ಮುಂಬಯಿ: ಬಂಟರ ಸಂಘ ಮುಂಬಯಿ ವತಿಯಿಂದ ಸಂಘದ ಆವರಣದಲ್ಲಿನ ಶ್ರೀ ಮಹಾವಿಷ್ಣು ಮಂದಿರದಲ್ಲಿ ಜ್ಞಾನ ಮಂದಿರದಲ್ಲೂ ಈ ಬಾರಿಯೂ ವಾರ್ಷಿಕ ಗಣೇಶೋತ್ಸವ 5 ದಿನಗಳ ಕಾಲ ಅದ್ದೂರಿಯಾಗಿ ನಡೆದು, ಕನ್ಯಾ ಸಂಕ್ರಮಣ ಮತ್ತು ದೂರ್ವಾಷ್ಟಮಿ ದಿನವಾದ ಸೆ. 17 ರಂದು ತುಳುನಾಡ ಸಂಸ್ಕೃತಿ, ಸಂಸ್ಕಾರವನ್ನು ಬಿಂಬಿಸುವ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ದೂರಿ ಮೆರವಣಿಗೆಯ ಮೂಲಕ ವಿಸರ್ಜಿಸಲಾಯಿತು.
ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರ ಮುಂದಾಳತ್ವ ಹಾಗೂ ಸಂಘದ ಜ್ಞಾನ ಮಂದಿರ ಸಮಿತಿಯ ಕಾರ್ಯಧ್ಯಕ್ಷ ರವೀಂದ್ರ ಎಂ. ಭಂಡಾರಿ ಸಾರಥ್ಯದಲ್ಲಿ ವಾರ್ಷಿಕ ಗಣೇಶೋತ್ಸವ ಅದ್ದೂರಿಯಾಗಿ ಆಚರಿಸಲ್ಪಟ್ಟಿತು. ಮಂದಿರದ ಪ್ರಧಾನ ಅರ್ಚಕ ವಿದ್ವಾನ್ ಅರವಿಂದ ಬನ್ನಿಂತಾಯ ಪೂಜಾಧಿಗಳನ್ನು ನೆರವೇರಿಸಿ ತೀರ್ಥಪ್ರಸಾದ ವಿತರಿಸಿ ಅನುಗ್ರಹಿಸಿದರು.
ಸೋಮವಾರ ಸಂಘದ ಕುರ್ಲಾ-ಭಾಂಡೂಪ್ ಮತ್ತು ಸಿಟಿ ಪ್ರಾದೇಶಿಕ ಸಮಿತಿಗಳ ಸೇವೆಗಳೊಂದಿಗೆ ಸಾರ್ವಜನಿಕ ಗಣಹೋಮ, ಅನ್ನಸಂತರ್ಪಣೆ, ಇನ್ನಿತರ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ವಿದ್ವಾನ್ ಕೈರಬೆಟ್ಟು ವಿಶ್ವನಾಥ ಭಟ್ ಅವರಿಂದ “ಶ್ಯಮಂತಕ ಮಣಿ’ ಹರಿಕಥಾ ಕಾಲಕ್ಷೇಪ ಹಾಗೂ ಮಹಿಳಾ ವಿಭಾಗದ ಸದಸ್ಯೆಯರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಬಂಟರ ಸಂಘ ಮುಂಬಯಿ ಇದರ ವಿಶ್ವಸ್ಥ ಸದಸ್ಯರು, ಸಂಘದ ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್ ಬಿ. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್ ಶೆಟ್ಟಿ ಐಕಳ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ್ ಹೆಗ್ಡೆ, ಯುವ ವಿಭಾಗಧ್ಯಕ್ಷ ಶರತ್ ವಿಜಯ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ವಿವಿಧ ಪ್ರಾದೇಶಿಕ ವಿಭಾಗೀಯ ಸಮಿತಿಗಳ ಮುಖ್ಯಸ್ಥರು, ಪದಾಧಿಕಾರಿಗಳು, ಸದಸ್ಯರು, ಬಂಟರ ಭವನದ ಪ್ರಬಂಧಕ ವಾರಂಗ ಪ್ರವೀಣ್ ಎಸ್. ಶೆಟ್ಟಿ ಸೇರಿದಂತೆ ಭಕ್ತರು ಹೆಚ್ಚಿನ ಉಪಸ್ಥಿತರಿದ್ದು ಪೂಜಾ ವಿಧಿಗಳಲ್ಲಿ ಪಾಲ್ಗೊಂಡರು.
ಚಿತ್ರ-ವರದಿ: ರೋನ್ಸ್ ಬಂಟ್ವಾಳ್