Advertisement

ಬಂಟರ ಸಂಘ ಉನ್ನತ ಶಿಕ್ಷಣ ಸಂಸ್ಥೆ ಕಾಲೇಜುಗಳ ಪದವಿ ಪ್ರದಾನ ಸಮಾರಂಭ

05:02 PM Mar 01, 2017 | |

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಉನ್ನತ ಶಿಕ್ಷಣ ಕಾಲೇಜುಗಳ ವಾರ್ಷಿಕ ಪದವಿ ಪ್ರದಾನ ಸಮಾರಂಭವು ಫೆ. 27ರಂದು ಅಪರಾಹ್ನ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ, ಸಂಘದ ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ ಅವರ ನೇತೃತ್ವದಲ್ಲಿ ಜರಗಿತು.

Advertisement

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಸಂಸದ, ಮುಂಬಯಿ ವಿಶ್ವವಿದ್ಯಾಲಯದ ಕುಲಪತಿ ಮತ್ತು ಯೋಜನ ವಿಭಾಗದ ಮಾಜಿ ಸದಸ್ಯ ಡಾ| ಬಾಲಚಂದ್ರ ಮುಂಗೇಕರ್‌ ಅವರು ಪಾಲ್ಗೊಂಡಿದ್ದರು. ಉನ್ನತ ಶಿಕ್ಷಣ ಸಮಿತಿಯ ಶೈಕ್ಷಣಿಕ ವರ್ಷದ ಸಮನ್ವಯಕ ಮಹೇಶ್‌ ಆರ್‌. ಶೆಟ್ಟಿ ಅವರು ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಮೆರವಣಿಗೆಯ ನೇತೃತ್ವ ವಹಿಸಿ ಮಾತನಾಡಿ, ಪದವಿ ವಿದ್ಯಾರ್ಥಿಗಳಿಗೆ ಜೀವನದ ಮೊದಲ ಪಯಣ ಇದಾಗಿದ್ದು, ವಿದ್ಯಾರ್ಥಿಗಳು ತಮ್ಮ ಪದವಿ ಗುರುತು ಪತ್ರದ ಮೂಲಕ ಭವಿಷ್ಯದಲ್ಲಿ ಜೀವನದ ದಾರಿ ಹಿಡಿಯಲು ಇದು ಸಹಕಾರಿಯಾಗಲಿದೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿ ಡಾ| ಬಾಲಚಂದ್ರ ಮುಂಗೇಕರ್‌ ಅವರು ಮಾತನಾಡಿ, ಬಂಟ ಸಮುದಾಯ ತಮ್ಮ ಪರಿಶ್ರಮ, ಪ್ರಾಮಾಣಿಕತೆಯಿಂದ ಬದುಕಿನ ಎಲ್ಲಾ ಘಟ್ಟಗಳಲ್ಲೂ ಯಶಸ್ವಿಯಾಗಿದೆ. ಸಾಮಾಜಿಕ ಚಟುವಟಿಕೆಗಳಲ್ಲಿ ಬಂಟರ ಕ್ರಿಯಾಶೀಲತೆ ಎದ್ದು ಕಾಣುತ್ತಿದೆ. ಉನ್ನತ ಶಿಕ್ಷಣ ವ್ಯಾಸಂಗ ಬಯಸುವ ವಿದ್ಯಾರ್ಥಿಗಳಿಗೆ ವಿಶೇಷ ರೀತಿಯ ಪ್ರೋತ್ಸಾಹ ನೀಡುತ್ತಾ ಬಂದಿದೆ. ವಿದ್ಯಾರ್ಥಿಗಳು ಬಂಟರ ಸಂಘ ನೀಡುತ್ತಿರುವ ಎಲ್ಲಾ ಸೌಲಭ್ಯಗಳ ಸದುಪಯೋಗವನ್ನು ಪಡೆದು ತಮ್ಮ ಶೈಕ್ಷಣಿಕ ಬೆಳವಣಿಗೆಯ ಜೊತೆಗೆ ಶಾರೀರಿಕ ಹಾಗೂ ಮಾನಸಿಕ ವಿಕಾಸದೊಂದಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಮುನ್ನಡೆಯಬೇಕು. ಇಂದಿನ ಯುವ ಜನತೆ ಶಿಕ್ಷಣದೊಂದಿಗೆ ಉತ್ತಮ ನಾಗರಿಕರಾಗಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.

ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ ಅವರು ಮಾತನಾಡಿ, ಪದವಿ ಪ್ರದಾನ ಸಮಾರಂಭವು ವಿದ್ಯಾರ್ಥಿಗಳ  ಜೀವನದ ಮಹತ್ವದ ಘಟ್ಟಗಳಲ್ಲಿ ಒಂದಾಗಿದೆ. ವಿದ್ಯಾರ್ಥಿಗಳು ಕೇವಲ ಶಿಕ್ಷಣವನ್ನು ಪಡೆದರೆ ಸಾಲದು, ಅದರೊಂದಿಗೆ ಸಂಸ್ಕೃತಿ, ಸಂಸ್ಕಾರಗಳನ್ನು ಪಡೆಯಲು ಮುಂದಾಗಬೇಕು. ಬಂಟರ ಸಂಘದ ಉನ್ನತ ಶಿಕ್ಷಣ ಸಂಸ್ಥೆಗಳು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪೋಷಿಸುತ್ತಿದೆ ಎಂದು ನುಡಿದು ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.

ಸಂಘದ ಅಣ್ಣಾಲೀಲಾ ಕಾಲೇಜು ಕಾಮರ್ಸ್‌ ಮತ್ತು ಎಕನಾಮಿಕ್ಸ್‌, ಶೋಭಾ ಜಯರಾಮ ಶೆಟ್ಟಿ ಕಾಲೇಜ್‌ ಆಫ್‌ ಬಿಎಂಎಸ್‌, ರಮಾನಾಥ ಪಯ್ಯಡೆ ಕಾಲೇಜ್‌ ಆಫ್‌ ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್‌ ಸ್ಟಡೀಸ್‌, ಉಮಾಕೃಷ್ಣ ಶೆಟ್ಟಿ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ಸ್ಟಡೀಸ್‌ ಕಾಲೇಜಿನ ಸುಮಾರು 150ಕ್ಕೂ ವಿದ್ಯಾರ್ಥಿಗಳಿಗೆ ಅತಿಥಿ-ಗಣ್ಯರು ಪದವಿ ಹಾಗೂ ಸ್ನಾತಕೋತ್ತರ ಪದವಿ ಪ್ರದಾನಗೈದರು.

Advertisement

ವೇದಿಕೆಯಲ್ಲಿ ಸಂಘದ ಅಧ್ಯಕ್ಷ, ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಭಾಕರ ಎಲ್‌. ಶೆಟ್ಟಿ, ಡಾ| ಬಾಲಚಂದ್ರ ಮುಂಗೇಕರ್‌, ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಶೈಕ್ಷಣಿಕ ಸಮನ್ವಯಕ ಮಹೇಶ್‌ ಆರ್‌. ಶೆಟ್ಟಿ, ಸಲಹೆಗಾರ ಆದರ್ಶ್‌ ಬಿ. ಶೆಟ್ಟಿ, ಉನ್ನತ ಶಿಕ್ಷಣ ಸಮಿತಿಯ ಉಪ ಕಾರ್ಯಾಧ್ಯಕ್ಷ ಬಿ. ಆರ್‌. ಶೆಟ್ಟಿ, ಪದವಿ ಕಾಲೇಜು ಪ್ರಾಂಶುಪಾಲ ಪ್ರಶಾಂತ್‌ ಶಿಂಧೆ, ರಮಾನಾಥ ಪಯ್ಯಡೆ ಆದರಾತಿಥ್ಯ ಕಾಲೇಜಿನ ಪ್ರಾಂಶುಪಾಲೆ ಸಂಯೋಗಿತಾ ಮೊರಾರ್ಜಿ, ಉಮಾಕೃಷ್ಣ ಶೆಟ್ಟಿ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ನಿರ್ದೇಶಕ ಡಾ| ಕೃಷ್ಣ ಶೆಟ್ಟಿ, ಉನ್ನತ ಶಿಕ್ಷಣ ಸಂಸ್ಥೆಯ ಸಿಎಒ ಪ್ರಕಾಶ್‌ ಮೋರೆ ಮೊದಲಾದವರು ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next