ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಹದಿನೈದನೇ ಮೆಗಾ ಆರ್ಥಿಕ ಸಹಾಯ ಮೇಳದ ಉದ್ಘಾಟನಾ ಸಮಾರಂಭವು ಜೂ. 9ರಂದು ಬೆಳಗ್ಗೆ 10ರಿಂದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಟಾರಿ ಸಭಾಗೃಹದಲ್ಲಿ ದಿ| ವಾಸು ಕೆ. ಶೆಟ್ಟಿ ಅವರ ಸ್ಮರಣಾರ್ಥ ಅವರ ಪುತ್ರ ಚರಿಷ್ಮಾ ಬಿಲ್ಡರ್ì ಲಿಮಿಟೆಡ್‌ನ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸುಧೀರ್ ವಿ. ಶೆಟ್ಟಿ ಅವರ ಪ್ರಾಯೋಜಕತ್ವದಲ್ಲಿ ಅದ್ದೂರಿಯಾಗಿ ಜರಗಿತು.
ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಎಂಆರ್‌ಜಿ ಹಾಸ್ಪಿಟಾಲಿಟಿ ಆ್ಯಂಡ್ ಇನ್‌ಫ್ರಾಸ್ಟ್ರಕ್ಷರ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇದರ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ, ಮುಖ್ಯ ಅತಿಥಿಯಾಗಿ ಆಗಮಿಸಿದ ಫೆಡರೇಶನ್ ಆಫ್ ವರ್ಲ್ಡ್ ಬಂಟ್ಸ್ ಅಸೋಸಿಯೇಶನ್ ಇದರ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು.
ಚರಿಷ್ಮಾ ಬಿಲ್ಡರ್ನ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸುಧೀರ್ ವಿ. ಶೆಟ್ಟಿ, ತುಂಗಾ ಗ್ರೂಪ್ ಆಫ್ ಹೊಟೇಲ್ಸ್‌ನ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸುಧಾಕರ ಎಸ್. ಹೆಗ್ಡೆ, ಎಸ್‌ವಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮುರ್ಬಾಡ್ ಇದರ ವಿಶ್ವಸ್ಥ ಡಾ| ಸುರೇಂದ್ರ ವಿ. ಶೆಟ್ಟಿ ಇವರನ್ನು ಸಮಿತಿಯ ವತಿಯಿಂದ ಗಣ್ಯರ ಉಪಸ್ಥಿತಿಯಲ್ಲಿ ಪದಾಧಿಕಾರಿಗಳು ಶಾಲು ಹೊದೆಸಿ, ಪುಷ್ಪಗುತ್ಛ, ಸ್ಮರಣಿಕೆಯನ್ನಿತ್ತು ಗೌರವಿಸಿದರು.
ವೇದಿಕೆಯಲ್ಲಿ ಸಂಸದ ಗೋಪಾಲ್ ಶೆಟ್ಟಿ, ಕರ್ನಾಟಕ ಬಿಜೆಪಿ ಶಾಸಕ ಸಿ. ಟಿ. ರವಿ, ಆದಾಯ ತೆರಿಗೆಯ ಅಸಿಸ್ಟೆಂಟ್ ಕಮಿಷನರ್ ನಿವ್ಯಾ ಪಿ. ಶೆಟ್ಟಿ ಐಆರ್‌ಎಸ್, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಉಪಾಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್ ಎಸ್. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್ ಆರ್. ಶೆಟ್ಟಿ ಐಕಳ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪ ಕಾರ್ಯಾಧ್ಯಕ್ಷ
ಸುಬ್ಬಯ್ಯ ಎ. ಶೆಟ್ಟಿ, ಕಾರ್ಯದರ್ಶಿ ಖಾಂದೇಶ್ ಭಾಸ್ಕರ್ ವೈ. ಶೆಟ್ಟಿ, ಕೋಶಾಧಿಕಾರಿ ಸುರೇಶ್ ಬಿ. ಶೆಟ್ಟಿ ಮರಾಠ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್. ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್ ವಿ. ಶೆಟ್ಟಿ ಅವರು ಉಪಸ್ಥಿತರಿದ್ದರು.
ಚಿತ್ರ-ವರದಿ : ಪ್ರೇಮನಾಥ್ ಶೆಟ್ಟಿ ಮುಂಡ್ಕೂರು.