ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಎಂ.ಆರ್.ಜಿ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಇದೇ ವೇಳೆ ಅವರನ್ನು ಸಮ್ಮಾನಿಸಲಾಯಿತು.
ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಎ.ಜೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ| ಎ.ಜೆ. ಶೆಟ್ಟಿ, ಮುಂಬಯಿ ಹೇರಂಭ ಇಂಡಸ್ಟ್ರೀಸ್ ಸಂಸ್ಥೆಯ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ರವಿ ಎಸ್. ಶೆಟ್ಟಿ ಸಾಯಿರಾಧ ಮುಂಬಯಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ , ಮಾತೃ ಸಂಘದ ಉಪಾಧ್ಯಕ್ಷ ಎ. ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೆ.ಎಂ. ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್‌ಮೋಹನ್ ರೈ, ವಿಜಯ ಶೆಟ್ಟಿ ಮುಂಬಯಿ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಹುಬ್ಬಳ್ಳಿ – ಧಾರವಾಡ ಬಂಟರ ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ ಸುಗ್ಗಿ, ಬೆಂಗಳೂರು ಬಂಟರ ಸಂಘದ ಮಾಜಿ-ಅಧ್ಯಕ್ಷ ಉಪೇಂದ್ರ ಶೆಟ್ಟಿ, ಜಾಗತಿಕ ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ಸುಧೀರ್ ಶೆಟ್ಟಿ, ಆರ್ಕಿಟೆಕ್ಟ್ ಸನತ್ ಕುಮಾರ್ ಶೆಟ್ಟಿ, ಸುಪ್ರೀತ್ ಆಳ್ವ, ವಿನೋದ್ ಶೆಟ್ಟಿ, ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಎನ್. ರವಿರಾಜ್ ಶೆಟ್ಟಿ, ವಸಂತ ಶೆಟ್ಟಿ, ರತ್ನಾಕರ ಶೆಟ್ಟಿ, ಕರುಣಾಕರ ಶೆಟ್ಟಿ, ಮಾತೃಸಂಘದ ಆಡಳಿತಾಧಿಕಾರಿ ಉಮೇಶ್ ರೈ ಉಪಸ್ಥಿತರಿದ್ದರು.