Advertisement

ಬಂಟರ ಸಂಘ ಪಿಂಪ್ರಿ-ಚಿಂಚ್ವಾಡ್‌: 23ನೇ  ಮಹಾಸಭೆ

04:54 PM Sep 25, 2018 | Team Udayavani |

ಪುಣೆ: ಬಂಟರ ಸಂಘ ಪಿಂಪ್ರಿ- ಚಿಂಚ್ವಾಡ್‌ ಇದರ 23ನೇ ವಾರ್ಷಿಕ ಮಹಾಸಭೆ ಚಿಂಚಾÌಡ್‌ನ‌ಲ್ಲಿರುವ ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಮಿನಿ ಹಾಲ್‌ನಲ್ಲಿ  ಸಂಘದ ಅಧ್ಯಕ್ಷ ಕಟ್ಟಿಂಗೇರಿಮನೆ ಮಹೇಶ್‌ ಹೆಗ್ಡೆಯವರ  ಅಧ್ಯಕ್ಷತೆಯಲ್ಲಿ ನಡೆಯಿತು.

Advertisement

ವೇದಿಕೆಯಲ್ಲಿ  ಸಂಘದ ಅಧ್ಯಕ್ಷ ಕಟ್ಟಿಂಗೇರಿ ಮನೆ ಮಹೇಶ್‌ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ದಿನೇಶ್‌ ಶೆಟ್ಟಿ ಬಜಗೋಳಿ, ಕೋಶಾಧಿಕಾರಿ ಸಂತೋಷ್‌ ಶೆಟ್ಟಿ ಕುರ್ಕಾಲ್‌, ಉಪಾಧ್ಯಕ್ಷರಾದ  ವಿಜಯ್‌ ಶೆಟ್ಟಿ, ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷ ಸುಧಾಕರ ಶೆಟ್ಟಿ  ಪೆಲತ್ತೂರು ಮೇಲ್ಮನೆ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಸಂತೋಷ್‌  ಶೆಟ್ಟಿ ಪೆರ್ಡೂರು, ಯುವ ವಿಭಾಗದ ಕಾರ್ಯಾಧ್ಯಕ್ಷ ಅಜಿತ್‌ ಶೆಟ್ಟಿ ಮುಂಡ್ಕೂರು ಮತ್ತು  ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಅನುಜಾ ಶೆಟ್ಟಿ ಉಪಸ್ಥಿತರಿದ್ದರು.

ಸಂಘದ ಮಾಜಿ ಅಧ್ಯಕ್ಷ ವಿಶ್ವನಾಥ ಡಿ. ಶೆಟ್ಟಿ ಸ್ವಾಗತಿಸಿದರು. ಪ್ರಧಾನ  ಕಾರ್ಯದರ್ಶಿ ದಿನೇಶ್‌ ಶೆಟ್ಟಿ ಬಜಗೋಳಿ  ಸಂಘದ ಕಾರ್ಯ ಚಟುವಟಿಕೆಗಳ  ವರದಿಯನ್ನು ಸಭೆಯ ಮುಂದಿಟ್ಟರು. ಕೋಶಾಧಿಕಾರಿ ಸಂತೋಷ್‌ ಶೆಟ್ಟಿ ಕುರ್ಕಾಲ್‌  ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿ ಸಭೆಯ ಅನುಮೋದನೆ ಪಡೆದುಕೊಂಡರು. ಮುಂದಿನ ಅವಧಿಗೆ ಸಿಎ ಪವನ್‌ ಶೆಟ್ಟಿ ಅವರನ್ನು ಲೆಕ್ಕಪರಿಶೋಧಕರನ್ನಾಗಿ ಮುಂದುವರಿಸುವಂತೆ ನಿರ್ಣಯಿಸಲಾಯಿತು. ಈ ಸಂದರ್ಭ 2018-2020 ರ ಅವಧಿಗೆ ಸಂಘದ ನೂತನ ಅಧ್ಯಕ್ಷರನ್ನಾಗಿ ಹೊಟೇಲ್‌ ಉದ್ಯಮಿ ವಿಜಯ್‌ ಶೆಟ್ಟಿ, ಮಿಯ್ನಾರು ಬೋರ್ಕಟ್ಟೆ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ವಿಜಯ್‌ ಶೆಟ್ಟಿ ಅವರು ಮಾತನಾಡಿ, ಪಿಂಪ್ರಿ- ಚಿಂಚಾÌಡ್‌ ಬಂಟರ ಸಂಘದ ಸ್ಥಾಪನಾ ಸದಸ್ಯನಾಗಿದ್ದುಕೊಂಡು ಕಳೆದ 22 ವರ್ಷಗಳಿಂದಲೂ  ಸಂಘದೊಂದಿಗೆ ಸಕ್ರಿಯನಾಗಿದ್ದುಕೊಂಡು ಮೂರು ಬಾರಿ ಉಪಾಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದ ನನಗೆ ಪ್ರೀತಿ ವಿಶ್ವಾಸದೊಂದಿಗೆ  ಸಂಘದ ಜವಾಬ್ದಾರಿ ನೀಡಿದ ನಿಮಗೆಲ್ಲರಿಗೂ  ಕೃತಜ್ಞತೆ ಸಲ್ಲಿಸುತ್ತಾ ಮುಂದಿನ ಎರಡು ವರ್ಷಗಳ ಕಾಲ ಸಂಘದ ಎÇÉಾ ಕಾರ್ಯಕ್ರಮಗಳನ್ನು ಶಿಸ್ತುಬದ್ಧವಾಗಿ ನಡೆಸುತ್ತಾ ನಿಮ್ಮೆಲ್ಲರ ಪ್ರೀತಿ ವಿಶ್ವಾಸಗಳಿಗೆ ಚ್ಯುತಿ ಬಾರದಂತೆ ಸಂಘವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುವಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳುತ್ತೇನೆ. ಯಾವುದೇ ಕೆಲಸವನ್ನು ಒಬ್ಬನಿಂದ ಮಾಡಲು ಸಾಧ್ಯವಿಲ್ಲ. ಅದುದರಿಂದ ಸಂಘದೊಂದಿಗೆ ಪ್ರತಿಯೊಬ್ಬರೂ ನಮ್ಮದೇ ಸಂಘವೆಂಬ ನೆಲೆಯಲ್ಲಿ ಕೈಜೋಡಿಸಿ ಸಹಕಾರ ನೀಡಿ ಬೆಂಬಲಿಸಿ ಎಂದು ನುಡಿದು ನೂತನ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಯನ್ನು ಪ್ರಕಟಿಸಿ ಎಲ್ಲರನ್ನು ಅಭಿನಂದಿಸಿದರು.

ಸಂಘದ ಮಾಜಿ ಅಧ್ಯಕ್ಷರಾದ ಎರ್ಮಾಳ್‌ ನಾರಾಯಣ ಶೆಟ್ಟಿ ಅವರು ಮಾತನಾಡಿ,  ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷರಾದ ವಿಜಯ ಶೆಟ್ಟಿ ಮತ್ತು ಕಾರ್ಯಕಾರಿ ಸಮಿತಿಗೆ ಅಭಿನಂದನೆಗಳು. ಸಂಘದ ಹಿತದೃಷ್ಟಿಯಲ್ಲಿ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ತೊಡಗಿಸಿಕೊಂಡು ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಿ ಸಂಘದ ಯಶಸ್ಸಿಗೆ ಸಹಕರಿಸಿ ಎಂದರು.

Advertisement

ಸಂಘದ ಮಾಜಿ ಅಧ್ಯಕ್ಷ ವಿಶ್ವನಾಥ ಡಿ. ಶೆಟ್ಟಿ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಮಾಜಿ ಅಧ್ಯಕ್ಷ ಕೆ. ಪದ್ಮನಾಭ ಶೆಟ್ಟಿ ನೂತನ ಅಧ್ಯಕ್ಷ ವಿಜಯ್‌ ಶೆಟ್ಟಿ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಸೂಚಿಸಿದರು. ಉಪಸ್ಥಿತರಿದ್ದ ಎಲ್ಲ ಸದಸ್ಯರು ಸರ್ವಾನುಮತದಿಂದ ಅನುಮೋದಿಸಿದರು. ಸಂಘದ ಮಹಿಳಾ ವಿಭಾಗ ಹಾಗೂ ಯುವ ವಿಭಾಗವನ್ನೂ ರಚಿಸಲಾಯಿತು. 

ನೂತನವಾಗಿ ಆಯ್ಕೆಗೊಂಡ ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸದಸ್ಯರನ್ನು ಪುಷ್ಪಗುತ್ಛ ನೀಡಿ ಅಭಿನಂದಿಸಲಾಯಿತು. ನಿರ್ಗಮನ ಅಧ್ಯಕ್ಷರು ಹಾಗೂ ಸಂಘದ ಮಾಜ ಅಧ್ಯಕ್ಷರು ವಿಜಯ್‌ ಶೆಟ್ಟಿ ಅವರನ್ನು ಪುಷ್ಪಗುತ್ಛ ನೀಡಿ ಅಭಿನಂದಿಸಿದರು. ಸಭೆಯಲ್ಲಿ ಸಂಘದ  ಮಾಜಿ ಅಧ್ಯಕ್ಷರಾದ  ವಿಠಲ್‌ ಶೆಟ್ಟಿ, ಎರ್ಮಾಳ್‌  ವಿಶ್ವನಾಥ ಶೆಟ್ಟಿ, ಎರ್ಮಾಳ್‌  ಸೀತಾರಾಮ ಶೆಟ್ಟಿ, ಕೆ. ಪದ್ಮನಾಭ ಶೆಟ್ಟಿ, ಮಾಜಿ ನಗರಸೇವಕ ಜಗದೀಶ್‌ ಶೆಟ್ಟಿ ಉಪಸ್ಥಿತರಿದ್ದರು.  

ವಿಶ್ವನಾಥ ಡಿ.  ಶೆಟ್ಟಿ ಅವರು  ಕಾರ್ಯಕ್ರಮ ನಿರೂಪಿಸಿದರು. ನಿತಿನ್‌ ಶೆಟ್ಟಿ ನಿಟ್ಟೆ  ಅವರು ವಂದಿಸಿದರು.  ಸಭೆಯಲ್ಲಿ ಬಹು ಸಂಖ್ಯೆಯಲ್ಲಿ ಸದಸ್ಯ ಬಾಂಧವರು ಉಪಸ್ಥಿತರಿದ್ದರು.  

ಕಳೆದ ಎರಡು ವರ್ಷಗಳಿಂದ ನನ್ನ ಅಧಿಕಾರಾವಧಿಯಲ್ಲಿ ಸಂಘದ ಎÇÉಾ ಕಾರ್ಯಕ್ರಮಗಳಿಗೂ ಪ್ರೋತ್ಸಾಹ ನೀಡಿದ ಸಂಘದ ಮಾಜಿ ಅಧ್ಯಕ್ಷರುಗಳಿಗೆ, ಸಂಘದ ಕಾರ್ಯಕಾರಿ ಸಮಿತಿಗೆ, ಮಹಿಳಾ ವಿಭಾಗ ಹಾಗೂ ಯುವ ವಿಭಾಗ ಮತ್ತು ಸರ್ವ ಸದಸ್ಯರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಹಲವಾರು ಸಮಾಜಮುಖೀ ಕಾರ್ಯಕ್ರಮಗಳು ನಮ್ಮ ಅವಧಿಯಲ್ಲಿ ನಡೆದಿರುವುದು ಸಂತಸವನ್ನು ನೀಡಿದೆ. ಇದೀಗ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ವಿಜಯ್‌ ಶೆಟ್ಟಿಯವರಿಗೆ ಹಾಗೂ ಸದಸ್ಯರಿಗೆ ಅಭಿನಂದನೆಗಳು. ಮುಂದೆಯೂ ಎಲ್ಲರೂ ಇದೇ ರೀತಿಯ ಸಹಕಾರವನ್ನು ನೀಡಿ ಸಂಘವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವಲ್ಲಿ ಸಹಕಾರ ನೀಡಬೇಕು .
-ಕಟ್ಟಿಂಗೇರಿಮನೆ ಮಹೇಶ್‌ ಹೆಗ್ಡೆ , ನಿರ್ಗಮನ ಅಧ್ಯಕ್ಷರು : ಬಂಟರ ಸಂಘ ಪಿಂಪ್ರಿ-ಚಿಂಚಾÌಡ್‌

ಚಿತ್ರ-ವರದಿ: ಕಿರಣ್‌ ಬಿ. ರೈ ಕರ್ನೂರು

Advertisement

Udayavani is now on Telegram. Click here to join our channel and stay updated with the latest news.

Next