ಪುಣೆ: ಬಂಟರ ಸಂಘ ಪಿಂಪ್ರಿ-ಚಿಂಚ್ವಾಡ್ ಇದರ ಮಹಿಳಾ ವಿಭಾಗದ ವತಿಯಿಂದ ಸಮಾಜಬಾಂಧವ ಮಹಿಳೆಯರಿಗಾಗಿ ಆಯೋಜಿಸಿದ ಅರಸಿನ ಕುಂಕುಮ ಕಾರ್ಯಕ್ರಮವು ಜ. 23 ರಂದು ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಕಿರು ಸಭಾಗೃಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಸಮಿತಿ ಕಾರ್ಯಾಧ್ಯಕ್ಷೆ ಸುಪ್ರಿಯಾ ಜೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್. ಶೆಟ್ಟಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆಯಿತ್ತು ಸೇರಿದ್ದ ಮಹಿಳೆಯರಿಗೆ ಶುಭ ಹಾರೈಸಿದರು.
ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಪ್ರಿಯಾ ಜೆ. ಶೆಟ್ಟಿ ಸ್ವಾಗತಿಸಿ ಮಾತನಾಡಿ, ನಮ್ಮ ಮಹಿಳಾ ವಿಭಾಗದ ವತಿಯಿಂದ ಪ್ರತೀ ವರ್ಷ ಮಹಿಳಾ ಬಾಂಧವರಿಗಾಗಿ ಅರಸಿನ ಕುಂಕುಮ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿರುತ್ತೇವೆ. ಅದೇ ರೀತಿ ಸಮಿತಿ ಸದಸ್ಯರೆಲ್ಲರ ಸಹಕಾರದೊಂದಿಗೆ ಸಮಾಜದ ಮಹಿಳೆಯರನ್ನೆಲ್ಲ ಒಗ್ಗೂಡಿಸಿಕೊಂಡು ಇಂದು ಕಾರ್ಯಕ್ರಮವನ್ನು ಆಯೋಜಿಸಿ ಸಂಭ್ರಮಮಿಸುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಸನಾತನ ಧಾರ್ಮಿಕ ಮಹತ್ವವನ್ನು ಸಾರುವ ಅರಸಿನ ಕುಂಕುಮ ಕಾರ್ಯಕ್ರಮದಿಂದ ನಮ್ಮೊಳಗಿನ ಪ್ರೀತಿ ಬಾಂಧವ್ಯವೂ ವೃದ್ಧಿಯಾಗುತ್ತದೆ. ಮುಖ್ಯವಾಗಿ ನಮ್ಮ ಯುವ ಪೀಳಿಗೆಗೂ ನಮ್ಮ ಸಾಂಸ್ಕೃತಿಕ, ಧಾರ್ಮಿಕ ಆಚರಣೆಗಳ ಮಹತ್ವ ಅರಿವಾಗಬೇಕೆನ್ನುವ ಉದ್ದೇಶ ನಮ್ಮದಾಗಿದೆ. ನಮ್ಮ ಮಹಿಳಾ ವಿಭಾಗದ ಸದಸ್ಯೆಯರೆಲ್ಲರೂ ಸಹಕಾರ ನೀಡಿ ಕಾರ್ಯಕ್ರಮಕ್ಕೆ ಬೆಂಬಲಿಸಿ¨ªಾರೆ. ವರ್ಷವಿಡೀ ಸಂಘದ ವಿವಿಧ ಕಾರ್ಯಚಟುವಟಿಕೆಗಳಲ್ಲಿ ನಮ್ಮ ಸಮಾಜದ ಮಹಿಳೆಯರೆಲ್ಲರೂ ಭಾಗವಹಿಸಿ ಸಹಕಾರ ನೀಡಬೇಕು ಎಂದರು.
ಮಹಿಳಾ ವಿಭಾಗದ ಸಲಹಾ ಸಮಿತಿ ಸದಸ್ಯೆಯರಾದ ಭಾರತಿ ಎಸ್. ಶೆಟ್ಟಿ, ಪ್ರೇಮಾ ವಿ. ಶೆಟ್ಟಿ, ಜಯಲಕ್ಷ್ಮೀ ಪಿ. ಶೆಟ್ಟಿ, ಕ್ಷಮಾ ಎಲ್. ಶೆಟ್ಟಿ ಮತ್ತು ತನುಜಾ ಎ. ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಮೊದಲಿಗೆ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಮಹಿಳಾ ಸದಸ್ಯರು ದೇವರ ಅಲಂಕೃತ ಮಂಟಪಕ್ಕೆ ಆರತಿ ಬೆಳಗಿ ಪ್ರಾರ್ಥಿಸಿದರು. ಸೇರಿದ್ದ ನೂರಾರು ಮಹಿಳೆಯರಿಗೆ ಅರಿಸಿನ ಕುಂಕುಮ ಹಚ್ಚಿ ಹೂ, ನೆನಪಿನ ಕಾಣಿಕೆಗಳನ್ನು ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿ ಸಂಘದ ಮಾಜಿ ಅಧ್ಯಕ್ಷರಾದ ಉದ್ಯಮಿ ಎರ್ಮಾಳ್ ನಾರಾಯಣ ಕೆ. ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ಸೀರೆಗೊಂದು ಸವಾಲ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಬಹುಮಾನ ಪಡೆದ ಮಹಿಳಾ ವಿಭಾಗದ ಸದಸ್ಯೆ ಸುನೀತಾ ರಾಕೇಶ್ ಶೆಟ್ಟಿಯವರನ್ನು ಸತ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಸತೀಶ್ ಶೆಟ್ಟಿ, ಬಂಟ್ಸ್ ಅಸೋಸಿಯೇಶನ್ ಪುಣೆ ಇದರ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೀಪಾ ಎ. ರೈ, ಶ್ರೀ ಗುರುದೇವಾ ಸೇವಾ ಬಳಗದ ವಜ್ರಮಾತಾ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರೇಮಾ ಶೆಟ್ಟಿ ಉಪಸ್ಥಿತರಿದ್ದರು.
ಮಹಿಳಾ ವಿಭಾಗದ ಉಪಕಾರ್ಯಧ್ಯಕ್ಷೆ ಪ್ರಭಾ ಎಸ್. ಶೆಟ್ಟಿ, ಕಾರ್ಯದರ್ಶಿ ತಾರಾ ಜೆ. ಶೆಟ್ಟಿ, ಕೋಶಾಧಿಕಾರಿ ಸುನೀತಾ ಜಿ. ಶೆಟ್ಟಿ, ಜೊತೆ ಕಾರ್ಯದರ್ಶಿ ಡಾ| ಸ್ಮಿತಾ ಎಸ್. ಚೌಟ, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷೆ ಮಲ್ಲಿಕಾ ಡಿ. ಶೆಟ್ಟಿ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷೆ ಜ್ಯೋತಿ ವಿ. ಶೆಟ್ಟಿ, ಸುನೀತಾ ಆರ್. ಶೆಟ್ಟಿ ಹಾಗೂ ಸೌಮ್ಯಾ ಆರ್. ಶೆಟ್ಟಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಪ್ರಾರಂಭದಲ್ಲಿ ಶ್ರೀ ಅಯ್ಯಪ್ಪ ಸೇವಾ ಸಂಘ ನೆಹರೂನಗರ ಪಿಂಪ್ರಿ ಇಲ್ಲಿನ ಮಹಿಳಾ ವಿಭಾಗದ ಸದಸ್ಯೆಯರು ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಸಂಘದ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು, ಸಮಾಜದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಗೆ ಲಘು ಉಪಾಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.
ಚಿತ್ರ-ವರದಿ : ಕಿರಣ್ ಬಿ. ರೈ ಕರ್ನೂರು