗಳು ಮತ್ತು 12 ಆಡುಗಳಿವೆ. ಮುಂದಿನ ದಿನಗಳಲ್ಲಿ ಆಡುಗಳ ಸಾಕಣಿಕೆಯನ್ನು ವಿಸ್ತರಿಸುವ ಯೋಚನೆಯಲ್ಲಿದ್ದಾರೆ. ಇವರು ವಾರ್ಷಿಕವಾಗಿ ಚಿಕ್ಕುವಿನಿಂದ 2 ಲಕ್ಷ, ಹುಣಸೆಯಿಂದ 1ಲಕ್ಷ, ನಿಂಬೆಯಿಂದ 2 ಲಕ್ಷ, ವಿವಿಧ ತರಕಾರಿಗಳಿಂದ 2 ಲಕ್ಷ, ಹೀಗೆ ಎಲ್ಲಾ ಕೃಷಿ ಚಟುವಟಿಕೆಗಳಿಂದ ಒಟ್ಟು 10- 12 ಲಕ್ಷ ರೂ. ನಿವ್ವಳ ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದಾಶಿವರವರ ಪತ್ನಿ ಪವಿತ್ರಾ ಅವರೂ ಪತಿಯ ನೈಸರ್ಗಿಕ ಕೃಷಿಗೆ ಬೆಂಬಲ ನೀಡುತ್ತಾ ಬಂದಿದ್ದಾರೆ.
Advertisement
ರೈತರು ಬೆಳೆದ ಉತ್ಪನ್ನಗಳಿಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ನೇರವಾಗಿ ಮಾರುಕಟ್ಟೆಗೆ ತಲುಪಿಸುವ ಸಲುವಾಗಿ 2017ರಲ್ಲಿ “ಲಕ್ಷಿ$¾à ವೆಂಕಟೇಶ್ವರ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಸಂಘ’ವನ್ನು ಸ್ಥಾಪಿಸಿದ್ದಾರೆ. ಈ ಸಂಘದಲ್ಲಿ ಒಟ್ಟು 500 ರೈತ ಸದಸ್ಯರಿದ್ದಾರೆ. ಸದಾಶಿವ ರೈತ ಉತ್ಪಾದಕ ಸಂಘದ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ಬಹು ಚೆನ್ನಾಗಿ ಅದರ ಪ್ರಗತಿಯನ್ನು ಸಾಧಿಸುವತ್ತ ಮುನ್ನಡೆದಿದ್ದಾರೆ. ಅಲ್ಲದೇ ರೈತರು ಬೆಳೆದ ಸಾವಯವ ಕೃಷಿ ಉತ್ಪನ್ನಗಳನ್ನು ಸುಲಭವಾಗಿ ಗ್ರಾಹಕರಿಗೆ ತಲುಪಿಸುವ ನಿಟ್ಟಿನಲ್ಲಿ ರಾಮದುರ್ಗದ ಮಾರುಕಟ್ಟೆಯಲ್ಲಿ ಕೆಲ ಮಿತ್ರರು ಸೇರಿ ಹಳ್ಳಿ ಅಂಗಡಿಯನ್ನು ಕಳೆದ ಆರು ತಿಂಗಳಿಂದ ಪ್ರಾರಂಭಿಸಿದ್ದಾರೆ.
ಸೂರ್ಯ ಮಂತ್ರ ಮತ್ತು ಭಸ್ಮಹಾಗೆಯೇ ಸದಾಶಿವ ಪ್ರತಿನಿತ್ಯ ಸೂರ್ಯ ಉದಯವಾಗುವ ವೇಳೆಯಲ್ಲಿ ಹಸುವಿನ ಸಗಣಿಯಿಂದ ಮಾಡಿದ ಎರಡು (ಕುಳ್ಳು) ಭರಣಿ, ಒಂದು ಚಮಚ ಆಕಳ ತುಪ್ಪ ಹಾಗೂ ಒಂದು ಮುಷ್ಠಿ ಪಾಲಿಶ್ ಆಗದ ಅಕ್ಕಿ ಸೇರಿಸಿ ಪಿರಮಿಡ್ ಪಾತ್ರೆಯಲ್ಲಿ ಅಗ್ನಿ ಹಚ್ಚಿ “ಸೂರ್ಯಾಯ ಸ್ವಾಹಾಃ ಸೂರ್ಯಾಯ ಇದಂ ನಮಮ’ ಎಂದು ಸೂರ್ಯ ಮಂತ್ರ ಹೇಳಿ ಅರ್ಪಿಸುತ್ತಾರೆ. ಹೀಗೆ ಹಲವು ವರ್ಷಗಳಿಂದ ಅಗ್ನಿಹೋತ್ರವನ್ನು ಮಾಡುತ್ತಿದ್ದು, ಭಸ್ಮವನ್ನು ಜಮೀನಿನಲ್ಲಿ ಹರಡುವುದರಿಂದ, ಕ್ರಿಮಿಕೀಟಗಳು ಬೆಳೆ ನಾಶ ಮಾಡುತ್ತಿದ್ದ ದಿನಗಳು ಇನ್ನಿಲ್ಲವೆಂದು ಹೇಳಲಾಗಿದೆ. ಅಲ್ಲದೇ ಜೀವಾಮೃತ ಅಗ್ನಿ ಅಸ್ತ್ರವನ್ನು ತಯಾರಿಸಿ ಭೂಮಿಗೆ ಸಿಂಪಡಿಸುತ್ತಾರೆ. ಹೀಗೆ ಮಾಡುವುದರಿಂದ ಮಣ್ಣಿನಲ್ಲಿ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿ ಭೂಮಿಗೆ ಫಲವತ್ತತೆ ಬರುತ್ತದೆ. ಇವರ ಜಮೀನಿನಲ್ಲಿ ಎರಡು ಬೋರ್‌ವೆಲ್‌ಗಳಿದ್ದು ಹನಿ ನೀರಾವರಿ ಮೂಲಕ ಎಲ್ಲಾ ಗಿಡಗಳಿಗೂ ನೀರು ಪೂರೈಕೆಯಾಗುವಂತೆ ವ್ಯವಸ್ಥೆ ಮಾಡಿದ್ದಾರೆ. ಅಲ್ಲದೇ ತೋಟದ ಸುತ್ತಲೂ ಭದ್ರವಾದ ತಂತಿ ಬೇಲಿಯನ್ನು ಅಳವಡಿಸಿದ್ದಾರೆ. ಇವರ ಜಮೀನಿಗೆ ಕೃಷಿ ತಜ್ಞರಾದ ಅಭಯ ಮುತಾಲಿಕ್ ದೇಸಾಯಿ, ಕವಿತಾ ಮಿಶ್ರಾ ಮುಂತಾದವರು ಭೇಟಿ ನೀಡಿ ಮೆಚ್ಚುಗೆ ಸೂಚಿಸಿದ್ದಾರೆ. ನೈಸರ್ಗಿಕ ಕೃಷಿಯಿಂದ ಭೂಮಿ ಕೆಡುವುದಿಲ್ಲ. ಮಣ್ಣು ಫಲವತ್ತಾಗುವುದರಿಂದ ಉತ್ತಮ ಬೆಳೆ ಬೆಳೆಯಲು ಸಾಧ್ಯ. ಅಲ್ಲದೇ ಆಹಾರ ಪದಾರ್ಥಗಳಲ್ಲಿ ವಿಷ ಇರುವುದಿಲ್ಲ. ವಿಷ ಮುಕ್ತ ಆಹಾರ ಸೇವನೆಯಿಂದ ಆನಂದದ ಬದುಕು ಸಾಗಿಸಬಹುದು.
– ಸದಾಶಿವ ಮಾತನವರ, ರೈತ ಸಂಪರ್ಕ: 9731796444 -ಸುರೇಶ ಗುದಗನವರ