ಮುಂಬಯಿ: ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ನವರಾತ್ರಿ ಉತ್ಸವವು ಸೆ. 29ರಂದು ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್‌ನ ಹೊಟೇಲ್ ಅವೆನ್ಯೂ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ನವರಾತ್ರಿಯ ಅಂಗವಾಗಿ ಶ್ರೀ ದುರ್ಗಾದೇವಿ ಪೂಜೆಯೊಂದಿಗೆ ಪ್ರಾರಂಭಗೊಂಡ ಈ ಮಹಿಳಾ ವಿಭಾಗದ ಕಾರ್ಯಕ್ರಮದ ಅನಂತರ ಪದಾಧಿಕಾರಿಗಳು ಹಾಗೂ ಸಮಾಜ ಬಾಂಧವ ರೊಡಗೂಡಿ ಅರಸಿನ ಕುಂಕುಮವನ್ನು ಪರಸ್ಪರ ಹಚ್ಚಿಕೊಂಡು ಶುಭ ಹಾರೈಸಿದರು. ಅನಂತರ ಸದಸ್ಯರಿಂದ, ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.
ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಡಿ. ಶೆಟ್ಟಿ ಅವರ ಮುಂದಾಳತ್ವದಲ್ಲಿ ಹಾಗೂ ಪದಾಧಿಕಾರಿಗಳ ಸಹಯೋಗದಿಂದ ಜರಗಿದ ಈ ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷೆ ವಿನೋದಾ ಡಿ. ಶೆಟ್ಟಿ ಅವರು ತನ್ನ ಕಳೆದ ಮೂರು ವರ್ಷಗಳ ಕಾರ್ಯಾವಧಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲು ಹಾಗೂ ಅದನ್ನು ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲರನ್ನೂ ಉದ್ದೇಶಿಸಿ ಮಾತನಾಡಿ, ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷೆಯಾಗಿ ಮೂರು ವರ್ಷಗಳಲ್ಲಿ ವಿವಿಧ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಸಮಾಜ ಸೇವೆಯಂತಹ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜರಗಿಸಿದ ಆತ್ಮತೃಪ್ತಿ ನನಗಿದೆ. ಜತೆಗೆ ಹಲವಾರು ಆರ್ಥಿಕ ಸಹಾಯವನ್ನು ನೀಡಿ, ಕೆಲವೊಂದು ಕುಟುಂಬಕ್ಕೆ ವೈದ್ಯಕೀಯ ನೆರವನ್ನು ಮಹಿಳಾ ವಿಭಾಗವು ನೀಡಿದೆ. ಈ ಸಮಾಜ ಸೇವೆಯು ನನಗೆ ತೃಪ್ತಿ ತಂದಿದೆ. ಈ ಎಲ್ಲಾ ಕಾರ್ಯಕ್ರಮದ ಯಶಸ್ಸಿಗೆ ಕಾರ್ಯಾಧ್ಯಕ್ಷ ವಿಜಯ ಆರ್. ಭಂಡಾರಿ ಸಮನ್ವಯಕರಾದ ಮುಂಡಪ್ಪ ಎಸ್. ಪಯ್ಯಡೆ ಮತ್ತು ಅವರ ತಂಡದ ಸಂಪೂರ್ಣ ಸಹಕಾರ ದೊರೆತಿದೆ. ಅವರ ಸಹಕಾರದಿಂದ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಸಾಧ್ಯವಾಯಿತು ಎನ್ನಲು ಸಂತೋಷವಾಗುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮೂರು ವರ್ಷಗಳ ಕಾರ್ಯಾವಧಿಯನ್ನು ಯಶಸ್ವಿಗೊಳಿಸಿದ ಕಾರ್ಯಾಧ್ಯಕ್ಷೆ ವಿನೋದಾ ಡಿ. ಶೆಟ್ಟಿ ಮತ್ತು ದೇವದಾಸ್ ಶೆಟ್ಟಿ ದಂಪತಿಯನ್ನು ಸಮಿತಿಯ ವತಿಯಿಂದ ಗೌರವ ಪೂರ್ವಕವಾಗಿ ಸಮಿತಿಯ ಕಾರ್ಯಾಧ್ಯಕ್ಷ ವಿಜಯ ಆರ್. ಭಂಡಾರಿ, ಸಂಚಾಲಕ ಮನೋಹರ ಎನ್. ಶೆಟ್ಟಿ, ಸಮನ್ವಯಕರಾದ ಮುಂಡಪ್ಪ ಎಸ್. ಪಯ್ಯಡೆ, ಗೌರವ ಪ್ರಧಾನ ಕಾರ್ಯದರ್ಶಿ ಎಂ. ಜಿ. ಶೆಟ್ಟಿ, ಕೋಶಾಧಿಕಾರಿ ಕೊಂಡಾಡಿ ಪ್ರೇಮನಾಥ್ ಶೆಟ್ಟಿ, ಉಪಾಧ್ಯಕ್ಷ ರವೀಂದ್ರ ಎಸ್. ಶೆಟ್ಟಿ, ಜತೆ ಕಾರ್ಯದರ್ಶಿ ಗಂಗಾಧರ ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಕಾಶ್ ಎಸ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಪ್ರವೀಣ್ ಆರ್. ಶೆಟ್ಟಿ ಶಿಮಂತೂರು, ಶಿಕ್ಷಣ ಮ+ತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಪ್ರಭಾಕರ ಶೆಟ್ಟಿ, ಸದಸ್ಯ ನೋಂದಣಿ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ವಿಜಯ ಶೆಟ್ಟಿ, ಉಪಾಧ್ಯಕ್ಷೆ ವಿನೋದಾ ಅಶೋಕ್ ಶೆಟ್ಟಿ, ಕಾರ್ಯದರ್ಶಿ ಶೈಲಜಾ ಅಮರ್‌ನಾಥ್ ಶೆಟ್ಟಿ, ಕೋಶಾಧಿಕಾರಿ ರೇಖಾ ಶೆಟ್ಟಿ, ಜತೆ ಕಾರ್ಯದರ್ಶಿ ಸುನೀತಾ ಎನ್. ಹೆಗ್ಡೆ, ಜತೆ ಕೋಶಾಧಿಕಾರಿ ಜ್ಯೋತಿ ಶೆಟ್ಟಿ, ನಿಕಟಪೂರ್ವ ಕಾರ್ಯಾಧ್ಯಕ್ಷೆ ಪದ್ಮಾವತಿ ಬಿ. ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳೊಂದಿಗೆ ಸಮ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ ಉಪಸ್ಥಿತರಿದ್ದು, ಅವರನ್ನು ಗೌರವಿಸಲಾಯಿತು. ಅವೆನ್ಯೂ ಹೊಟೇಲ್‌ನ ಮಾಲಕ ರಘುರಾಮ ಶೆಟ್ಟಿ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅನಂತರ ಸಾಂಸ್ಕೃತಿಕ ಕಾರ್ಯಕ್ರಮವಾಗಿ ದಾಂಡಿಯಾ ರಾಸ್, ನೃತ್ಯ ವೈವಿಧ್ಯ ನಡೆಯಿತು. ರಘುನಾಥ ಎನ್. ಶೆಟ್ಟಿ, ಪ್ರವೀಣ್ ಆರ್. ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು.