ಮುಂಬಯಿ: ಹೊಸ ನಗರ ಶ್ರೀ ರಾಮಚಂದ್ರ ಮಠದ ಶ್ರೀ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಗೋಸ್ವರ್ಗ ಸಂವಾದ ಎಂಬ ದೇಸಿ ಗೋವುಗಳ ಸಂವರ್ಧನ ಮಹಾ ಅಭಿಯಾನ ಕುರಿತು ಜಾಗೃತಿ ಕಾರ್ಯಕ್ರಮವು ಜು. 1 ರಂದು ಅಪರಾಹ್ನ 2 ರಿಂದ ಕುರ್ಲಾ ಪೂರ್ವದ ಬಂಟರ ಭವನದ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯ ಕ್ರಮಗಳೊಂದಿಗೆ ಜರಗಿತು.
ಇದೇ ಸಂದರ್ಭದಲ್ಲಿ ಹೊಸನಗರ ಶ್ರೀ ರಾಮಚಂದ್ರ ಮಠದ ಪೂಜ್ಯನೀಯ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರನ್ನು ಬಂಟರ ಸಂಘ ಮುಂಬಯಿ ವತಿಯಿಂದ ಶಾಲು ಹೊದೆಸಿ, ತುಳಸಿ ಹಾರವನ್ನು ತೊಡಿಸಿ, ಫಲಪುಷ್ಪವನ್ನಿತ್ತು ಗೌರವಿಸಿ ವಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ವಿಶ್ವ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಆರ್ಗಾನಿಕ್ ಇಂಡಸ್ಟಿÅàಸ್ ಲಿಮಿಟೆಡ್ ಇದರ ಮುಖ್ಯ ಆಡಳಿತ ನಿರ್ದೇಶಕ ಆನಂದ ಶೆಟ್ಟಿ, ಬಂಟರ ಸಂಘ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಡಾ| ಮನೋಹರ ಹೆಗ್ಡೆ, ಉದ್ಯಮಿ ಬೊಳ್ನಾಡುಗುತ್ತು ಚಂದ್ರಹಾಸ ರೈ, ಬಂಟರ ಸಂಘ ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ, ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ವಿಠuಲ್ ಆಳ್ವ, ಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್ ಪಕ್ಕಳ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ, ಬೆಳ್ಳಂಪಳ್ಳಿ ಬಾಲಕೃಷ್ಣ ಹೆಗ್ಡೆ, ಜಯಪ್ರಕಾಶ್ ಶೆಟ್ಟಿ, ನವೀನ್ ಶೆಟ್ಟಿ ಇನ್ನಬಾಳಿಕೆ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್ ರೈ ಮೊದಲಾದವರು ಉಪಸ್ಥಿತರಿದ್ದರು.
ಅಪರಾಹ್ನ 2 ರಿಂದ ಸಂಜೆ 4 ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಕರ್ನಾಟಕದ ಹೆಸರಾಂತ ಗಾಯಕ, ನಿರ್ದೇಶಕ ಶ್ರೀ ಶಂಕರ ಶಾನುಭಾಗ್ ಅವರಿಂದ, ಕಲಾಸೌರಭದ ಸಂಯೋಜನೆಯಲ್ಲಿ ಭಕ್ತಿ ಸಂಗೀತ ರಸಧಾರೆ ನಡೆಯಿತು. ಮುಂಬಯಿಯ ವಿವಿಧ ಜಾತೀಯ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಶ್ರೀ ರಾಮಚಂದ್ರಾಪುರ ಮಠ ಮುಂಬಯಿ ವಲಯದ ಪ್ರಕಾಶ್ ಭಟ್, ಈಶ್ವರಿ ಭಟ್, ಉಷಾ ಭಟ್, ಮನೋರಂಜನಿ ರಮಣ ಭಟ್, ಬಾಲಕೃಷ್ಣ ಭಂಡಾರಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಚಿತ್ರ-ವರದಿ : ಸುಭಾಷ್ ಶಿರಿಯಾ