Advertisement
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್. ಹೆಗ್ಡೆ ಮಾತನಾಡಿ, ಮಹಾನಗರದಲ್ಲಿ ಯಾಂತ್ರಿಕ ಬದುಕಿನ ನಡುವೆಯೂ ಮಹಿಳೆಯರು ಒಂದಾಗಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಿರುವುದು ಅಭಿನಂದನೀಯ ಎಂದರು.
ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಕೋಶಾಧಿಕಾರಿ ಆಶಾ ವಿ. ರೈ, ಜತೆ ಕೋಶಾಧಿಕಾರಿ ರತ್ನಾ ಪಿ. ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಿನಿ ಶೆಟ್ಟಿ ಪ್ರಾರ್ಥನೆಗೈದರು. ರಂಗಕರ್ಮಿ ನಂದಳಿಕೆ ನಾರಾಯಣ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು.
Related Articles
ಕೋಶಾಧಿಕಾರಿ ಡಾ| ಪಲ್ಲವಿ ಆರ್. ಶೆಟ್ಟಿ, ಜತೆ ಕಾರ್ಯದರ್ಶಿ ಸರೋಜಿನಿ ಎಸ್. ಶೆಟ್ಟಿ,
ಜತೆ ಕೋಶಾಧಿಕಾರಿ ವೀಣಾ ಶೆಟ್ಟಿ ಸಹಕರಿಸಿದರು.
Advertisement
ಬಂಟರ ಸಂಘ ಮುಂಬಯಿ ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್ ಶೆಟ್ಟಿ, ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಬೆಳ್ಳಂಪಳ್ಳಿ ಬಾಲಕೃಷ್ಣ ಹೆಗ್ಡೆ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಭೂಮಿಕಾ ಶೆಟ್ಟಿ, ಸಮಿತಿಯ ಗೌರವ ಕಾರ್ಯದರ್ಶಿ ಗಿರೀಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಕೋಶಾಧಿಕಾರಿ ಭರತ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ತಾರನಾಥ್ ಶೆಟ್ಟಿ, ವಿಕಾಸ್ ರೈ, ಶಶಿ ಶೆಟ್ಟಿ, ವಿಜು ಶೆಟ್ಟಿ, ನವೀನ್, ಸೀತಾರಾಮ್ ಶೆಟ್ಟಿ, ಉದಯ್ ಎಲ್. ಶೆಟ್ಟಿ ವಿಕ್ರೋಲಿ, ಕೃಷ್ಣ ಶೆಟ್ಟಿ, ಸಾಧು ಶೆಟ್ಟಿ, ಚಂದ್ರಹಾಸ್ ಶೆಟ್ಟಿ, ನವೀನ್ ಶೆಟ್ಟಿ ಇನ್ನಾಬಾಳಿಕೆ, ಸಂತೋಷ್ ಶೆಟ್ಟಿ, ಹರೀಶ್ ಶೆಟ್ಟಿ ಅವರು ಉಪಸ್ಥಿತರಿದ್ದರು.
ಗೀತಾ ಎಸ್. ಶೆಟ್ಟಿ, ನಿರ್ಮಲಾ ಶೆಟ್ಟಿ, ಸುಕನ್ಯಾ ಶೆಟ್ಟಿ, ಸುಗಂಧಿ ಶೆಟ್ಟಿ, ಶಾಂತಾ ಎನ್. ಶೆಟ್ಟಿ, ಶಾಲಿನಿ ಶೆಟ್ಟಿ, ವಿನುತಾ ಶೆಟ್ಟಿ, ಜ್ಯೋತಿ ಶೆಟ್ಟಿ, ಮಲ್ಲಿಕಾ ಶೆಟ್ಟಿ, ವಿನುತಾ ಶೆಟ್ಟಿ, ಶರ್ಮಿಳಾ ಶೆಟ್ಟಿ, ವಜ್ರಾ ವಿ. ಶೆಟ್ಟಿ, ಗೀತಾ ಶೆಟ್ಟಿ, ಜ್ಯೋತಿ ಶೆಟ್ಟಿ, ಅನಿತಾ ಶೆಟ್ಟಿ, ದೀಪಾ ಶೆಟ್ಟಿ, ಸುರೇಖಾ ಶೆಟ್ಟಿ, ಸರಿತಾ ಶೆಟ್ಟಿ, ವಿದ್ಯಾ ಶೆಟ್ಟಿ, ವೇದಾ ಶೆಟ್ಟಿ, ವನಿತಾ ಶೆಟ್ಟಿ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ನಮ್ಮ ಸಮಾಜದಲ್ಲಿ ತೀರಾ ಬಡತನದಲ್ಲಿ ಬದುಕುತ್ತಿರುವ ಸಮಾಜ ಬಾಂಧವರ ಕಷ್ಟ, ಸುಖಗಳಿಗೆ ಸ್ಪಂದಿಸಿದರೆ ಮಾತ್ರ ನಮ್ಮ ಸಮಾಜ ಸೇವೆಗೆ ಸಾರ್ಥಕತೆ ಲಭಿಸುತ್ತದೆ. ಇಂದಿನ ಕಾರ್ಯಕ್ರಮವನ್ನು ಕಂಡಾಗ ಸಂತೋಷವಾಗುತ್ತಿದೆ. ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಯು. ಶೆಟ್ಟಿ ಅವರು ವಿಕ್ರೋಲಿ ಬಂಟ್ಸ್ ಮುಖಾಂತರ ಗುರುತಿಸಿಕೊಂಡು ಅಲ್ಲೂ ಬಹಳಷ್ಟು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡಿದ ಶ್ರೇಯಸ್ಸನ್ನು ಹೊಂದಿದ್ದಾರೆ. ಪ್ರಸ್ತುತ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಚುಕ್ಕಾಣಿಯನ್ನು ಹಿಡಿದು ಇಲ್ಲೂ ಮಹಿಳೆಯರನ್ನು ಸಂಘಟಿಸಿ ಕ್ರಿಯಾಶೀಲರಾಗಿದ್ದಾರೆ. ಅವರ ಕಾರ್ಯಕ್ರಮಗಳಿಗೆ ನಮ್ಮ ಪ್ರೋತ್ಸಾಹ, ಸಹಕಾರ ಸದಾಯಿದೆ.-ಇಂದ್ರಾಳಿ ದಿವಾಕರ ಶೆಟ್ಟಿ, ಸಮನ್ವಯಕರು : ಮಧ್ಯ ಪ್ರಾದೇಶಿಕ ಸಮಿತಿಗಳು ಬಂಟರ ಸಂಘ ಮುಂಬಯಿ ಸಮಿತಿಯ ಮಹಿಳೆಯರ ಉತ್ಸುಕತೆಯನ್ನು ಕಂಡಾಗ ಹೆಮ್ಮೆಯಾಗುತ್ತಿದೆ. ವೈದ್ಯಕೀಯ ಶಿಬಿರ, ಆರೋಗ್ಯ ಮಾಹಿತಿ ಶಿಬಿರ, ಆರೋಗ್ಯ ವಿಚಾರ ಸಂಕಿರಣ, ಶೈಕ್ಷಣಿಕ ಸಹಾಯ ಇನ್ನಿತರ ಕಾರ್ಯಕ್ರಮಗಳಲ್ಲಿ ಮಹಿಳಾ ವಿಭಾಗದ ಪಾತ್ರ ಮಹತ್ತರವಾಗಿದೆ. ಆಟಿಡೊಂಜಿ ದಿನ ಕಾರ್ಯಕ್ರಮವು ಯುವಪೀಳಿಗೆಗೆ ಬಹಳಷ್ಟು ಮಹತ್ವದ್ದಾಗಿದೆ. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಯು. ಶೆಟ್ಟಿ ಅವರ ತಂಡಕ್ಕೆ ನಮ್ಮ ಸಹಕಾರ, ಪ್ರೋತ್ಸಾಹ ಸದಾಯಿದೆ.
– ಸಿ.ಎ. ವಿಶ್ವನಾಥ ಶೆಟ್ಟಿ, ಕಾರ್ಯಾಧ್ಯಕ್ಷರು, ಬಂಟರ ಸಂಘ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿ