Advertisement
ಜ. 28ರಂದು ಚಿಂಚ್ವಾಡ್‌ನ ಶ್ರೀ ರಾಮಕೃಷ್ಣ ಮೋರೆ ಸಭಾಗೃಹದಲ್ಲಿ ನಡೆದ ಬಂಟರ ಸಂಘ ಪಿಂಪ್ರಿ ಚಿಂಚಾÌಡ್ ಇದರ 23 ನೇ ವಾರ್ಷಿಕೋತ್ಸವದ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಇವರು, ನಮ್ಮ ಸಮಾಜ ಉದ್ಯಮ, ವೈದ್ಯಕೀಯ ಸೇವೆ, ಎಂಜಿನಿಯರ್ ಮುಂತಾದ ಕ್ಷೇತ್ರದಲ್ಲಿ ಗಮನೀಯ ಸಾಧನೆ ಮಾಡಿದರೂ ಆಡಳಿತದಂತಹ ಐಎಎಸ್, ಐಪಿಎಸ್ ನಂತಹ ಸೇವೆಗಳಲ್ಲಿ ಸಾಧನೆ ಕಡಿಮೆಯಾಗಿದೆ. ಇಂತಹ ಕ್ಷೇತ್ರಗಳಲ್ಲಿ ಯುವ ಪೀಳಿಗೆಗೆ ಪ್ರೋತ್ಸಾಹ ಅಗತ್ಯವಾಗಿದೆ. ಅದೇ ರೀತಿ ನಮ್ಮ ಸಮಾಜದ ಮೇಲೆ ಧಾರ್ಮಿಕ, ಸಾಮಾಜಿಕ, ಆರ್ಥಿಕ ಶೋಷಣೆ ನಿರಂತರವಾಗಿ ನಡೆಯುತ್ತಿದ್ದು ಆತಂಕದ ವಿಚಾರವಾಗಿದೆ. ಇದರ ಬಗ್ಗೆ ನಮ್ಮ ಸಮಾಜಕ್ಕೆ ಜಾಗೃತಿ ಮೂಡಿಸುವ ಅಗತ್ಯತೆಯಿದೆ. ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆಯಿಂದಾಗಿ ನಮ್ಮ ಯುವ ಪೀಳಿಗೆ ನಮ್ಮ ತುಳುನಾಡಿನ ಮೂಲ ಸಂಸ್ಕೃತಿಯನ್ನು, ಭಾಷೆಯನ್ನೂ ಮರೆಯುತ್ತಿದ್ದು ದೊಡ್ಡ ದುರಂತವಾಗಿದ್ದು ನಮ್ಮ ಮೌಲಿಕ ಸಂಸ್ಕೃತಿ, ಸಂಪ್ರದಾಯ , ತುಳು ಭಾಷೆಗಳನ್ನು, ಮಾತಾಪಿತರಿಗೆ, ಗುರುಹಿರಿಯರಿಗೆ ಗೌರವ ನೀಡುವ ಬಗ್ಗೆ, ಜೀವನ ಮೌಲ್ಯಗಳ ಪಾಠಗಳನ್ನು ಬಾಲ್ಯದಿಂದಲೇ ಮಕ್ಕಳಿಗೆ ಅರುಹುವ ಕಾರ್ಯವನ್ನು ಮಾಡಬೇಕಾಗಿದೆ. ನಮ್ಮ ಸಮಾಜದಲ್ಲಿ ನಡೆಯುವ ದುಂದುವೆಚ್ಚದ ವಿವಾಹದಂತಹ ಕಾರ್ಯಗಳಿಗೆ ಕಡಿವಾಣ ಹಾಕಬೇಕಾಗಿದೆ. ತುಳುಭಾಷೆಯನ್ನು ಮಕ್ಕಳಿಗೆ ಕಲಿಸುವ, ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ, ಕ್ರೀಡೆ- ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ, ಸಾಮಾಜಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಸಂಘ ಸಂಸ್ಥೆಗಳ ಮುಖ್ಯ ದಾಯಿತ್ವವಾಗಬೇಕಾಗಿದೆ. ಪಿಂಪ್ರಿ ಚಿಂಚಾÌಡ್ ಬಂಟರ ಸಂಘದ ನಾಡು, ನುಡಿ, ಸಂಸ್ಕೃತಿಯನ್ನು ಉಳಿಸಿ ಪೋಷಿಸುವ ಕಾರ್ಯ ಅಭಿನಂದನೀಯವಾಗಿದ್ದು ಇಂದಿನ ಕಾರ್ಯಕ್ರಮ ಇದಕ್ಕೆ ಸಾಕ್ಷಿಯಾಗಿದೆ ಎಂದರು.
Related Articles
Advertisement
ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಅತಿಥಿ ಗಣ್ಯರ ಹಸ್ತದಿಂದ ಟ್ರೋಪಿಗಳನ್ನು ವಿತರಿಸಲಾಯಿತು. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು, ವಿವಿಧ ಕ್ಷೇತ್ರಗಳ ಸಾಧಕರನ್ನು ಸತ್ಕರಿಸಲಾಯಿತು. ರಾಷ್ಟ್ರಮಟ್ಟದ ಬಂಟ ಸಮಾಜದ ಫುಟ್ಬಾಲ್ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜಿಸಿದ ಯುವ ವಿಭಾಗದ ಸರ್ವ ಸದಸ್ಯರನ್ನು ಸಂಘದ ವತಿಯಿಂದ ಸತ್ಕರಿಸಲಾಯಿತು. ಅತಿಥಿ-ಗಣ್ಯರನ್ನು ಶಾಲು ಹೊದೆಸಿ, ಸ್ಮರಣಿಕೆ, ಪುಷ್ಪಗುಚ್ಚವನ್ನಿತ್ತು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳನ್ನು ಗೌರವಿಸಲಾಯಿತು.
ಉಪಾಧ್ಯಕ್ಷ ವಿಜಯ್ ಶೆಟ್ಟಿ ಬೋರ್ಕಟ್ಟೆ ಸ್ವಾಗತಿಸಿದರು. ನಿಧೀಶ್ ಶೆಟ್ಟಿ ನಿಟ್ಟೆ ಮತ್ತು ಸುಧಾಕರ ಶೆಟ್ಟಿ ಪೆಲತ್ತೂರು ಅತಿಥಿಗಳನ್ನು ಪರಿಚಯಿಸಿದರು. ಕು| ರಿಕ್ಷಿತಾ ಶೆಟ್ಟಿ ಮತ್ತು ಸುಪ್ರಿಯಾ ಶೆಟ್ಟಿ ಕ್ರೀಡಾಕೂಟದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ತಾರಾ ಜೆ. ಶೆಟ್ಟಿ ಹಸ್ತಾ ಪ್ರಕಾಶ್ ಶೆಟ್ಟಿ ಅವರನ್ನು ಪರಿಚಯಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷ ವಿಶ್ವನಾಥ ಡಿ. ಶೆಟ್ಟಿ ಮತ್ತು ಸಭಾ ಕಾರ್ಯಕ್ರಮವನ್ನು ಸುಧಾಕರ ಶೆಟ್ಟಿ ಪೆಲತ್ತೂರು ನಿರೂಪಿಸಿದರು. ಜತೆ ಕಾರ್ಯದರ್ಶಿ ನಿತಿನ್ ಶೆಟ್ಟಿ ನಿಟ್ಟೆ ವಂದಿಸಿದರು.
ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಸಂತೋಷ್ ಶೆಟ್ಟಿ ಪೆರ್ಡೂರು ಇವರ ನೇತೃತ್ವದಲ್ಲಿ ವಿವಿಧ ವಿನೋದಾವಳಿಗಳು ಪ್ರದರ್ಶನಗೊಂಡಿತು. ಸದಸ್ಯರುಗಳಿಂದ ವೈವಿಧ್ಯಮಯ ನೃತ್ಯ ಪ್ರದರ್ಶನ ಗಳು, ಸಂಘದ ಮಹಿಳಾ ವಿಭಾಗದಿಂದ ಪ್ರಸ್ತುತ ಪಡಿಸಿದ ನೃತ್ಯರೂಪಕ, ಕಿರುನಾಟಕಗಳು ರಂಜಿಸಿತು. ಕೊನೆಯಲ್ಲಿ ಭೋಜನದ ವ್ಯವಸ್ಥೆ ಯನ್ನು ಆಯೋಜಿಸಲಾಗಿತ್ತು. ಸಂಘದ ಮಾಜಿ ಅಧ್ಯಕ್ಷರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿ ಗಳು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಸಂಘದ ಕಾರ್ಯ ಕಾರಿ ಸಮಿತಿ, ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸದಸ್ಯರು ಯಶಸ್ಸಿಗೆ ಸಹಕರಿಸಿದರು.
ನಾನು ಸಂಘದ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡು ಹಲವಾರು ನಿರೀಕ್ಷೆಗಳನ್ನು ಹೊಂದಿ¨ªೆ. ಆದರೂ ಸಾಧ್ಯವಾದಷ್ಟು ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಆರೋಗ್ಯದ ಬಗ್ಗೆ ಕಾಳಜಿ ಮೂಡಿಸುವ ಕಾರ್ಯಕ್ರಮ, ಯುವ ವಿಭಾಗವನ್ನು ಪ್ರೋತ್ಸಾಹಿಸಿ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟದ ಆಯೋಜನೆ ಸೇರಿದಂತೆ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿ ಸಂಘದ ಸೇವೆ ಸಲ್ಲಿಸಿದ ತೃಪ್ತಿ ನನಗಿದೆ. ಸಂಘದ ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸಲು ಸಂಘದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗ, ದಾನಿಗಳು ಹಾಗೂ ಸಮಾಜ ಬಾಂಧವರು ಉತ್ತಮ ಸಹಕಾರ ನೀಡಿದ್ದು ಅವರೆಲ್ಲರಿಗೂ ಕೃತಜ್ಞತೆಗಳು. ಮುಂದೆ ಶಾಶ್ವತ ವಿದ್ಯಾ ನಿಧಿಯೊಂದನ್ನು ಮಾಡುವ ಯೋಜನೆಯಿದ್ದು ಇದರೊಂದಿಗೆ ಇನ್ನಷ್ಟು ಸಾಮಾಜಿಕ, ಆರೋಗ್ಯಕ್ಕೆ ಸಂಬಂಧಿಸಿದ ಕಾರ್ಯಗಳನ್ನು ತನ್ನ ಅವಧಿಯಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಸಮಾಜ-ಬಾಂಧವರೆಲ್ಲರ ಸಹಕಾರ ಅಗತ್ಯ – ಕಟ್ಟಿಂಗೇರಿಮನೆ ಮಹೇಶ್ ಹೆಗ್ಡೆ (ಅಧ್ಯಕ್ಷರು : ಪಿಂಪ್ರಿ-ಚಿಂಚಾÌಡ್ ಬಂಟ್ಸ್ ಸಂಘ). ಚಿತ್ರ-ವರದಿ : ಕಿರಣ್ ಬಿ. ರೈ ಕರ್ನೂರು