ಪುಣೆ: ಪಿಂಪ್ರಿ -ಚಿಂಚ್ವಾಡ್ ಬಂಟರ ಸಂಘದ 23 ನೇ ವಾರ್ಷಿಕೋತ್ಸವ ಸಮಾರಂಭವು ಜ.28 ರಂದು ನಗರದ ರಾಮಕೃಷ್ಣ ಮೋರೆ ಸಭಾಗೃಹ ಚಿಂಚ್ವಾಡ್ ಇಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಸಂಘದ ಅಧ್ಯಕ್ಷರಾದ ಕಟ್ಟಿಂಗೇರಿಮನೆ ಮಹೇಶ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಜ್ಞಾನಭಾರತಿ ಆಧ್ಯಾತ್ಮಿಕ ವೇದಿಕೆ ಮುಂಬಯಿ ಇದರ ಅಧ್ಯಕ್ಷರಾದ ಹಾಗೂ ಮುಲುಂಡ್ ಬಂಟ್ಸ್ ಇದರ ಮಾಜಿ ಅಧ್ಯಕ್ಷರಾಗಿರುವ ಡಾ| ಸತ್ಯಪ್ರಕಾಶ್ ಶೆಟ್ಟಿ ಹಾಗೂ ಡಾ| ಸಂಗೀತಾ ಸತ್ಯಪ್ರಕಾಶ್ ದಂಪತಿಗಳನ್ನು ಹಾಗೂ ಮುಂಬಯಿಯ ಬಹುಮುಖ ಪ್ರತಿಭೆ ಕು| ಹಸ್ತಾ ಪ್ರಕಾಶ್ ಶೆಟ್ಟಿ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ಪುಷ್ಪಗುತ್ಛಗಳನ್ನು ನೀಡಿ ಸಂಘದ ವತಿಯಿಂದ ಗೌರವಿವಿಸಿ ಸಮ್ಮಾನಿಸಲಾಯಿತು.
ಈ ಸಂದರ್ಭ ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ವಿಜಯ್ ಎಸ್. ಶೆಟ್ಟಿ ಬೋರ್ಕಟ್ಟೆ, ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ಬಜಗೋಳಿ, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಕುರ್ಕಾಲ್, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಕಾರ್ಯಾಧ್ಯಕ್ಷ ಡಾ| ವಿನಯ್ ಶೆಟ್ಟಿ ಕೆಂಜೂರು, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ಸುಧಾಕರ ಶೆಟ್ಟಿ ಪೆಲತ್ತೂರು ಮೇಲ್ಮನೆ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್ ಶೆಟ್ಟಿ ಪೆರ್ಡೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತನುಜಾ ಎ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯದರ್ಶಿ ಸ್ಮಿತಾ ಎಂ. ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಜಿತ್ ಶೆಟ್ಟಿಮುಂಡ್ಕೂರು ಉಪಸ್ಥಿತರಿದ್ದರು.
ನಿಧೀಶ್ ಶೆಟ್ಟಿ, ಸುಧಾಕರ ಶೆಟ್ಟಿ ಪೆಲತ್ತೂರು ಹಾಗೂ ತಾರಾ ಜೆ. ಶೆಟ್ಟಿ ಸಾಧಕರನ್ನು ಪರಿಚಯಿಸಿದರು. ಉಪಾಧ್ಯಕ್ಷ ವಿಜಯ್ ಶೆಟ್ಟಿ ಬೋರ್ಕಟ್ಟೆ ಸ್ವಾಗತಿಸಿದರು. ಸುಧಾಕರ ಶೆಟ್ಟಿ ಪೆಲತ್ತೂರು ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಜತೆ ಕಾರ್ಯದರ್ಶಿ ನಿತಿನ್ ಶೆಟ್ಟಿ ನಿಟ್ಟೆ ವಂದಿಸಿದರು.
ಚಿತ್ರ-ವರದಿ : ಕಿರಣ್ ಬಿ. ರೈ ಕರ್ನೂರು