ಡೊಂಬಿವಲಿ: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ವತಿಯಿಂದ ಶೈಕ್ಷಣಿಕ ದತ್ತು ಸ್ವೀಕಾರ ಹಾಗೂ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮವು ಆ. 7 ರಂದು ಅಪರಾಹ್ನ ಡೊಂಬಿವಲಿ ಪೂರ್ವದ, ಎಂಐಡಿಸಿ ಪೆಂಡಾರRರ್ ಕಾಲೇಜು ಎದುರುಗಡೆಯಿರುವ ರೋಟರಿ ಕ್ಲಬ್‌ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಇವರು ವಹಿಸಿದ್ದು, ಅತಿಥಿಗಳಾಗಿ ಮುಲುಂಡ್ ಬಂಟ್ಸ್ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನುತಾ ಎಸ್. ಶೆಟ್ಟಿ ಹಾಗೂ ಬೋಂಬೆ ಬಂಟ್ಸ್ ಅಸೋಸಿಯೇಶನ್ ಇದರ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಸರಳಾ ಬಿ. ಶೆಟ್ಟಿ ಇವರು ಉಪಸ್ಥಿತರಿದ್ದರು. ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿ ಶುಭಹಾರೈಸಿದರು.
ವೇದಿಕೆಯಲ್ಲಿ ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಚಂದ್ರಹಾಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್ ಎಸ್. ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಬಂಟರ ಸಂಘ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ, ಮಧ್ಯ ವಲಯ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಇಂದ್ರಾಳಿ ದಿವಾಕರ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಕಲ್ಲಡ್ಕ ಕರುಣಾಕರ ಶೆಟ್ಟಿ, ಸಂಚಾಲಕ ರಾಜೀವ್ ಎಂ. ಭಂಡಾರಿ, ಉಪ ಕಾರ್ಯಾಧ್ಯಕ್ಷರುಗಳಾದ ಸುಕುಮಾರ್ ಶೆಟ್ಟಿ, ಆನಂದ್ ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಡೊಂಬಿವಲಿ ಸಮಿತಿಯ ಕಾರ್ಯಾಧ್ಯಕ್ಷ ಪ್ರಭಾಕರ ಆರ್. ಶೆಟ್ಟಿ, ಸಮಿತಿಯ ಗೌರವ ಕಾರ್ಯದರ್ಶಿ ದಿನೇಶ್ ಎನ್. ಶೆಟ್ಟಿ, ಜತೆ ಕಾರ್ಯದರ್ಶಿ ತಿಮ್ಮಪ್ಪ ಶೆಟ್ಟಿ, ಕೋಶಾಧಿಕಾರಿ ಜಯಕರ ಶೆಟ್ಟಿ ಪಡುಕುಡೂರು, ಜತೆ ಕೋಶಾಧಿಕಾರಿ ಉಮೇಶ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿಜಯ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಕೃಷಿ¡ ಶೆಟ್ಟಿ, ಉಪ ಕಾರ್ಯಾಧ್ಯಕ್ಷೆ ಮಂಜುಳಾ ಶೆಟ್ಟಿ, ಕಾರ್ಯದರ್ಶಿ ಯೋಗಿನಿ ಶೆಟ್ಟಿ, ಉಪ ಕಾರ್ಯದರ್ಶಿ ಸುಮತಾ ರೈ, ಕೋಶಾಧಿಕಾರಿ ಸುಜಾತಾ ಶೆಟ್ಟಿ, ಉಪ ಕೋಶಾಧಿಕಾರಿ ಶೋಭಾ ರೈ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಮಿತಿಯ ವತಿಯಿಂದ ಪ್ರಸ್ತುತ ವರ್ಷದ ಆರ್ಥಿಕವಾಗಿ ಹಿಂದುಳಿದ ಸಮಾಜದ 40 ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಶೈಕ್ಷಣಿಕವಾಗಿ ದತ್ತು ಸ್ವೀಕರಿಸಲಾಯಿತು. ಡೊಂಬಿವಲಿ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ ನಡೆಯಿತು. ಡೊಂಬಿವಲಿ ಪರಿಸರದ ಸಮಾಜದ ಮಹಿಳೆಯರು ವಿವಿಧ ಬಗೆಯ ಆಟಿ ತಿಂಗಳ ವಿಶೇಷವನ್ನು ಸಾರುವ ಖಾದ್ಯಪದಾರ್ಥಗಳನ್ನು ತಯಾರಿಸಿ ಪ್ರದರ್ಶಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.
ಸಾಂಸ್ಕೃತಿಕ ಕಾರ್ಯಕ್ರಮವಾಗಿ ಗಣೇಶ್ ಎರ್ಮಾಳ್ ಹಾಗೂ ಬಳಗದವರಿಂದ ಸಂಗೀತ ರಸಮಂಜರಿ ನಡೆಯಿತು. ಅಲ್ಲದೆ ಮಹಿಳಾ ವಿಭಾಗದ ಸದಸ್ಯೆಯರು, ಮಕ್ಕಳಿಂದ ನೃತ್ಯ ವೈವಿಧ್ಯ, ಆಟಿ ಕಳೆಂಜ ಪ್ರಾತ್ಯಕ್ಷಿಕೆ ಪ್ರದರ್ಶನಗೊಂಡಿತು. ವಿಶೇಷ ಕಾರ್ಯಕ್ರಮವಾಗಿ ಡೊಂಬಿವಲಿ ಪರಿಸರದ ಸಮಾಜದ ಪುರುಷರಿಗಾಗಿ ತೆಂಗಿನಕಾಯಿ ಕಟ್ಟುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಇತರ ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು, ಸದಸ್ಯ-ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸಮಾಜ ಬಾಂಧವರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ತುಳು-ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.