Advertisement

ಬಂಟರ ಸಂಘ ಮುಂಬಯಿ: ವೈ.ಜಿ.ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ ಪ್ರದಾನ

03:42 PM Oct 04, 2018 | Team Udayavani |

ಮುಂಬಯಿ: ಬಂಟರ ಸಂಘ ಮುಂಬಯಿ ಇದರ 90ನೇ ವಾರ್ಷಿಕ ಮಹಾಸಭೆಯು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಜರಗಿತು.

Advertisement

ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರ ಅಧ್ಯಕ್ಷತೆ ಯಲ್ಲಿ ನಡೆದ ಸಮಾರಂಭದಲ್ಲಿ ಸಂಘದ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನಿಸಲಾಯಿತು. ಬಂಟರವಾಣಿಯ ಮಾಜಿ ಸಂಪಾದಕ, ಶಿಕ್ಷಕ ವೈ. ಜಿ. ಶೆಟ್ಟಿ ಅವರ ನೆನಪಿಗಾಗಿ ವೈ. ಜಿ. ಶೆಟ್ಟಿ ಅಭಿಮಾನಿ ಬಳಗ ಸಂಘದ ಮೂಲಕ ಪ್ರತೀ ವರ್ಷ ನೀಡುವ ವೈ. ಜಿ. ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿಯನ್ನು ಈ ಬಾರಿ ಸಂಘದ ಉನ್ನತ ಶಿಕ್ಷಣ ಸಂಸ್ಥೆಯ ಉಮಾಕೃಷ್ಣ ಶೆಟ್ಟಿ ಕಾಲೇಜಿನ ನಿರ್ದೇಶಕ ಡಾ| ಕೃಷ್ಣ ಕೆ. ಶೆಟ್ಟಿ ಅವರು ಪ್ರದಾನಿಸಲಾಯಿತು. ಸಂಘದ ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ  ಪ್ರಶಸ್ತಿ ಘೋಷಿಸಿದರು.

ಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳ ಪ್ರಶಸ್ತಿ ಪುರಸ್ಕೃತರ ಸಮ್ಮಾನ ಪತ್ರ ವಾಚಿಸಿದರು. ಈ ಸಂದರ್ಭದಲ್ಲಿ ವೈ. ಜಿ. ಶೆಟ್ಟಿ ಅಭಿಮಾನಿ ಬಳಗದ ಉಪಾಧ್ಯಕ್ಷ ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ ಕಡಂದಲೆ ಪರಾರಿ, ಬಂಟರವಾಣಿಯ ಕಾರ್ಯಾಧ್ಯಕ್ಷ ಶಾಂತಾರಾಮ ಬಿ. ಶೆಟ್ಟಿ, ಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳ, ಸಂಪಾದಕ ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಧ್ಯಕ್ಷರು ಪ್ರಶಸ್ತಿ  ಪ್ರದಾನಿಸಿದರು. ಡಾ| ಕೃಷ್ಣ ಶೆಟ್ಟಿ ಅವರ ತಾಯಿ ಉಪಸ್ಥಿತರಿದ್ದರು.

ಪ್ರತಿ ವರ್ಷದ ಎಸ್‌ಎಸ್‌ಸಿ ಮತ್ತು ಎಚ್‌ಎಸ್‌ಸಿ ವಿಜ್ಞಾನ, ವಾಣಿಜ್ಯ, ಕಲಾ ಪರೀಕ್ಷೆಗಳಲ್ಲಿ ಅತ್ಯುತ್ಛ ಅಂಕ ಪಡೆದ ವಿದ್ಯಾರ್ಥಿಗಳಿಗೆ ದಿ| ರಮಾನಾಥ ಪಯ್ಯಡೆ ಅವರ ಕುಟುಂಬದ ಡಾ| ಪಿ. ವಿ. ಶೆಟ್ಟಿ, ಪಯ್ಯಡೆ ಸಹೋದರರು ನೀಡುವ ನಗದು ಬಹುಮಾನವನ್ನು ಪ್ರದಾನಿಸಲಾಯಿತು. ಪಯ್ಯಡೆ ಸಹೋದರರಾದ ಪದ್ಮನಾಭ ಎಸ್‌. ಪಯ್ಯಡೆ, ಮುಂಡಪ್ಪ ಎಸ್‌. ಪಯ್ಯಡೆ ಅವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಯಾದಿಯನ್ನು ಚಂದ್ರ ಹಾಸ ಕೆ. ಶೆಟ್ಟಿ ಓದಿದರು.

ದಿ| ಶಂಕರ್‌ ಎ. ಶೆಟ್ಟಿ ವಿಕಾಸ್‌ ಹೊಟೇಲ್‌ ಮಾಟುಂಗ ಇವರ ಸ್ಮರಣಾರ್ಥ ಅವರ ಪತ್ನಿ ತೇಜಮಂಜರಿ ಶೆಟ್ಟಿ ಎಂಜಿನೀಯರಿಂಗ್‌ ವಿದ್ಯಾರ್ಥಿಗಳಿಗೆ ನೀಡುವ ನಗದು ಬಹುಮಾನವನ್ನು ಆದಿತ್ಯ ರವಿ ಶೆಟ್ಟಿ ಅವರಿಗೆ ಪ್ರದಾನಿಸಲಾಯಿತು. ತೇಜಮಂಜರಿ ಶೆಟ್ಟಿ ಅವರ ಕುಟುಂಬಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಂಘದ ವಿಶ್ವಸ್ಥರು, ಮಾಜಿ ಕಾರ್ಯಾಧ್ಯಕ್ಷರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯರು,ಯುವ ವಿಭಾಗ, ಪ್ರಾದೇಶಿಕ ಸಮಿತಿಗಳು, ಪ್ರಾದೇಶಿಕ ಸಮನ್ವಯಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳನ್ನು ಗೌರವಿಸಲಾಯಿತು.

Advertisement

ವೇದಿಕೆಯಲ್ಲಿ ಬಂಟರ ಸಂಘ ಮುಂಬಯಿ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಭೋಜ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ, ಜೊತೆ ಕೋಶಾಧಿಕಾರಿ ಗುಣಪಾಲ್‌ ಆರ್‌. ಶೆಟ್ಟಿ ಐಕಳ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಸಂಘದ ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ನಗ್ರಿಗುತ್ತು ವಿವೇಕ್‌ ಶೆಟ್ಟಿ, ಸಂಘದ ನೂತನ ಶಿಕ್ಷಣ ಯೋಜನೆಯ ಕಾರ್ಯಾಧ್ಯಕ್ಷ ಮುಂಡಪ್ಪ ಎಸ್‌. ಪಯ್ಯಡೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್‌ ವಿ. ಶೆಟ್ಟಿ, ಸಂಘದ ಮಾಜಿ ಕಾರ್ಯಾಧ್ಯಕ್ಷರುಗಳಾದ ನ್ಯಾಯವಾದಿ ಆರ್‌. ಸಿ. ಶೆಟ್ಟಿ, ಭುಜಂಗ ಎಂ. ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷ ಮತ್ತು ವಿಶ್ವಸ್ಥ ಬಿ. ವಿವೇಕ್‌ ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷರುಗಳಾದ ಸುಧಾಕರ ಎಸ್‌. ಹೆಗ್ಡೆ, ಮಾಜಿ ಕಾರ್ಯಾಧ್ಯಕ್ಷ ಮತ್ತು ವಿಶ್ವಸ್ಥ ಕರ್ನಿರೆ ವಿಶ್ವನಾಥ ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ   ಉಪಸ್ಥಿತರಿದ್ದರು. 

ಚಿತ್ರ-ವರದಿ : ಪ್ರೇಮನಾಥ ಶೆಟ್ಟಿ  ಮುಂಡ್ಕೂರು

Advertisement

Udayavani is now on Telegram. Click here to join our channel and stay updated with the latest news.

Next