ಮುಂಬಯಿ: ಉತ್ತಮ ಜೀವನಕ್ಕೆ ಆರೋಗ್ಯ ಭಾಗ್ಯವೇ ಮೂಲ ಪರಿಹಾರವಾಗಿದೆ. ಮಹಿಳೆಯರು ಇಂದು ಕೌಟುಂಬಿಕ ಸಮಸ್ಯೆಗಳಿಂದ ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ನಿಗಾ ವಹಿಸಲು ಸಾಧ್ಯವಾಗದೆ ಕೊನೆ ಗಳಿಕೆಯಲ್ಲಿ ಹಲವಾರು ಸಮಸ್ಯೆ ಗಳನ್ನು ಎದುರಿಸಬೇಕಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಆರೋಗ್ಯ ವಂತರಿದ್ದಾಗ ಮಾತ್ರ ಅದು ಉತ್ತಮ ಜೀವನಕ್ಕೆ ಅಡಿಗಲ್ಲಾಗುತ್ತದೆ. ಮಹಿಳೆ ಯರು ನಿಗದಿತ ಸಮಯದಲ್ಲಿ ಆರೋಗ್ಯ ತಪಾಸಣೆಯನ್ನು ಮಾಡು ತ್ತಿದ್ದರೆ ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಬಹುದು. ಬಂಟರ ಸಂಘವು ಸಮಾಜ ಬಾಂಧವರ ಆರೋಗ್ಯದ ದೃಷ್ಟಿಯಿಂದ ಹಲವಾರು ಯೋಜನೆಗಳನ್ನು ತಂದಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ಸಂಘದ ಕುರ್ಲಾ- ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯವೈಖರಿಯನ್ನು ಬಹಳ ಹತ್ತಿರದಿಂದ ಬಲ್ಲವಳಾಗಿದ್ದೇನೆ. ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಮಹಿಳಾ ವಿಭಾಗದ ದಿಂದ ನಿರಂತರವಾಗಿ ನಡೆಯುತ್ತಿರಲಿ ಎಂದು ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ್ ಹೆಗ್ಡೆ ಅವರು ನುಡಿದರು.
ಘಾಟ್‌ಕೋಪರ್ ಪಶ್ಚಿಮದ ರಹೇಜಾ ಕಾಂಪ್ಲೆಕ್ಸ್‌ನಲ್ಲಿ ನಡೆದ ಬಂಟರ ಸಂಘ ಮುಂಬಯಿ ಕುರ್ಲಾ- ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಿಳೆಯರು ಕೌಟುಂಬಿಕವಾಗಿ ಹೆಚ್ಚಿನ ಕಾಳಜಿ ವಹಿಸುವ ಜತೆಗೆ ನಿಯಮಿತ ಆಹಾರ, ಧ್ಯಾನ, ವ್ಯಾಯಾಮಗಳಿಂದಲೂ ಆರೋಗ್ಯ ಭಾಗ್ಯವನ್ನು ಕಾಪಾಡಿಕೊಳ್ಳಬಹುದು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಯು. ಶೆಟ್ಟಿ ಅವರ ತಂಡದ ಸಮಾಜಪರ ಕಾರ್ಯಕ್ರಮಗಳಿಗೆ ನನ್ನ ಪ್ರೋತ್ಸಾಹ, ಸಹಕಾರ ಸದಾ ಇದೆ ಎಂದು ನುಡಿದು ಮಹಿಳೆಯರು ಆರೋಗ್ಯ ಭಾಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಕರೆ ನೀಡಿದರು.
ವಸಂತ ಮೆಮೋರಿಯಲ್ ಟ್ರಸ್ಟ್ ಇದರ ಡಾ| ಜಯಲಕ್ಷ್ಮೀ ಕೃಷ್ಣನ್ ಅವರು ಮಾತನಾಡಿ, ಕ್ಯಾನ್ಸರ್ ಎಂದಾಕ್ಷಣ ಮಹಿಳೆಯರು ಹೆಚ್ಚಾಗಿ ಹೆದರುತ್ತಾರೆ. ಇಂದಿನ ವೈಜ್ಞಾನಿಕ ಯುಗದಲ್ಲಿ ಎಲ್ಲ ಕಾಯಿಲೆ ಗಳಿಗೆ ಚಿಕಿತ್ಸೆಯಿದ್ದು, ಇದರ ಬಗ್ಗೆ ಮಹಿಳೆಯರು ಮೊದಲು ತಿಳಿಯ ಬೇಕು. ಆರೋಗ್ಯಭಾಗ್ಯದೆಡೆಗೆ ಮಹಿಳೆಯರು ಹೆಚ್ಚಿನ ಗಮನ ಹರಿಸಿ ಕಾಯಿಲೆಗಳು ಬಾರದಂತೆ ಮುನ್ನೆ ಚ್ಚರಿಕೆ ವಹಿಸಬೇಕು ಎಂದು ನುಡಿದು, ಕ್ಯಾನ್ಸರ್ ಹರಡಲು ಕಾರಣಗಳೇನು, ಮಹಿಳೆಯನ್ನು ಹೆಚ್ಚಾಗಿ ಬಾಧಿಸುವ ಸ್ತನ ಕ್ಯಾನ್ಸರ್ ಮತ್ತು ಅದನ್ನು ನಿವಾರಿ ಸುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಬಂಟರ ಸಂಘ ಕುರ್ಲಾ- ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಯು. ಶೆಟ್ಟಿ ಅವರು ಸ್ವಾಗತಿಸಿ, ಮಹಿಳಾ ವಿಭಾಗದವು ಆಯೋಜಿಸುತ್ತಿರುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿ, ವಿಭಾಗದ ಸಮಾಜಪರ ಕಾರ್ಯಕ್ರಮಗಳಲ್ಲಿ ಸದಸ್ಯೆಯರು, ಸಮಾಜದ ಮಹಿಳೆ ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದರು.
ಉದ್ಘಾಟನಾ ಸಂದರ್ಭದಲ್ಲಿ ಬಂಟರ ಸಂಘ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಉಮಾ ಶೆಟ್ಟಿ ಮತ್ತು ಜತೆ ಕೋಶಾಧಿಕಾರಿ ರತ್ನಾ ಶೆಟ್ಟಿ, ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಗೌರವ ಕೋಶಾಧಿಕಾರಿ ಡಾ| ಪಲ್ಲವಿ ಆರ್. ಶೆಟ್ಟಿ, ಜತೆ ಕೋಶಾಧಿಕಾರಿ ವೀಣಾ ಎಸ್. ಶೆಟ್ಟಿ, ಬಂಟರ ಸಂಘ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಉಪ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಗಿರೀಶ್ ಶೆಟ್ಟಿ, ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ, ಬಂಟರ ಸಂಘ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಸಮನ್ವಯಕ ಗಣೇಶ್ ರೈ, ಸಮಿತಿಯ ಆರೋಗ್ಯ ವಿಭಾಗದ ಕಾರ್ಯಾಧ್ಯಕ್ಷ ಪ್ರೇಮ್ ಶೆಟ್ಟಿ, ರಂಗನಟ, ನಿರ್ದೇಶಕ ನಾರಾಯಣ ಶೆಟ್ಟಿ ನಂದಳಿಕೆ, ವಿಕ್ರೋಲಿ ಬಂಟ್ಸ್ ನ ಗೌರವ ಪ್ರಧಾನ ಕಾರ್ಯದರ್ಶಿ ಉದಯ್ ಶೆಟ್ಟಿ ಪೇಜಾವರ, ಬಂಟರ ಸಂಘ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಸರೋಜಾ ಶೆಟ್ಟಿ, ಡಾ| ರೀನಾ ಮೊದಲಾದವರು ಉಪಸ್ಥಿತರಿದ್ದರು.
ಗೀತಾ ಸತೀಶ್ ಶೆಟ್ಟಿ ಅವರು ಪ್ರಾರ್ಥನೆಗೈದರು. ಮಹಿಳಾ ವಿಭಾಗದ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯೆಯರುಗಳಾದ ಜ್ಯೋತಿ ಶೆಟ್ಟಿ, ಮಲ್ಲಿಕಾ ಶೆಟ್ಟಿ, ದೀಪಾ ಶೆಟ್ಟಿ, ಸುರೇಖಾ ಶೆಟ್ಟಿ, ಅನಿತಾ ಶೆಟ್ಟಿ, ಸರಿತಾ ಶೆಟ್ಟಿ, ದಯಾ ಶೆಟ್ಟಿ, ಗೀತಾ ಶೆಟ್ಟಿ, ನಿರ್ಮಲಾ ಶೆಟ್ಟಿ, ಸುಕನ್ಯಾ ಶೆಟ್ಟಿ ಮೊದಲಾದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಮಹಿಳಾ ವಿಭಾಗದ ಗೌರವ ಕಾರ್ಯದರ್ಶಿ ಶಿಕ್ಷಕಿ, ಅಮೃತಾ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿ, ಮಹಿಳಾ ವಿಭಾಗದ ಸಿದ್ಧಿ-ಸಾಧನೆಗಳನ್ನು ವಿವರಿಸಿದರು. ಪಲ್ಲವಿ ಆರ್. ಶೆಟ್ಟಿ ವಂದಿಸಿದರು. ಬಂಟರ ಸಂಘ ಹಾಗೂ ಕುರ್ಲಾ ಭಾಂಡೂಪ್ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಯುವ ವಿಭಾಗದವರು ಉಪಸ್ಥಿತರಿದ್ದರು. ಶಿಬಿರದಲ್ಲಿ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಸದಸ್ಯೆಯರು ಸೇರಿದಂತೆ ತುಳು-ಕನ್ನಡಿಗ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಬಂಟರ ಸಂಘ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಸಮಾಜಪರ, ಸಾಂಸ್ಕೃತಿಕ, ಶೈಕ್ಷಣಿಕ ಇನ್ನಿತರ ವಲಯಗಳಲ್ಲಿ ಸಲ್ಲಿಸುತ್ತಿರುವ ಕೊಡುಗೆಯನ್ನು ಕಂಡಾಗ ಸಂತೋಷವಾಗುತ್ತಿದೆ. ಮಹಿಳಾ ವಿಭಾಗದ ಪದಾಧಿಕಾರಿಗಳು, ಸದಸ್ಯೆಯರ ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳಿಗೆ ಸಮಿತಿಯ ಸಹಕಾರ, ಪ್ರೋತ್ಸಾಹ ಸದಾಯಿದೆ. ಮಹಿಳೆಯರು ಕೇವಲ ಮನೆಯೊಳಗಿನ ಕೆಲಸ-ಕಾರ್ಯಗಳಿಗೆ ಮಾತ್ರ ಸೀಮಿತವಾಗಿರದೆ ಇಂತಹ ಸಂಘಟನೆಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಬೇಕು. ಇದರಿಂದ ಪರಸ್ಪರ ಸುಖ-ಕಷ್ಟಗಳಲ್ಲಿ ಭಾಗಿಯಾಗಲು ಸಹಕಾರಿಯಾಗುತ್ತದೆ. ಆರೋಗ್ಯವಿದ್ದಾಗ ಮಾತ್ರ ಯಾವುದೇ ರೀತಿಯ ಸಾಧನೆಗಳನ್ನು ಮಾಡಲು ಸಾಧ್ಯವಾಗುತ್ತದೆ
– ಸಿಎ ವಿಶ್ವನಾಥ ಶೆಟ್ಟಿ (ಕಾರ್ಯಾಧ್ಯಕ್ಷರು : ಬಂಟರ ಸಂಘ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿ).