ಡೊಂಬಿವಲಿ: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯು ಮಾ. 24ರಂದು ಸಂಜೆ 4 ರಿಂದ ಡೊಂಬಿವಲಿ ಪೂರ್ವದ ಪೆಂಡಾರ್ಕರ್ ಕಾಲೇಜಿನ ಎದುರುಗಡೆಯಿರುವ ರೋಟರಿ ಸಭಾಗೃಹದಲ್ಲಿ ನಡೆಯಿತು.
ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಲತಾ ಜಯರಾಮ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ನೇತ್ರತಜ್ಞ ಡಾ| ವರ್ಧಿಕ್ ಹೆಗ್ಡೆ ಮತ್ತು ಸೌಮ್ಯಾ ಹೆಗ್ಡೆ ದಂಪತಿಯನ್ನು ಸಮಿತಿಯ ವತಿಯಿಂದ ಗಣ್ಯರು ಸಮ್ಮಾನಿಸಿ ಗೌರವಿಸಿದರು. ಅಲ್ಲದೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಲತಾ ಜಯರಾಮ್ ಶೆಟ್ಟಿ ಹಾಗೂ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಉದ್ಯಮಿ ಜ್ಯೋತಿ ಆರ್. ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಸಮಿತಿಯ ಎಲ್ಲಾ ಕಾರ್ಯಕ್ರಮಗಳಿಗೆ ವಿಶೇಷವಾಗಿ ಸಹಕರಿಸುತ್ತಿರುವ ಧರ್ಮದರ್ಶಿ ಅಶೋಕ್ ದಾಸು ಶೆಟ್ಟಿ, ಅಶೋಕ್ ಶೆಟ್ಟಿ ಮುಂಡ್ಕೂರು, ನಿತೇಶ್ ಶೆಟ್ಟಿ, ಪ್ರಭಾಕರ ಶೆಟ್ಟಿ ಅವರನ್ನು ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳ ವಿಜೇತರನ್ನು ಅಭಿನಂದಿಸಲಾಯಿತು.
ಡೊಂಬಿವಲಿ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು, ಹಾಗೂ ಮಧ್ಯ ವಲಯ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಇಂದ್ರಾಳಿ ದಿವಾಕರ ಶೆಟ್ಟಿ, ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಕಲ್ಲಡ್ಕ ಕರುಣಾಕರ ಶೆಟ್ಟಿ, ಸಂಚಾಲಕ ರಾಜೀವ್ ಭಂಡಾರಿ, ಕಾರ್ಯದರ್ಶಿ ದಿನೇಶ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಕೃಷಿ¡ ಎಂ. ಶೆಟ್ಟಿ, ಉಪ ಕಾರ್ಯಾಧ್ಯಕ್ಷೆ ಮಂಜುಳಾ ಶೆಟ್ಟಿ, ಕಾರ್ಯದರ್ಶಿ ಯೋಗಿನಿ ಶೆಟ್ಟಿ, ಜತೆ
ಕಾರ್ಯದರ್ಶಿ ಸುಮತಾ ರೈ, ಕೋಶಾಧಿಕಾರಿ ಸುಜಾತಾ ಶೆಟ್ಟಿ, ಜತೆ ಕೋಶಾಧಿಕಾರಿ ಶೋಭಾ ರೈ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷೆ ಪ್ರತಿಭಾ ಶೆಟ್ಟಿ ಹಾಗೂ ಸಮಿತಿಯ ಇತರ ಪದಾಧಿಕಾರಿಗಳು, ಕಾರ್ಯಕಾರಿಸಮಿತಿ ಸದಸ್ಯರುಉಪಸ್ಥಿತರಿದ್ದರು.
ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಕೃಷಿ¡ ಮುರಳಿ ಶೆಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾ ವಿಕವಾಗಿ ಮಾತನಾಡಿದರು. ಮಂಜುಳಾ ಶೆಟ್ಟಿ, ಸುಜಾತಾ ಶೆಟ್ಟಿ, ಸಮತಾ ರೈ ಅವರು ಅತಿಥಿಗಳನ್ನು ಪರಿಚಯಿಸಿದರು. ಯೋಗಿನಿ ಶೆಟ್ಟಿ ಅವರು ವಿವಿಧ ಸ್ಪರ್ಧೆಗಳ ವಿಜೇತರ ಯಾದಿಯನ್ನು ಓದಿದರು. ಸುನಂದಾ ಶೆಟ್ಟಿ, ಸುನೀತಾ ಶೆಟ್ಟಿ ಅವರು ಪ್ರಾರ್ಥನೆಗೈದರು. ಹರಿಣಿ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಯೋಗಿನಿ ಶೆಟ್ಟಿ ಅವರು ವಂದಿಸಿದರು.