ಡೊಂಬಿವಲಿ ಪೂರ್ವದ ಎಂಐಡಿಸಿಯ ಪೆಂಡಾರRರ್ ಕಾಲೇಜು ಎದುರುಗಡೆಯಿರುವ ರೋಟರಿ ಕ್ಲಬ್ ಸಭಾಗೃಹದಲ್ಲಿ ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ವಾರ್ಷಿಕ ಶೈಕ್ಷಣಿಕ ದತ್ತು ಸ್ವೀಕಾರ ಮತ್ತು ಮಹಿಳಾ ವಿಭಾಗದ ಆಟಿಡೊಂಜಿ ದಿನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Advertisement
ಸುಧಾಕರ ಶೆಟ್ಟಿ ಅವರ ಪುತ್ರನ ವತಿಯಿಂದ ಇಂದು ಸಂಘಕ್ಕೆ 25 ಸಾವಿರ ರೂ. ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದು ಇತರರರಿಗೆ ಮಾದರಿಯಾಗಲಿ. ಸಂಘದಿಂದ ನೆರವು ಪಡೆದ ಸಮಾಜದ ಮಕ್ಕಳು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಿ ಸಮಾಜದ ಹಾಗೂ ಸಂಘದ ಋಣ ತೀರಿಸುವ ಕಾರ್ಯದಲ್ಲೂ ತೊಡಗಬೇಕು. ಬಂಟರ ಸಂಘವು ಇಂದು ದಾನಿಗಳ ಸಹಕಾರ, ಪ್ರೋತ್ಸಾಹದಿಂದ ಸಮಾಜದ ಆರ್ಥಿಕ ವಾಗಿ ಹಿಂದುಳಿದವರನ್ನು ಗುರುತಿಸಿ, ಶಿಕ್ಷಣ, ಆರೋಗ್ಯ, ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ವಿಶೇಷ ಯೋಗದಾನ ನೀಡುತ್ತಿದೆ. ಡೊಂಬಿವಲಿ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯ-ಸದಸ್ಯೆಯರ ಒಗ್ಗಟ್ಟು, ಒಮ್ಮತದ ಗುಣದಿಂದ ಇಂತಹ ಕಾರ್ಯಕ್ರಮ ಸಾಕಾರಗೊಳ್ಳಲು ಸಾಧ್ಯವಾಗುತ್ತಿದೆ ಎಂದು ಅವರು ಹೇಳಿದರು.
ಬಂಟರ ಸಂಘ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್ ಶೆಟ್ಟಿ ಅವರು ಮಾತನಾಡಿ, ಡೊಂಬಿವಲಿ ಪ್ರಾದೇಶಿಕ ಸಮಿತಿಯು ಇತರ ಪ್ರಾದೇಶಿಕ ಸಮಿತಿಗಳಿಗೆ ಮಾದರಿಯಾಗುವ ರೀತಿಯಲ್ಲಿ ಸಮಾಜ ಸೇವೆಯಲ್ಲಿ ತೊಡಗಿದೆ. ಆರ್ಥಿಕವಾಗಿ ಹಿಂದುಳಿದವರನ್ನು ಗುರುತಿಸಿ ಅವರಿಗೆ ಸಹಾಯಹಸ್ತ ನೀಡುವುದು ದೇವರು ಮೆಚ್ಚು ವಂಥಹ ಕಾರ್ಯವಾಗಿದೆ. ಇಂದು ಮಹಿಳೆಯರು ವಿವಿಧ ಖಾದ್ಯ ಪದಾರ್ಥಗಳನ್ನು ತಯಾರಿಸಿ ತಂದು ಪ್ರದರ್ಶಿಸಿರುವುದು ಸಂತೋಷದ ವಿಷಯ. ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಾಗ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿದಂತಾಗುತ್ತದೆ. ಸಂಘದ ಪ್ರತಿಯೊಂದು ಯೋಜನೆಗಳಿಗೆ ಪ್ರಾದೇಶಿಕ ಸಮಿತಿಗಳ ಪ್ರೋತ್ಸಾಹ, ಸಹಕಾರ ಸದಾಯಿರಲಿ ಎಂದರು.
Related Articles
ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಕಲ್ಲಡ್ಕ ಕರುಣಾಕರ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಕೃಷಿ¡ ಶೆಟ್ಟಿ, ಆಟಿ ತಿಂಗಳ ಆಚರಣೆಯ ಬಗ್ಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಸುಜಾತಾ ಶೆಟ್ಟಿ ಪುತ್ರನ ವತಿಯಿಂದ ಬಂಟರ ಸಂಘಕ್ಕೆ 25 ಸಾವಿರ ರೂ. ದೇಣಿಗೆಯನ್ನು ನೀಡಿದರು. ಕಾರ್ಯದರ್ಶಿ ದಿನೇಶ್ ಶೆಟ್ಟಿ ಅವರ ವತಿಯಿಂದ ಮಹಿಳೆಯರಿಗೆ ವಿಶೇಷ ಬಹುಮಾನ ನೀಡಲಾಯಿತು. ಅಶೋಕ್ ಶೆಟ್ಟಿ ಮುಂಡ್ಕೂರು, ಸುಧಾಕರ ಶೆಟ್ಟಿ, ದಿನೇಶ್ ಶೆಟ್ಟಿ ಅವರನ್ನು ಸಮಿತಿಯ ವತಿಯಿಂದ ವಿಶೇಷವಾಗಿ ಸತ್ಕರಿಸಲಾಯಿತು.
Advertisement
ಆಟಿಕಳಂಜ ಪ್ರಾತ್ಯಕ್ಷಿಕೆ, ವಿವಿಧ ನೃತ್ಯ ಹಾಗೂ ಗಣೇಶ್ ಎರ್ಮಾಳ್ ಅವರಿಂದ ಸಂಗೀತ ರಸಮಂಜರಿ ನಡೆಯಿತು. ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಉಪ ಕಾರ್ಯಾಧ್ಯಕ್ಷ ಸುಕುಮಾರ್ ಎನ್. ಶೆಟ್ಟಿ, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಮಂಜುಳಾ ಶೆಟ್ಟಿ, ಮಹಿಳಾ ವಿಭಾಗದ ಕೋಶಾಧಿಕಾರಿ ಸುಜಾತಾ ಶೆಟ್ಟಿ, ಕಾರ್ಯದರ್ಶಿ ಯೋಗಿನಿ ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿಸಿದರು. ಸುನಂದಾ ಶೆಟ್ಟಿ ಮತ್ತು ಬಳಗದವರು ಪ್ರಾರ್ಥನೆಗೈದರು. ಯೋಗಿನಿ ಶೆಟ್ಟಿ ಮತ್ತು ಸುನಂದಾ ಶೆಟ್ಟಿ ಅವರು ಪಾಡªನ ಹಾಡಿದರು. ಸುಕುಮಾರ್ ಎನ್. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ದಿನೇಶ್ ಶೆಟ್ಟಿ ವಂದಿಸಿದರು.
ವೇದಿಕೆಯಲ್ಲಿ ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಚಂದ್ರಹಾಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್ ಎಸ್. ಶೆಟ್ಟಿ, ಡೊಂಬಿವಲಿ ಪ್ರಾದೇಶಿಕ ಸಮಿತಿಯ ಸಂಚಾಲಕ ರಾಜೀವ್ ಎಂ. ಭಂಡಾರಿ, ಉಪ ಕಾರ್ಯಾಧ್ಯಕ್ಷರುಗಳಾದ ಸುಕುಮಾರ್ ಶೆಟ್ಟಿ, ಆನಂದ್ ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಡೊಂಬಿವಲಿ ಸಮಿತಿಯ ಕಾರ್ಯಾಧ್ಯಕ್ಷ ಪ್ರಭಾಕರ ಆರ್. ಶೆಟ್ಟಿ, ಸಮಿತಿಯ ಗೌರವ ಕಾರ್ಯದರ್ಶಿ ದಿನೇಶ್ ಎನ್. ಶೆಟ್ಟಿ, ಜತೆ ಕಾರ್ಯದರ್ಶಿ ತಿಮ್ಮಪ್ಪ ಶೆಟ್ಟಿ, ಕೋಶಾಧಿಕಾರಿ ಜಯಕರ ಶೆಟ್ಟಿ ಪಡುಕುಡೂರು, ಜತೆ ಕೋಶಾಧಿಕಾರಿ ಉಮೇಶ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿಜಯ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ಮಹಿಳಾ ವಿಭಾಗದ ಜತೆ ಕಾರ್ಯದರ್ಶಿ ಸುಮತಾ ರೈ, ಜತೆ ಕೋಶಾಧಿಕಾರಿ ಶೋಭಾ ರೈ ಮೊದಲಾದವರು ಉಪಸ್ಥಿತರಿದ್ದರು.
ಸಮಿತಿಯ ವತಿಯಿಂದ ಪ್ರಸ್ತುತ ವರ್ಷದ ಆರ್ಥಿಕವಾಗಿ ಹಿಂದುಳಿದ ಸಮಾಜದ 40 ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಶೈಕ್ಷಣಿಕವಾಗಿ ದತ್ತು ಸ್ವೀಕರಿಸಲಾಯಿತು. ಡೊಂಬಿವಲಿ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ ನಡೆಯಿತು. ಡೊಂಬಿವಲಿ ಪರಿಸರದ ಸಮಾಜದ ಮಹಿಳೆಯರು ವಿವಿಧ ಬಗೆಯ ಆಟಿ ತಿಂಗಳ ವಿಶೇಷತೆಯನ್ನು ಸಾರುವ ಖಾಧ್ಯ ಪದಾರ್ಥಗಳನ್ನು ತಯಾರಿಸಿ ಪ್ರದರ್ಶಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು. ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು, ಸದಸ್ಯ-ಸದಸ್ಯೆಯರು ಯಶಸ್ಸಿಗೆ ಸಹಕರಿಸಿದರು. ಸಮಾಜದವರು, ವಿವಿಧ ಸಂಘಟನೆ ಗಳ ಪದಾಧಿ ಕಾರಿಗಳು, ತುಳು-ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಶಿಕ್ಷಣ ಪ್ರತಿಯೊಬ್ಬರ ಹಕ್ಕಾಗಿದೆ. ಡೊಂಬಿವಲಿ ಪ್ರಾದೇಶಿಕ ಸಮಿತಿಯು ಆರ್ಥಿಕವಾಗಿ ಹಿಂದುಳಿದವರನ್ನು ಗುರುತಿಸಿ ಅವರಿಗೆ ಸಹಾಯಹಸ್ತ ನೀಡುತ್ತಿರುವುದು ಅಭಿನಂದನೀಯ. ಇಂದು ಮಹಿಳೆಯರು ವಿವಿಧ ಖಾದ್ಯ ಪದಾರ್ಥಗಳನ್ನು ತಂದು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ಅಭಿನಂದನೀಯ. ಇಂತಹ ಕಾರ್ಯಕ್ರಮಗಳು ಕಿರಿಯರಿಗೆ ಮಾದರಿಯಾಗಿರಲಿ. ಸಂಘದ ಪ್ರತಿಯೊಂದು ಯೋಜನೆಗಳ ಪ್ರಯೋಜನವನ್ನು ಸಮಾಜ ಬಾಂಧವರು ಪಡೆದುಕೊಳ್ಳಬೇಕು. ಸಮಿತಿಯ ಮಹಿಳಾ ವಿಭಾಗದ ನನ್ನ ಪ್ರೋತ್ಸಾಹ, ಸಹಕಾರ ಸದಾಯಿದೆ.-ರಂಜನಿ ಸುಧಾಕರ ಹೆಗ್ಡೆ ,
ಕಾರ್ಯಾಧ್ಯಕ್ಷೆ : ಬಂಟರ ಸಂಘ ಮಹಿಳಾ ವಿಭಾಗ ಶಿಕ್ಷಣ ನೀಡುವುದು ನಮ್ಮ ಧರ್ಮ
ಹಿಂದಿನ ಕಾಲದ ಕಷ್ಟದ ದಿನಗಳನ್ನು ನೆನಪಿಸಿಕೊಂಡಾಗ ಭಯವಾಗುತ್ತದೆ. ಆದರೆ ಇಂದು ಅದು ಸಂಪೂರ್ಣವಾಗಿ ಬದಲಾವಣೆಯಾಗಿದೆ. ಸಂಘದ ಸಮಾಜಪರ ಯೋಜನೆಗಳನ್ನು ಪ್ರಾದೇಶಿಕ ಸಮಿತಿಗಳು ಸಮಾಜ ಬಾಂಧವರ ಮನೆ-ಮನಗಳಿಗೆ ತಲುಪಿಸುವಲ್ಲಿ ಯಶಸ್ವಿಯಾಗುತ್ತಿರುವುದು ಅಭಿನಂದನೀಯ. ಮಕ್ಕಳಿಗೆ ಶಿಕ್ಷಣವನ್ನು ನೀಡುವುದು ನಮ್ಮ ಧರ್ಮ. ಇಂದು ಸುಮಾರು 45 ಮಕ್ಕಳನ್ನು ಶೈಕ್ಷಣಿಕವಾಗಿ ದತ್ತು ಸ್ವೀಕರಿಸಿರುವುದು ಸಾಮಾನ್ಯ ಮಾತಲ್ಲ. ದಾನಿಗಳ ಸಹಕಾರದಿಂದ ಸಮಿತಿಯಿಂದ ಇನ್ನಷ್ಟು ಇಂತಹ ಸೇವೆ ನಿರಂತರವಾಗಿ ನಡೆಯುತ್ತಿರಲಿ ಎಂದು ಸರಳಾ ಬಿ. ಶೆಟ್ಟಿ (ಮಾಜಿ ಕಾರ್ಯಾಧ್ಯಕ್ಷೆ : ಮಹಿಳಾ ವಿಭಾಗ ಬೋಂಬೆ ಬಂಟ್ಸ್ ಅಸೋಸಿಯೇಶನ್) ಹೇಳಿದರು. ಮಹಿಳೆಯರು ಕಷ್ಟಪಟ್ಟು ಉತ್ತಮವಾದ ತಿಂಡಿ-ತಿನಿಸುಗಳೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದಕ್ಕೆ ನಿಮಗೆ ವಂದನೆಗಳು. ಇಂದು ಉತ್ತಮವಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದೇನೆ ಎನ್ನಲು ಹೆಮ್ಮೆಯಾಗುತ್ತಿದೆ. ಪ್ರತಿಯೋರ್ವ ವ್ಯಕ್ತಿ ತನ್ನ ತಪ್ಪನ್ನು ತಿದ್ದಿಕೊಂಡು ಮುಂದುವರಿದಾಗ ಮಾತ್ರ ಆತನಿಂದ ನಿಜವಾದ ಸೇವೆಯನ್ನು ಮಾಡಲು ಸಾಧ್ಯವಾಗುತ್ತದೆ. ನಾವೆಲ್ಲರೂ ಒಂದಾಗಿ ಒಗ್ಗಟ್ಟಿನಿಂದ, ಒಮ್ಮತದಿಂದ ಆರ್ಥಿಕವಾಗಿ ಹಿಂದುಳಿದವರ ಸೇವೆಗೆ ಮುಂದಾಗೋಣ.
-ವಿನುತಾ ಶೆಟ್ಟಿ ,
ಕಾರ್ಯಾಧ್ಯಕ್ಷೆ : ಮುಲುಂಡ್ ಬಂಟ್ಸ್ ಮಹಿಳಾ ವಿಭಾಗ