Advertisement

ಬಂಟರ ಭವನ: ಕಾಡಮಲ್ಲಿಗೆ ಯಕ್ಷಗಾನಕ್ಕೆ ಮುಹೂರ್ತ 

02:59 PM Sep 14, 2017 | Team Udayavani |

ಮುಂಬಯಿ: ಬಂಟರ ಸಂಘ ಮುಂಬಯಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಆಶ್ರಯ ದಲ್ಲಿ ಜರಗಲಿರುವ ಕಾಡಮಲ್ಲಿಗೆ ಯಕ್ಷ ಗಾನದ ಮುಹೂರ್ತ ಕಾರ್ಯಕ್ರಮವು ಕುರ್ಲಾ ಪೂರ್ವದ ಬಂಟರ ಸಂಘದ ಸಂಕುಲದಲ್ಲಿರುವ ಶ್ರೀ ಮಹಾವಿಷ್ಣು ಮಂದಿರದ ಸಭಾಂಗಣದಲ್ಲಿ ಜರಗಿತು.

Advertisement

ಸೆ. 23 ರಂದು ಅಪರಾಹ್ನ ಬಂಟರ ಸಂಘದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಸಂಘದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ ಕಾರ್ಯಾಧ್ಯಕ್ಷ ರವೀಂದ್ರನಾಥ್‌ ಎಂ. ಭಂಡಾರಿ ಅವರ ನೇತೃತ್ವದಲ್ಲಿ ಕಾಡಮಲ್ಲಿಗೆ ಯಕ್ಷಗಾನವು ಪ್ರದರ್ಶನಗೊಳ್ಳಲಿದೆ.

ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ, ಉಪಾಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಜತೆ ಕೋಶಾಧಿಕಾರಿ ಮಹೇಶ್‌ ಎಸ್‌. ಶೆಟ್ಟಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಸಂಚಾಲಕ ಬೆಳ್ಳಂಪಳ್ಳಿ ಬಾಲಕೃಷ್ಣ ಶೆಟ್ಟಿ, ಜ್ಞಾನಮಂದಿರ ಸಮಿತಿಯ ಕಾರ್ಯಾಧ್ಯಕ್ಷ ಬೊಳ್ನಾಡುಗುತ್ತು ಚಂದ್ರಹಾಸ ರೈ, ಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳ, ಜಗನ್ನಾಥ ರೈ, ಲತಾ ಪ್ರಭಾಕರ ಶೆಟ್ಟಿ, ಚಿತ್ರಾ ಆರ್‌. ಶೆಟ್ಟಿ, ದಿವಾಕರ ಶೆಟ್ಟಿ ಕುರ್ಲಾ, ಪ್ರಕಾಶ್‌ ಶೆಟ್ಟಿ ನಲ್ಯಗುತ್ತು, ನವೀನ್‌ ಶೆಟ್ಟಿ ಇನ್ನಬಾಳಿಕೆ, ಅಶೋಕ್‌ ಶೆಟ್ಟಿ ಕಾಪು, ಸೀತಾರಾಮ ಶೆಟ್ಟಿ, ಸುರೇಶ್‌ ಶೆಟ್ಟಿ ಮರಾಠ, ಕರ್ನೂರು ಮೋಹನ್‌ ರೈ ಮೊದಲಾದವರು ಉಪಸ್ಥಿತರಿದ್ದರು. 

ಚಿತ್ರ-ವರದಿ : ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

Advertisement

Udayavani is now on Telegram. Click here to join our channel and stay updated with the latest news.

Next