Advertisement

ಬಂಟರ ಸಂಘದ “ಕ್ರೀಡೋತ್ಸವ-2020′ಸಮಾರೋಪ: ಸಮ್ಮಾನ

06:30 PM Feb 11, 2020 | Suhan S |

ಮುಂಬಯಿ, ಫೆ. 10: ಬಂಟರ ಸಂಘ ಮುಂಬಯಿ ಇದರ ಕ್ರೀಡಾ ಸಮಿತಿಯ 33 ನೇ ವಾರ್ಷಿಕ ಕ್ರೀಡಾ ಕೂಟವು ಕಾಂದಿವಲಿ ಪಶ್ಚಿಮದ ಪೊಯಿಸಾರ್‌ ಜಿಮ್ಖಾನದ ನೇತಾಜಿ ಸುಭಾಶ್ಚಂದ್ರ ಬೋಸ್‌ ಕ್ರೀಡಾಂಗಣದಲ್ಲಿ ಜರಗಿತು.

Advertisement

ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರ ಅಧ್ಯಕ್ಷತೆಯಲ್ಲಿ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮಹಾರಾಷ್ಟ್ರ ರಾಜ್ಯ ಸರಕಾರದ ಪ್ರತಿಷ್ಠಿತ ಶಿವಛತ್ರಪತಿ ಪ್ರಶಸ್ತಿ ಪುರಸ್ಕೃತ ಕಬಡ್ಡಿಪಟು, ಬಂಟರ ಸಂಘದ ಕ್ರೀಡಾಕೂಟದ ಮುಖ್ಯಸ್ಥ, ಸಂಘದ ನೂತನ ಶಿಕ್ಷಣ ಯೋಜನಾ ಸಮಿತಿಯ ಕಾರ್ಯದರ್ಶಿ ಜಯ ಎ. ಶೆಟ್ಟಿ ಅವರನ್ನು ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಶಾಲು ಹೊದೆಸಿ, ಪುಷ್ಪಗುತ್ಛ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿದರು. ಸಂಘದ ಜತೆ ಕೋಶಾಧಿಕಾರಿ ಗುಣಪಾಲ್‌ ಶೆಟ್ಟಿ ಐಕಳ ಅವರು ಜಯ ಎ. ಶೆಟ್ಟಿ ಅವರನ್ನು ಪರಿಚಯಿಸಿ ಅಭಿನಂದಿಸಿದರು. ಮುಖ್ಯ ಅತಿಥಿ ಕುಸುಮೋಧರ ಡಿ. ಶೆಟ್ಟಿ ಚೆಲ್ಲಡ್ಕ ಇವರನ್ನು ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಸಂಘದ ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ವಿಠಲ್‌ ಎಸ್‌. ಆಳ್ವ, ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಭೋಜ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್‌ ಆರ್‌. ಶೆಟ್ಟಿ ಐಕಳ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ, ಯುವವಿಭಾಗದ ಕಾರ್ಯಾಧ್ಯಕ್ಷ ಶರತ್‌ ವಿ. ಶೆಟ್ಟಿ ಅವರು ಶಾಲು ಹೊದೆಸಿ, ಪುಷ್ಪಗುತ್ಛ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿದರು.

ಅತಿಥಿ ಪೊಯಿಸಾರ್‌ ಜಿಮ್ಖಾನದ ಉಪಾಧ್ಯಕ್ಷ ಕರುಣಾಕರ ಎಸ್‌. ಶೆಟ್ಟಿ ಅವರನ್ನು ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಮತ್ತು ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ವಿಠಲ್‌ ಎಸ್‌. ಆಳ್ವ ಅವರು ಸಮ್ಮಾನಿಸಿದರು. ಕ್ರೀಡಾಕೂಟಕ್ಕೆ ಪ್ರಾಯೋಜಕರಾಗಿ ಸಹಕರಿಸಿದ ಎಲ್ಲರನ್ನು ಗೌರವಿಸಲಾಯಿತು. ಸಂಘದ ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ವಿಠಲ್‌ ಎಸ್‌. ಆಳ್ವ ಅವರು ಸ್ವಾಗತಿಸಿದರು.

ವೇದಿಕೆಯಲ್ಲಿ ಸಂಘದ ಅಧ್ಯಕ್ಷರೊಂದಿಗೆ ಅತಿಥಿ-ಗಣ್ಯರು, ಸಂಘದ ಪದಾಧಿಕಾರಿಗಳು ಹಾಗೂ ನಗ್ರಿಗುತ್ತು ವಿವೇಕ್‌ ಶೆಟ್ಟಿ, ಮುಂಡಪ್ಪ ಎಸ್‌. ಪಯ್ಯಡೆ, ಜಯ ಎ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ, ರವೀಂದ್ರ ಎಸ್‌. ಶೆಟ್ಟಿ, ಕರುಣಾಕರ ಎಸ್‌. ಶೆಟ್ಟಿ ಪೊಯಿಸಾರ್‌ ಜಿಮ್ಖಾನ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಮಹಾಪ್ರಬಂಧಕ ಪ್ರವೀಣ್‌ ಭೋಜ ಶೆಟ್ಟಿ ವರಂಗ, ಪ್ರಬಂಧಕ ಸುಕುಮಾರ್‌ ಶೆಟ್ಟಿ, ವೇಣುಗೋಪಾಲ್‌ ಶೆಟ್ಟಿ, ಕರುಣಾಕರ ಶೆಟ್ಟಿ ಕುಕ್ಕುಂದೂರು, ಸರಿತಾ ಶ್ರೀಕಾಂತ್‌ ಶೆಟ್ಟಿ, ಸುಮಾ ನವೀನ್‌ ಶೆಟ್ಟಿ, ರೋಹಿಣಿ ಕಿಶೋರ್‌ ಶೆಟ್ಟಿ, ದಿವ್ಯಾ ಸಂತೋಷ್‌ ಶೆಟ್ಟಿ, ಅನಿತಾ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಕ್ರೀಡೋತ್ಸವದ ಯಶಸ್ಸಿಗೆ ಸಹಕರಿಸಿದರು. ಬಂಟರವಾಣಿಯ ಗೌರವ ಸಂಪಾದಕ ಅಶೋಕ್‌ ಪಕ್ಕಳ ಅತಿಥಿಗಳನ್ನು ಪರಿಚಯಿಸಿ, ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಗೌರವ ಕೋಶಾಧಿಕಾರಿ ಪ್ರವೀಣ್‌ ಭೋಜ ಶೆಟ್ಟಿ ವಂದಿಸಿದರು.

 

Advertisement

ಚಿತ್ರ-ವರದಿ : ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು.

Advertisement

Udayavani is now on Telegram. Click here to join our channel and stay updated with the latest news.

Next