ಮುಂಬಯಿ: ಬಂಟರ ಸಂಘ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ 11ನೇ ವಾರ್ಷಿಕೋತ್ಸವ ಸಂಭ್ರಮವು ಸೆ. 16 ರಂದು ಕಾಂದಿವಲಿ ಠಾಕೂರ್ ಕಾಂಪ್ಲೆಕ್ಸ್‌ನ ಅವೆನ್ಯೂ ಹೊಟೇಲ್ ಸಭಾಂಗಣದಲ್ಲಿ ವೈವಿಧ್ಯ ಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಬಂಟರ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಗೋರೆಗಾಂವ್ ವಿವೇಕ್ ಕಾಲೇಜಿನ ಪ್ರಾಂಶುಪಾಲೆ ಡಾ| ವಿಜೇತಾ ಎಸ್. ಶೆಟ್ಟಿ, ಪತ್ತನಾಜೆ ತುಳು ಚಲನಚಿತ್ರದ ನಾಯಕಿ ರೇಷ್ಮಾ ಶೆಟ್ಟಿ, ಚಿತ್ರದ ನಿರ್ದೇಶಕ ತೋನ್ಸೆ ವಿಜಯಕುಮಾರ್ ಶೆಟ್ಟಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು.
ಸಮ್ಮಾನಕ್ಕೆ ಉತ್ತರಿಸಿದ ಕರ್ನಿರೆ ವಿಶ್ವನಾಥ ಶೆಟ್ಟಿ ಅವರು, ಪದ್ಮನಾಭ ಎಸ್. ಪಯ್ಯಡೆ, ಮುಂಡಪ್ಪ ಎಸ್. ಪಯ್ಯಡೆ ಅವರ ಮುಂದಾಳತ್ವದಲ್ಲಿ ಹಾಗೂ ಪ್ರಸ್ತುತ ಸಮಿತಿಯ ಕಾರ್ಯಾಧ್ಯಕ್ಷ ವಿಜಯ ಆರ್. ಭಂಡಾರಿ ಅವರ ನೇತೃತ್ವದಲ್ಲಿ ಮತ್ತು ಎಲ್ಲಾ ಪದಾಧಿಕಾರಿಗಳ ಸಹಕಾರದಿಂದ ಈ ಸಮಿತಿಯು ಅತ್ಯುತ್ತಮ ರೀತಿಯಲ್ಲಿ ಮುನ್ನಡೆಯುತ್ತಿದೆ. ವಿವಿಧ ಗಣ್ಯಾಥಿಗಣ್ಯರು ಸದಸ್ಯರಾಗಿರುವ ಈ ಸಮಿತಿಯು ಹಲವಾರು ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು ಯಶಸ್ವಿ ಯಾಗಿ ನೆರವೇರಿಸಿದೆ. ಶೈಕ್ಷಣಿಕ ದತ್ತು ಸ್ವೀಕಾರ, ವೈದ್ಯಕೀಯದಂತಹ ಹಲವಾರು ಸಮಾಜ ಮುಖೀ ಕಾರ್ಯಕ್ರಮಗಳಲ್ಲೂ ಈ ಸಮಿತಿಯು ಯಶಸ್ವಿಯಾಗಿ ಕಾರ್ಯಸಾಧನೆಗೈದಿದೆ. ವಿವಿಧ ಮಹಾನ್ ಉದ್ಯಮಿಗಳು ನೆಲೆಸಿರುವ ಈ ಪರಿಸರದಲ್ಲಿ ಮಹಾನಗರದ ಉಪನಗರ ದಲ್ಲೊಂದು ಸ್ಥಳೀಯ ರಿಗೆ ಶಿಕ್ಷಣ ಪಡೆಯಲು ಕಾಲೇಜೊಂದರ ಸ್ಥಾಪನೆಯಾಗಬೇಕು ಎಂದು ನುಡಿದು ಸಮ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರು.
ಇನ್ನೋರ್ವೆ ಸಮ್ಮಾನಿತೆ ಡಾ| ವಿಜೇತಾ ಎಸ್. ಶೆಟ್ಟಿ ಅವರು ಮಾತನಾಡಿ, ಬಂಟ ಸಮಾಜದಲ್ಲಿ ಹುಟ್ಟಿದ ನನಗೆ ಈ ಸಮ್ಮಾನ ಜೀವನದಲ್ಲಿ ಅಮೂಲ್ಯವಾಗಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆಗೈದ ನನಗೆ ಇಂದು ಪ್ರಾಂಶುಪಾಲೆ ಹುದ್ದೆಯಲ್ಲಿರಲು ಶಿಕ್ಷಣದ ಶ್ರೇಯಸ್ಸೆ ಕಾರಣವಾಗಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ದೇಶದ ಭವಿಷ್ಯದ ಪ್ರಜ್ಞಾವಂತ ನಾಗರಿಕರನ್ನಾಗಿ ಮಾಡುವ ಕರ್ತವ್ಯ ಎಲ್ಲಾ ಪಾಲಕರ ಮೇಲಿದೆ ಎಂದರು.
ಸಮಾರಂಭದಲ್ಲಿ ಪ್ರಾದೇಶಿಕ ಸಮಿತಿಯ ಸಂಚಾಲಕರಾಗಿ ಸದಾ ಸಮಿತಿಯಲ್ಲಿ ಸಕ್ರಿಯರಾಗಿರುವ ಮನೋಹರ ಎಸ್. ಶೆಟ್ಟಿ ಅವರನ್ನು ಜೀವಮಾನದ ಸಾಧನ ಪ್ರಶಸ್ತಿಯನ್ನು ಪ್ರದಾನಿಸಿ ಗೌರವಿಸಲಾಯಿತು. ಸಮಾರಂಭದ ವೇದಿಕೆಯಲ್ಲಿ ಡಾ| ಪಿ. ವಿ. ಶೆಟ್ಟಿ, ಸಂಘದ ಉಪಾಧ್ಯಕ್ಷ ಮುಂಡಪ್ಪ ಎಸ್. ಪಯ್ಯಡೆ, ಡಾ| ಸತೀಶ್ ಶೆಟ್ಟಿ, ಸಿಎ ಸುರೇಂದ್ರ ಶೆಟ್ಟಿ, ಐಕಳ ಹರೀಶ್ ಶೆಟ್ಟಿ, ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ, ಸಮಿತಿಯ ಗೌರವ ಕಾರ್ಯದರ್ಶಿ ನಿಟ್ಟೆ ಎಂ. ಜಿ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಡಿ. ಶೆಟ್ಟಿ ಮಹಿಳಾ, ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಪ್ರಭಾಕರ ಬಿ. ಶೆಟ್ಟಿ,ಯುವ ವಿಭಾಗದ ಕಾರ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ, ಗೌರವ ಕೋಶಾಧಿಕಾರಿ ಕೆ. ಪ್ರೇಮನಾಥ್ ಶೆಟ್ಟಿ, ಗೌರವ ಕಾರ್ಯದರ್ಶಿ ಎಂ. ಜಿ. ಶೆಟ್ಟಿ, ಉದ್ಯಮಿ ರಘುರಾಮ ಶೆಟ್ಟಿ, ಹರೀಶ್ ಶೆಟ್ಟಿ, ಜಯಶೀಲ ಶೆಟ್ಟಿ, ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಐ. ಆರ್. ಶೆಟ್ಟಿ, ಜತೆ ಕಾರ್ಯದರ್ಶಿ ಕಿಶೋರ್ ಕುಮಾರ್ ಕುತ್ಯಾರ್, ಜತೆ ಕೋಶಾಧಿಕಾರಿ ಮಹೇಶ್ ಎಸ್. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಸ್ಥಳೀಯ ಸಮಿತಿಯ ಉಪ ಕಾರ್ಯಾಧ್ಯಕ್ಷ ರವೀಂದ್ರ ಎಸ್. ಶೆಟ್ಟಿ, ಸ್ಥಳೀಯ ಸಮಿತಿಯ ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷೆ ಸುಚರಿತಾ ಶೆಟ್ಟಿ, ಜತೆ ಕಾರ್ಯದರ್ಶಿ ಗಂಗಾಧರ ಎ. ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಕಾಶ್ ಎ. ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ವಿಜಯ ಎನ್. ಶೆಟ್ಟಿ, ವೈದ್ಯಕೀಯ ಸಮಿತಿಯ ವಿಕಾಸ್ ಎಸ್. ಶೆಟ್ಟಿ, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ವಿನೋದಾ ಎ.ಶೆಟ್ಟಿ, ಕಾರ್ಯದರ್ಶಿ ಶೈಲಜಾ ಎ. ಶೆಟ್ಟಿ, ಜತೆ ಕಾರ್ಯದರ್ಶಿ ಸುನಿತಾ ಎನ್. ಹೆಗ್ಡೆ, ಸಾಂಸ್ಕೃತಿಕ ವಿಭಾಗದ ಸರಿತಾ ಎಂ. ಶೆಟ್ಟಿ, ಸಲಹೆಗಾರ್ತಿ ಪದ್ಮಾವತಿ ಬಿ. ಶೆಟ್ಟಿ, ಸಂಚಾಲಕಿ ಸವಿತಾ ಸಿ. ಶೆಟ್ಟಿ, ಕೋಶಾಧಿಕಾರಿ ರೇಖಾ ವೈ. ಶೆಟ್ಟಿ, ಜತೆ ಕೋಶಾಧಿಕಾರಿ ಜ್ಯೋತಿ ಪಿ. ಶೆಟ್ಟಿ, ಸದಸ್ಯತ್ವ ನೋಂದಾವಣೆ ಸಮಿತಿಯ ಸುಲತಾ ಎಸ್. ಶೆಟ್ಟಿ, ಸದಸ್ಯರು, ಸಲಹೆಗಾರರು, ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಚಿತ್ರ-ವರದಿ: ರಮೇಶ್ ಉದ್ಯಾವರ