Advertisement

ಬಂಟರ ಸಂಘ ಮುಂಬಯಿ: ವಿವಿಧ ಪ್ರಾದೇಶಿಕ ಸಮಿತಿಗಳ ನೂತನ ಪದಾಧಿಕಾರಿಗಳ ಪದಗ್ರಹಣ

11:16 AM Apr 01, 2021 | Team Udayavani |

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಅಂಧೇರಿ-ಬಾಂದ್ರಾ ಮತ್ತು ಸಿಟಿ ಪ್ರಾದೇಶಿಕ ಸಮಿತಿ ಹಾಗೂ ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಮಾ. 14 ರಂದು ಬೆಳಗ್ಗೆ ಕುರ್ಲಾ ಪೂರ್ವದ ಬಂಟರ

Advertisement

ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು. ಸಂಘದ ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ

ಅವರು ದೀಪ ಪ್ರಜ್ವಲಿಸಿ ಸಮಾರಂಭ ಉದ್ಘಾಟಿಸಿದರು. ಈ ಮೂರು ಪ್ರಾದೇಶಿಕ ಸಮಿತಿಗಳ ಸಮನ್ವಯಕರಾದ ಗುಣಪಾಲ್‌ ಶೆಟ್ಟಿ ಐಕಳ, ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್‌. ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಹರೀಶ್‌ ಶೆಟ್ಟಿ, ಜತೆ ಕೋಶಾಧಿಕಾರಿ ಮುಂಡಪ್ಪ  ಎಸ್‌. ಪಯ್ಯಡೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಾಗರ್‌ ಡಿ. ಶೆಟ್ಟಿ, ಸಿಟಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಶಿವರಾಮ ಎನ್‌. ಶೆಟ್ಟಿ, ನಿರ್ಗಮನ ಅಧ್ಯಕ್ಷ ನಲ್ಯಗುತ್ತು ಪ್ರಕಾಶ್‌ ಟಿ. ಶೆಟ್ಟಿ ಉಪಸ್ಥಿತರಿದ್ದರು.

ಸಿಟಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆ ಸುಚಿತಾ ಕೆ. ಶೆಟ್ಟಿ, ನಿರ್ಗಮನ ಕಾರ್ಯಾಧ್ಯಕ್ಷೆ ಅನಿತಾ ಅಶೋಕ್‌ ಶೆಟ್ಟಿ, ಯುವ ವಿಭಾಗದ ನೂತನ ಕಾರ್ಯಾಧ್ಯಕ್ಷ ಸಾಗರ್‌ ಶೆಟ್ಟಿ, ನಿರ್ಗಮನ ಕಾರ್ಯಾಧ್ಯಕ್ಷ ಪ್ರತೀಕ್‌ ಶೆಟ್ಟಿ, ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿಯ ನೂತನ ಕಾರ್ಯಾಧ್ಯಕ್ಷ ಹರೀಶ್‌ ಶೆಟ್ಟಿ, ನಿರ್ಗಮನ ಕಾರ್ಯಾಧ್ಯಕ್ಷ ಸಿಎ ವಿಶ್ವನಾಥ ಶೆಟ್ಟಿ, ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆ ಸಂಗೀತಾ ಶೆಟ್ಟಿ, ಯುವ ವಿಭಾಗದ ನೂತನ ಕಾರ್ಯಾಧ್ಯಕ್ಷ ವಿಕಾಸ್‌ ರೈ, ನಿರ್ಗಮನ ಕಾರ್ಯಾಧ್ಯಕ್ಷ ತಾರಾನಾಥ ಶೆಟ್ಟಿ ಮತ್ತು ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರ ಶೆಟ್ಟಿ, ನಿರ್ಗಮನ ಕಾರ್ಯಾಧ್ಯಕ್ಷ ಡಾ| ಆರ್‌. ಕೆ. ಶೆಟ್ಟಿ, ಮಹಿಳಾ

ವಿಭಾಗದ ನೂತನ ಕಾರ್ಯಾಧ್ಯಕ್ಷೆ ವಜ್ರಾ ಕೆ. ಪೂಂಜಾ, ನಿರ್ಗಮನ ಕಾರ್ಯಾಧ್ಯಕ್ಷೆ ವನಿತಾ ನೋಂಡ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿಷೇಕ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next