Advertisement

ಬಂಟರ ಸಂಘ ಕುರ್ಲಾ-ಭಾಂಡೂಪ್‌ : ಆರ್ಥಿಕ ನೆರವು ಅರ್ಜಿ ಸ್ವೀಕಾರ

03:12 PM Apr 03, 2018 | |

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ವರ್ಷಂಪ್ರತಿ ಸಮಾಜ ಬಾಂಧವರಿಗೆ ಕೊಡಲ್ಪಡುವ ವಿದ್ಯಾರ್ಥಿ ವೇತನ, ವಿಧವಾ ವೇತನ ಹಾಗೂ ವಿಕಲ ಚೇತನಗಳಿಗೆ ಅರ್ಜಿ ಸ್ವೀಕಾರ ಕಾರ್ಯಕ್ರಮವು ಬಂಟರ ಸಂಘ ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿಯಿಂದ  ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಪೂರ್ವಾಹ್ನದಿಂದ ಮಧ್ಯಾಹ್ನದವರೆಗೆ ನಡೆಯಿತು.

Advertisement

ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಬಂಟರ ಸಂಘ ಮುಂಬಯಿ ಇದರ ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸಿಎ ವಿಶ್ವನಾಥ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಉದಯ್‌ ಶೆಟ್ಟಿ ವಿಕ್ರೋಲಿ, ಇತರ ಪದಾಧಿಕಾರಿಗಳಾದ ಗಿರೀಶ್‌ ಶೆಟ್ಟಿ, ಬಂಟರ ಸಂಘ ಕುರ್ಲಾ- ಭಾಂಡೂಪ್‌ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ಕಾರ್ಯಾಧ್ಯಕ್ಷ ತಾರನಾಥ ಶೆಟ್ಟಿ, ಮಹಿಳಾ ವಿಭಾಗದ ಪದಾಧಿಕಾರಿಗಳಾದ ಡಾ| ಪಲ್ಲವಿ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಯುವ ವಿಭಾಗದ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು ಉಪಸ್ಥಿತರಿದ್ದು ಆರ್ಥಿಕ ಸಹಾಯ ವಿತರಣೆಯ ಅರ್ಜಿಗಳನ್ನು ಸ್ವೀಕರಿಸಿದರು.

ಬಂಟರ ಸಂಘ ಮುಂಬಯಿ ಇದರ ಕುರ್ಲಾ-ಭಾಂಡೂಪ್‌ ಪ್ರಾದೇ ಶಿಕ ಸಮಿತಿಗೆ ಒಳಪಟ್ಟ ಕುರ್ಲಾ, ವಿದ್ಯಾವಿಹಾರ್‌, ಚೆಂಬೂರು, ಘಾಟ್‌ಕೋಪರ್‌, ವಿಕ್ರೋಲಿ, ಕಾಂಜೂರ್‌ ಮಾರ್ಗ್‌, ಭಾಂಡೂಪ್‌ ಇನ್ನಿತರ ಪ್ರದೇಶಗಳಲ್ಲಿ ನೆಲೆಸಿರುವ ಆರ್ಥಿಕವಾಗಿ ಹಿಂದುಳಿದ  ಬಂಟ ಬಾಂಧವರು ಅರ್ಜಿಗಳನ್ನು ಸಲ್ಲಿಸಿದರು. ಸದಸ್ಯರು ಅರ್ಜಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಸಹಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next