ಬಂಟರ ಸಂಘ ವಸಾಯಿ-ಡಹಾಣೂ : ಜೂ. 16; ಆರ್ಥಿಕ ಸಹಾಯ ವಿತರಣೆ
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯ ವತಿಯಿಂದ ವರ್ಷಂಪ್ರತಿ ನೀಡುವ ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ನೀಡಲ್ಪಡುವ ವಿದ್ಯಾರ್ಥಿ ವೇತನ, ವಿಧವಾ ವೇತನ ಹಾಗೂ ವಿಕಲ ಚೇತನರಿಗೆ ಆರ್ಥಿಕ ಸಹಾಯ ವಿತರಣ ಕಾರ್ಯಕ್ರಮವು ಜೂ. 16ರಂದು ಬೆಳಗ್ಗೆ 10ರಿಂದ ನಲಸೋಪರ ಪಶ್ಚಿಮದ ಹೊಟೇಲ್ ಗ್ಯಾಲಕ್ಸಿ ಸಭಾಂಗಣದಲ್ಲಿ ನಡೆಯಲಿದೆ.
ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭವು ಬಂಟರ ಸಂಘ ಮುಂಬಯಿ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್ ಶೆಟ್ಟಿ ಮತ್ತು ಇತರ ಪದಾಧಿಕಾರಿಗಳು, ಸಂಘದ ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಕೋಶಾಧಿಕಾರಿ ಪ್ರವೀಣ್ ಬಿ. ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್ ಎಸ್. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್ ಶೆಟ್ಟಿ ಐಕಳ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್. ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್ ಶೆಟ್ಟಿ, ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಜಯಂತ್ ಪಕ್ಕಳ ಹಾಗೂ ಸಂಚಾಲಕ ಶಶಿಧರ ಕೆ. ಶೆಟ್ಟಿ ಅವರ ನೇತೃತ್ವದಲ್ಲಿ ಜರಗಲಿದೆ.
ಪ್ರಾದೇಶಿಕ ಸಮಿತಿಯ ಉಪಕಾರ್ಯಾಧ್ಯಕ್ಷ ಕರ್ನೂರು ಶಂಕರ ಆಳ್ವ, ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಕಣಂಜಾರು, ಕೋಶಾಧಿಕಾರಿ ವಿಜಯ್ ಎಂ. ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ನಾರಾಯಣ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಾ ಅಶೋಕ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸುಪ್ರೀತ್ ಶೆಟ್ಟಿ, ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷೆ ಮಂಜುಳಾ ಆನಂದ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿ, ಇತರ ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಕಾರ್ಯಾಧ್ಯಕ್ಷರುಗಳು, ಸರ್ವ ಸದಸ್ಯರ ಸಂಪೂರ್ಣ ಸಹಕಾರ ದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಬಹುಜನ ವಿಕಾಸ ಅಘಾಡಿ ವಸಾಯಿ ಕ್ಷೇತ್ರದ ಶಾಸಕ ಹಿತೇಂದ್ರ ಠಾಕೂರ್, ವಸಾಯಿ ವಿರಾರ್ ಮಹಾನಗರ ಪಾಲಿಕೆಯ ಪ್ರಥಮ ಮಹಾಪೌರ ರಾಜೀವ್ ಪಾಟೀಲ್ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಧನ ಸಹಾಯ ವಿತರಣೆಯೊಂದಿಗೆ ವಸಾಯಿ, ಡಹಾಣೂವರೆಗಿನ ಕಾರ್ಯವ್ಯಾಪ್ತಿಯಲ್ಲಿ ಬರುವ ಬಂಟ ಸಮಾಜ ಬಾಂಧವರ ವಿದ್ಯಾರ್ಥಿಗಳಿಗೆ ಎಚ್‌ಎಸ್‌ಸಿ ಹಾಗೂ ಎಸ್‌ಎಸ್‌ಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಗುವುದು.
ಎಚ್‌ಎಸ್‌ಸಿದಲ್ಲಿ ಶೇ. 80 ಮತ್ತು ಎಸ್‌ಎಸ್‌ಸಿಯಲ್ಲಿ ಶೇ. 85 ಕ್ಕಿಂತ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಸಮಾಜ ಬಾಂಧವರು ವಿದ್ಯಾರ್ಥಿ ವೇತನ, ವಿಧವಾ ವೇತನ, ವಿಕಲ ಚೇತನ ಸ್ವೀಕರಿಸಲಿರುವವರು ಕೌಂಟರ್ ಸ್ಲಿಪ್‌ನ್ನು ಖಡ್ಡಾಯವಾಗಿ ತರತಕ್ಕದ್ದು. ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಸಮಿತಿಯ ಪ್ರಕಟನೆ ತಿಳಿಸಿದೆ.