ಮುಂಬಯಿ: ಬಂಟರ ಸಂಘದ ಸ್ನೇಹ ಸಮ್ಮಿಲನ – 2019 ಸಮಾರಂಭವು ಎ. 14 ರಂದು ಸಂಜೆ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರ ಅಧ್ಯಕ್ಷತೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಇದೇ ಸಂದರ್ಭದಲ್ಲಿ ಸಂಘದ ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ಒಂಬತ್ತು ಪ್ರಾದೇಶಿಕ ಸಮಿತಿಗಳಿಗಾಗಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬಂಟರ ಸಂಘ ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿ ಪ್ರಥಮ ಬಹುಮಾನ ಪಡೆಯಿತು. ಸಂಘದ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿ ದ್ವಿತೀಯ ಪ್ರಶಸ್ತಿಯನ್ನು ಪಡೆದರೆ, ಸಂಘದ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ ತೃತೀಯ ಬಹುಮಾನ ಪಡೆಯಿತು. ಸ್ಪರ್ಧೆಯ ತೀರ್ಪುಗಾರರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಸಂಘದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್ ರೈ ಅವರ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ವಿಜೇತ ಸ್ಪರ್ಧಿಗಳಿಗೆ ಗಣ್ಯರು ಬಹುಮಾನ ವಿತರಿಸಿ ಶುಭಹಾರೈಸಿದರು. ಅತಿಥಿಗಳಾಗಿ ಬಾಬಾ ಅಟೋಮಿಕ್ ಆ್ಯಂಡ್ ರೀಸರ್ಚ್ ಸೆಂಟರ್‌ನ ಹಿರಿಯ ನಿವೃತ್ತ ಅಣು ವಿಜ್ಞಾನಿ ಡಾ| ಎ. ಪಿ. ಜಯರಾಮನ್, ಆದಾಯ ತೆರಿಗೆ ತನಿಖಾ ವಿಭಾಗದ ಹೆಚ್ಚುವರಿ ನಿರ್ದೇಶಕ ಜನಾರ್ಧನ ಎಸ್., ಬಂಟರ ಸಂಘದ ಮಾಜಿ ಅಧ್ಯಕ್ಷ, ಹಿರಿಯ ಮುತ್ಸದ್ಧಿ ಎಂ. ಡಿ. ಶೆಟ್ಟಿ, ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಶರಣ್ಯಾ ಹೆಗ್ಡೆ, ಸಂಘದ ಉಪಾಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್ ಭೋಜ ಶೆಟ್ಟಿ, ಜೊತೆ ಕಾರ್ಯದರ್ಶಿ ಮಹೇಶ್ ಎಸ್. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್ ಆರ್. ಶೆಟ್ಟಿ ಐಕಳ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್. ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್ ವಿ. ಶೆಟ್ಟಿ, ಪ್ರಶಸ್ತಿ ಪುರಸ್ಕೃತರು, ಸಮ್ಮಾನಿತರು ಉಪಸ್ಥಿತರಿದ್ದರು. ಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ ವಂದಿಸಿದರು.