ಮುಂಬಯಿ: ಮುಂಬಯಿಯಾದ್ಯಂತ ಗಣೇಶಚತುರ್ಥಿ ಹಬ್ಬವನ್ನು ಧಾರ್ಮಿಕ ಶ್ರದ್ಧಾಭಕ್ತಿಯೊಂದಿಗೆ ಶಾಸ್ತ್ರೋಕ್ತವಾಗಿ ಆಚರಿಸಲಾಗುತ್ತಿದ್ದು, ಮಹಾ ನಗರದಲ್ಲಿನ ವಿವಿಧ ತುಳುಕನ್ನಡಿಗ ಸಂಸ್ಥೆಗಳು ವಾರ್ಷಿಕ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ಭಕ್ತಿಪೂರ್ವಕವಾಗಿ ಆಚರಿಸಿದವು.
ಬಂಟರ ಸಂಘ ಮುಂಬಯಿ ವತಿಯಿಂದ ಸಂಘದ ಆವರಣದಲ್ಲಿನ ಶ್ರೀ ಮಹಾವಿಷ್ಣು ಮಂದಿರದ ಜ್ಞಾನ ಮಂದಿರದಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಎಲ್.ಶೆಟ್ಟಿ ಮುಂದಾಳತ್ವ ಹಾಗೂ ಜ್ಞಾನ ಮಂದಿರ ಸಮಿತಿ ಕಾರ್ಯಾಧ್ಯಕ್ಷ ಬೊಳ್ನಾಡುಗುತ್ತು ಚಂದ್ರಹಾಸ ಎಂ.ರೈ ಸಾರಥ್ಯದಲ್ಲಿ ವಾರ್ಷಿಕ ಗಣೇಶೋತ್ಸವ ಅದ್ದೂರಿಯಾಗಿ ಆಚರಿಸಲ್ಪಟ್ಟಿತು.
ಮಂದಿರದ ಪ್ರಧಾನ ಆರ್ಚಕ ವಿದ್ವಾನ್ ಅರವಿಂದ ಬನ್ನಿಂತಾಯ ವಿವಿಧ ಪೂಜೆಗಳನ್ನು ವಿಧಿವತ್ತಾಗಿ ನಿರ್ವಹಿಸಿದರು. ಪೂರ್ವಾಹ್ನ ಗಣಹೋಮ ನೆರವೇರಿಸಿದರು. ಕುರ್ಲಾ ಭಾಂಡೂಪ್ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಸಿಎ ವಿಶ್ವನಾಥ ಶೆಟ್ಟಿ ಮತ್ತು ರಮ್ಯ ವಿಶ್ವನಾಥ್ ಶೆಟ್ಟಿ ಕುಟುಂಬ ಪೂಜಾವಿಧಿಗಳ ಯಜಮಾನತ್ವ ವಹಿಸಿದ್ದರು.
ಧಾರ್ಮಿಕ ಪೂಜಾ ಕಾರ್ಯಕ್ರಮಗಳಲ್ಲಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್.ಶೆಟ್ಟಿ , ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆ ಲತಾ ಪ್ರಭಾಕರ ಶೆಟ್ಟಿ, ಸಂಘದ ಉಪಾಧ್ಯಕ್ಷ ಪದ್ಮನಾಭ ಎಸ್.ಪಯ್ಯಡೆ, ಗೌ| ಪ್ರ| ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಹರೀಶ್ ವಾಸು ಶೆಟ್ಟಿ, ದಿವಾಕರ್ ಬಿ.ಶೆಟ್ಟಿ ಕುರ್ಲಾ, ಭರತ್ ಶೆಟ್ಟಿ, ಹರೀಶ್ ಶೆಟ್ಟಿ, ಯುವ ವಿಭಾಗದ ಶರತ್ ವಿ.ಶೆಟ್ಟಿ, ಪ್ರತೀಕ್ ಡಿ.ಶೆಟ್ಟಿ, ಬಂಟರ ಭವನದ ವ್ಯವಸ್ಥಾಪಕ ಪ್ರವೀಣ್ ಎಸ್.ಶೆಟ್ಟಿ ವಾರಂಗ ಮತ್ತಿತರ ಪದಾಧಿಕಾರಿಗಳು, ಸದಸ್ಯರು, ಭಕ್ತರು ಉಪಸ್ಥಿತರಿದ್ದರು.
ಚಿತ್ರ-ವರದಿ: ರೋನ್ಸ್ ಬಂಟ್ವಾಳ್