Advertisement

ಬಂಟರ ಸಂಘ ಮುಂಬಯಿ ವಾರ್ಷಿಕ ಮಹಾಸಭೆಯಲ್ಲಿ ವಾರ್ಷಿಕ ಪುರಸ್ಕಾರ ಪ್ರದಾನ

02:26 PM Sep 15, 2021 | Team Udayavani |

ಮುಂಬಯಿ: ಬಂಟರ ಸಂಘ ಮುಂಬಯಿ ಇದರ 93ನೇ ವಾರ್ಷಿಕ ಮಹಾಸಭೆ ಸೆ. 12ರಂದು ಪೂರ್ವಾಹ್ನ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಸಂಘದ ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement

ಸಮಾರಂಭದಲ್ಲಿ ಸಂಘದ ಸದಸ್ಯತ್ವ ಸಂಗ್ರಹ ಅಭಿಯಾನದಲ್ಲಿ ವರ್ಷದ ಚಿನ್ನದ ಪುರಸ್ಕಾರಕ್ಕೆ ಪಾತ್ರರಾದ ಸಂಘದ ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿಯ ಜಯ ಶೆಟ್ಟಿ ಅವರನ್ನು ಸಂಘದ ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ, ಪದಾ ಧಿಕಾರಿಗಳು, ಸದಸ್ಯತ್ವ ಸಮಿತಿಯ ಕಾರ್ಯಾಧ್ಯಕ್ಷ
ಎನ್‌. ಸಿ. ಶೆಟ್ಟಿ ಸಮ್ಮಾನಿಸಿದರು. 2020-2021ನೇ ಸಾಲಿನ ಸಂಘದ ಅತ್ಯುತ್ತಮ ಕಾರ್ಯಕರ್ತ ಚಿನ್ನದ ಪದಕವನ್ನು ಯುವ ವಿಭಾಗದ ಕಾರ್ಯಾಧ್ಯಕ್ಷ ಸಾಗರ್‌ ದಿವಾಕರ್‌ ಶೆಟ್ಟಿ ಪಡೆದಿದ್ದು, ಸಂಘದ ಉಪಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಅವರು ಪುರಸ್ಕಾರವನ್ನು ಘೋಷಿಸಿದರು. ಗಣ್ಯರು ಸಾಗರ್‌ ದಿವಾಕರ್‌ ಶೆಟ್ಟಿ ಅವರಿಗೆ ಚಿನ್ನದ ಪದಕ ಮತ್ತು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಶುಭ ಹಾರೈಸಿದರು.

ಸಂಘದ ಅತ್ಯುತ್ತಮ ಪ್ರಾದೇಶಿಕ ಸಮಿತಿ ಪ್ರಶಸ್ತಿಯನ್ನು ಅಧ್ಯಕ್ಷರು ಘೋಷಿಸಿದರು. ನಗದು ಪ್ರಶಸ್ತಿಯ ಪ್ರಾಯೋಜಕರಾದ ಐಕಳ ಹರೀಶ್‌ ಶೆಟ್ಟಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು. 2020-2021ನೇ ಸಾಲಿನ ಸಂಘದ ಅತ್ಯುತ್ತಮ ಪ್ರಾದೇಶಿಕ ಸಮಿತಿ ಪ್ರಥಮ ಪ್ರಶಸ್ತಿಯನ್ನು ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಎಂ. ಜಿ. ಶೆಟ್ಟಿ ಮತ್ತು ಪದಾಧಿಕಾರಿಗಳಿಗೆ ಹಾಗೂ ಪ್ರಥಮ ರನ್ನರ್‌ ಅಪ್‌ ಪ್ರಶಸ್ತಿಯನ್ನು ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸುಕುಮಾರ್‌ ಎನ್‌. ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು. ಜತೆ ಕಾರ್ಯದರ್ಶಿ ದಿವಾಕರ್‌ ಶೆಟ್ಟಿ ಇಂದ್ರಾಳಿ, ಜತೆ ಕೋಶಾಧಿಕಾರಿ ಮುಂಡಪ್ಪ ಎಸ್‌. ಪಯ್ಯಡೆ, ಪ್ರಶಸ್ತಿ ಆಯ್ಕೆ ಸಮಿತಿಯ ನ್ಯಾಯವಾದಿ ಡಿ. ಕೆ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಎಸ್‌ಎಸ್‌ಸಿ, ಎಚ್‌ಎಸ್‌ಸಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತೀವರ್ಷದಂತೆ ಈ ವರ್ಷವೂ ರಮಾನಾಥ್‌ ಪಯ್ಯಡೆ ಸ್ಮರಣಾರ್ಥ ನಗದು ಪ್ರಶಸ್ತಿಯನ್ನು ನೀಡಿ ಪ್ರೋತ್ಸಾಹಿಸಲಾಯಿತು. ಸಂಘದ ಗೌರವ ಕಾರ್ಯದರ್ಶಿ ಡಾ| ಆರ್‌. ಕೆ. ಶೆಟ್ಟಿ ಅವರು ವಿದ್ಯಾರ್ಥಿಗಳ ಯಾದಿಯನ್ನು ಪ್ರಕಟಿಸಿದರು. ಪ್ರಶಸ್ತಿಯ ಪ್ರಾಯೋಜಕರಾದ ಡಾ| ಪಿ. ವಿ. ಶೆಟ್ಟಿ, ಗೌರವ್‌ ಆರ್‌. ಪಯ್ಯಡೆ, ಮುಂಡಪ್ಪ ಎಸ್‌. ಪಯ್ಯಡೆ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಇದನ್ನೂ ಓದಿ:ದಾಂಪತ್ಯ ಕಲಹ : ನಟ ನಾಗಚೈತನ್ಯಗೆ ಕಾಡುತ್ತಿದೆಯಂತೆ ಆ ಭಯ

Advertisement

ದಿ| ಶಂಕರ್‌ ಎ. ಶೆಟ್ಟಿ ಅವರ ಸ್ಮರಣಾರ್ಥ ಅವರ ಪತ್ನಿ ತೇಜಮಂಜರಿ ಶೆಟ್ಟಿ ಅವರು ಎಂಜಿನಿಯರ್‌ ವಿದ್ಯಾರ್ಥಿಗಳಿಗೆ ನೀಡುತ್ತಿರುವ ನಗದು ಬಹುಮಾನವನ್ನು ರಿತ್ವಿ ರತ್ನಾಕರ್‌ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು. ಪ್ರಾಯೋಜಕಿ ತೇಜಮಂಜರಿ ಕುಟುಂಬದವರು ಈ ಬಹುಮಾನ ನೀಡಿ ಗೌರವಿಸಿದರು. ಬಂಟರ ಸಂಘದ ಮಹಾಪ್ರಬಂಧಕ ಪ್ರವೀಣ್‌ ಶೆಟ್ಟಿ ವರಂಗ ಮತ್ತು ಸಂಘದ ಅಕೌಂಟ್ಸ್‌ ಪ್ರಬಂಧಕಿ ಸರಿತಾ ಎಸ್‌.
ಶೆಟ್ಟಿ ಅವರು ಸಂಘಕ್ಕೆ ನೀಡಿರುವ ವಿಶೇಷ ಕೊಡುಗೆ ಹಾಗೂ ಕೊರೊನಾ ಸಂದರ್ಭ ಅವರು ಮಾಡಿರುವ ನಿರಂತರ ಸೇವೆಯನ್ನು ಗಮನಿಸಿ ಅವರನ್ನು ಗೌರವಿಸಲಾಯಿತು. ಗೌರವ ಕಾರ್ಯದರ್ಶಿ ಡಾ| ಆರ್‌. ಕೆ. ಶೆಟ್ಟಿ ಅವರು ಅವರ ಸೇವೆಯನ್ನು ಶ್ಲಾಘಿಸಿದರು.

2020-2021ರ ಎಚ್‌ಎಸ್‌ಸಿ ವಾಣಿಜ್ಯ ಮತ್ತು ವಿಜ್ಞಾನ ಹಾಗೂ ಎಸ್‌ಎಸ್‌ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದು ಸಮಾಜಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಂಘದ ಜತೆ ಕಾರ್ಯದರ್ಶಿ ಇಂದ್ರಾಳಿ ದಿವಾಕರ ಶೆಟ್ಟಿ ಮತ್ತು ಸಂಘದ ಉಪಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಸಂಘದ ಜತೆ ಕೋಶಾಧಿಕಾರಿ ಮುಂಡಪ್ಪ ಎಸ್‌. ಪಯ್ಯಡೆ ಅವರು ವಿದ್ಯಾರ್ಥಿಗಳ ಯಾದಿಯನ್ನು ಓದಿದರು. ವಿದ್ಯಾರ್ಥಿಗಳನ್ನು ನಗದು, ಸ್ಮರಣಿಕೆ ಹಾಗೂ ಪುಷ್ಪಗುತ್ಛವನ್ನಿತ್ತು ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರು, ವಿಶ್ವಸ್ತರು, ಉಪ ಸಮಿತಿಗಳ ಕಾರ್ಯಾಧ್ಯಕ್ಷರು, ಮಹಿಳಾ ವಿಭಾಗ, ಯುವ ವಿಭಾಗ, ಪ್ರಾದೇಶಿಕ ಸಮಿತಿಗಳ ಸಮನ್ವಕರು, ಪ್ರಾದೇಶಿಕ ಸಮಿತಿಗಳ ಕಾರ್ಯಾಧ್ಯಕ್ಷರು ಹಾಗೂ ವಿವಿಧ ಬಂಟ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳನ್ನು ಗೌರವಿಸಲಾಯಿತು.

ಚಿತ್ರ-ವರದಿ: ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು.

 

Advertisement

Udayavani is now on Telegram. Click here to join our channel and stay updated with the latest news.

Next