Advertisement

Bundi: ಕಾರಿಗೆ ಅಪರಿಚಿತ ವಾಹನ ಡಿಕ್ಕಿ; ಆರು ಯಾತ್ರಾರ್ಥಿಗಳು ಸಾವು

10:26 AM Sep 15, 2024 | Team Udayavani |

ಹೊಸದಿಲ್ಲಿ: ರಾಜಸ್ಥಾನದ ಬುಂದಿ (Bundi) ಜಿಲ್ಲೆಯಲ್ಲಿ ರವಿವಾರ (ಸೆ.15) ಬೆಳಗ್ಗೆ ಕಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಜೈಪುರ ರಾಷ್ಟ್ರೀಯ ಹೆದ್ದಾರಿಯ ಹಿಂದೋಲಿ ಬಳಿ ಮುಂಜಾನೆ 4:30 ರ ಸುಮಾರಿಗೆ ಉತ್ತರ ಪ್ರದೇಶದ ದೇವಾಸ್ ನಿವಾಸಿಗಳು ಸಿಕಾರ್ ಜಿಲ್ಲೆಯ ಖತು ಶ್ಯಾಮ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

“ಮಾರುತಿ ಸುಜುಕಿ ಇಕೋ ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ್ದಾರೆ” ಎಂದು ಬುಂಡಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಶರ್ಮಾ ತಿಳಿಸಿದ್ದಾರೆ.

“ನಾವು ಅಪರಿಚಿತ ವಾಹನವನ್ನು ಪತ್ತೆಹಚ್ಚಲು ತಂಡಗಳನ್ನು ರಚಿಸಿದ್ದೇವೆ” ಎಂದು ಅವರು ಹೇಳಿದರು.

ಮೃತ ಪಟ್ಟವರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next