Advertisement
ಕಲ್ಯಾಣ್ ಪಶ್ಚಿಮದ ಮಾತೋಶ್ರೀ ಸಭಾಗೃಹ ದಲ್ಲಿ ಬಂಟರ ಸಂಘ ಮುಂಬಯಿ ಇದರ ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಎ. 12ರಂದು ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಯುಗಾದಿ ಸಂಭ್ರಮಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದಿನ ಮಹಿಳಾಪರ ಕಾರ್ಯಕ್ರಮಗಳನ್ನು ಕಂಡಾಗ ಸಂತೋಷವಾಗುತ್ತಿದೆ. ಸಂಘದ ಸಹಾಯ, ಸಹಕಾರ ಸಮಿತಿಗೆ ಸದಾಯಿದೆ ಎಂದು ತಿಳಿಸಿ ಶುಭ ಹಾರೈಸಿದರು.
Related Articles
Advertisement
ಮುಖ್ಯ ಅತಿಥಿಯಾಗಿದ್ದ ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಕೃಷ್ಣ ಶೆಟ್ಟಿ ಮಾತನಾಡಿ, ತೊಟ್ಟಿಲು ತೂಗುವ ಕೈಗಳು ದೇಶವನ್ನು ಆಳಬಲ್ಲುದು. ಸ್ತ್ರೀ ಅಬಲೆಯಲ್ಲ ಸಬಲೆ ಎಂದು ತಿಳಿಸಿದರು. ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರ ವೈ. ಶೆಟ್ಟಿ ಮಾತನಾಡಿ, ಸಮಾಜದ ಕಣ್ಣೀರೊರೆಸುವ ಕೆಲಸವನ್ನು ಮಾಡಲು ನಾವು ಯಾವತ್ತು ಕಂಕಣ ಬದ್ಧರಾಗಿರಬೇಕು ಎಂದು ನುಡಿದರು.
ಭಿವಂಡಿ – ಬದ್ಲಾಪುರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರವೀಣಾ ಪ್ರಕಾಶ್ ಶೆಟ್ಟಿ ಅವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ, ಬಡ ಕುಟುಂಬದ ಯುವತಿಯ ವಿವಾಹಕ್ಕೆ ಸಹಾಯ ಮಾಡಿದ ಎಲ್ಲ ದಾನಿಗಳನ್ನು ಈ ಸಂದರ್ಭದಲ್ಲಿ ಸ್ಮರಿಸಿದರು. ಇನ್ನು ಮುಂದೆಯೂ ಇಂತಹ ಕೆಲಸಕ್ಕೆ ನಾವೆಲ್ಲ ಕೈಜೋಡಿಸೋಣ ಎಂದು ನುಡಿದರು.
ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಡಾ| ನಿಧಿ ಪಿ. ಶೆಟ್ಟಿ ಅವರು ಮಹಿಳೆಯರ ಆರೋಗ್ಯದ ಕುರಿತು ಉತ್ತಮ ಸಲಹೆ ಸೂಚನೆಗಳನ್ನು ನೀಡಿ, ಮಹಿಳೆಯರು ಯೋಗ, ನಡಿಗೆ, ವ್ಯಾಯಾಮದ ಮೂಲಕ ದಿನದ ಸ್ವಲ್ಪ ಸಮಯವನಾದರೂ ತನಗಾಗಿ ಮೀಸಲಿಡಬೇಕು ಎಂದರು. ಅತಿಥಿಯಾಗಿ ಆಗಮಿಸಿದ್ದ ಡಾ| ನಿಧಿ ಪಿ. ಶೆಟ್ಟಿಯವರನ್ನು ಸಮ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಮಿತಿಯ ಸುಬೋಧ್ ಡಿ. ಭಂಡಾರಿ, ಭಾಸ್ಕರ್ ಶೆಟ್ಟಿ ದೊಡ್ಡೇರಂಗಡಿ, ಹರೀಶ್ ಟಿ. ಶೆಟ್ಟಿ, ಸಂತೋಷ್ ಶೆಟ್ಟಿ, ದಯಾನಂದ ಶೆಟ್ಟಿ, ಉದಯ ಶೆಟ್ಟಿ, ಜಗದೀಶ ಶೆಟ್ಟಿ, ಪ್ರಕಾಶ್ ಶೆಟ್ಟಿ, ಸುಧೀರ್ ಶೆಟ್ಟಿ, ನಾಗ್ ಕಿರಣ್ ಶೆಟ್ಟಿ, ಅನಿಲ್ ಶೆಟ್ಟಿ, ಸದಾಶಿವ ಶೆಟ್ಟಿ, ಮಂಜುನಾಥ್ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಸುಜಾತಾ ಶೆಟ್ಟಿ ಹಾಗೂ ರತ್ನಾ ಶೆಟ್ಟಿ, ಓಂ ಶಕ್ತಿ ಮಹಿಳಾ ಸಂಸ್ಥೆಯ ಗೌರವಾಧ್ಯಕ್ಷೆ ಚಿತ್ರಾ ಆರ್. ಶೆಟ್ಟಿ ಹಾಗೂ ವೇದಾ ಶೆಟ್ಟಿ, ರೂಪಾ ಶೆಟ್ಟಿ, ಸುಲೋಚನಾ ಶೆಟ್ಟಿ, ಜ್ಯೋತಿ ಶೆಟ್ಟಿ ಹಾಗೂ ಹೆಚ್ಚಿನ ಎಲ್ಲ ಸದಸ್ಯರು ಭಾಗವಹಿಸಿದ್ದರು. ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವನ್ನು ವಿತರಿಸಲಾಯಿತು. ಆಶಾ ನಾಯಕ್ ಸಂಗೀತ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದರು. ಚೇತನಾ ಭಂಡಾರಿ ಹಾಗೂ ಜಯಶ್ರೀ ಶೆಟ್ಟಿ ಪ್ರಾರ್ಥನೆಗೈದರು. ಪ್ರಮೀತಾ ಶೆಟ್ಟಿ ಹಾಗೂ ರೋಹಿಣಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶೋಭಾ ಶೆಟ್ಟಿ ವಂದಿಸಿದರು. ಸದಸ್ಯೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.