Advertisement

ಬಂಟರ ಸಂಘ ಮೆಗಾ ಆರ್ಥಿಕ ಸಹಾಯ ವಿತರಣ ಸಮಾರಂಭ ಪೂರ್ವಭಾವಿ ಸಭೆ

05:11 PM Jun 01, 2018 | |

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರ ಮಾರ್ಗದರ್ಶನದಲ್ಲಿ ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಇವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಪದಾಧಿಕಾರಿಗಳ ಸಹಕಾರದೊಂದಿಗೆ ಜೂ. 10 ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿರುವ ಮೆಗಾ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಆರ್ಥಿಕ ಸಹಾಯ ವಿತರಣ ಕಾರ್ಯಕ್ರಮ ನಡೆಯಲಿದ್ದು, ಇದರ  ಪ್ರಯುಕ್ತ ಪೂರ್ವಭಾವಿ ಸಭೆಯು ಮೇ 30 ರಂದು ಬೆಳಗ್ಗೆ ಕುರ್ಲಾ ಪೂರ್ವದ ಬಂಟರ ಸಂಘದಲ್ಲಿ ಜರಗಿತು.

Advertisement

ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಿಚಾರ- ವಿನಿಮಯ ನಡೆಸಲಾಯಿತು. ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಇವರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಇವರು ಕಾರ್ಯಕ್ರಮದ ಬಗ್ಗೆ ಸಂಪೂರ್ಣ ವಿವರ ನೀಡಿದರು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಬಿ. ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪ ಕಾರ್ಯಾಧ್ಯಕ್ಷ ಸುಬ್ಬಯ್ಯ ಶೆಟ್ಟಿ, ಕಾರ್ಯದರ್ಶಿ ಖಾಂದೇಶ್‌ ಭಾಸ್ಕರ್‌ ಶೆಟ್ಟಿ, ದಕ್ಷಿಣ ಮತ್ತು ಮಧ್ಯ ಪ್ರಾದೇಶಿಕ ಸಮಿತಿಗಳ ಸಮನ್ವಯಕರಾದ ಡಾ| ಪ್ರಭಾಕರ ಶೆಟ್ಟಿ ಬಿ., ಇಂದ್ರಾಳಿ ದಿವಾಕರ್‌ ಶೆಟ್ಟಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್‌ ರೈ, ಬಂಟರವಾಣಿ ಸಂಪಾದಕ ಪ್ರೇಮನಾಥ್‌ ಬಿ. ಶೆಟ್ಟಿ ಮುಂಡ್ಕೂರು ಉಪಸ್ಥಿತರಿದ್ದರು. ಖಾಂದೇಶ್‌ ಭಾಸ್ಕರ್‌ ಶೆಟ್ಟಿ ಕೊನೆಯಲ್ಲಿ ವಂದಿಸಿದರು. 

ಚಿತ್ರ-ವರದಿ. ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

Advertisement

Udayavani is now on Telegram. Click here to join our channel and stay updated with the latest news.

Next