Advertisement

ಬಂಟರ ಸಂಘ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿ:ಆರ್ಥಿಕ ನೆರವು ವಿತರಣೆ

02:55 PM Jun 20, 2017 | Team Udayavani |

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿವರ್ಷ ನೀಡಲ್ಪಡುವ ಆರ್ಥಿಕ ಸಹಾಯ ವಿತರಣೆ ಕಾರ್ಯಕ್ರಮವು ಸಂಘದ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯ ವತಿಯಿಂದ  ನಡೆಯಿತು.

Advertisement

ನಲಸೋಪರ ಪಶ್ಚಿಮದ ಗ್ಯಾಲಕ್ಸಿ ಹೊಟೇಲ್‌ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟರ ಸಂಘ ಮುಂಬಯಿ ಇದರ ಗೌರವ ಪ್ರಧಾನ ಕೋಶಾಧಿಕಾರಿ ಸಿಎ ಐ. ಆರ್‌. ಶೆಟ್ಟಿ ಅವರು ವಹಿಸಿ ಕಾರ್ಯಕ್ರಮವನ್ನು ದೀಪಪ್ರಜ್ವಲಿಸಿ ಉದ್ಘಾಟಿಸಿ ಶುಭಹಾರೈಸಿದರು.

ವೇದಿಕೆಯಲ್ಲಿ ಬಂಟರ ಸಂಘ ಮುಂಬಯಿ ಇದರ ಪಶ್ಚಿಮ ಪ್ರಾದೇಶಿಕ ಸಮಿತಿಗಳ ಸಮನ್ವಯ ಕಾರ್ಯಾಧ್ಯಕ್ಷ ಮುಂಡಪ್ಪ ಎಸ್‌. ಪಯ್ಯಡೆ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ನಗ್ರಿಗುತ್ತು ವಿವೇಕ್‌ ಶೆಟ್ಟಿ, ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಶಶಿಧರ ಕೆ. ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಮೋಹನ್‌ ವಿ. ಶೆಟ್ಟಿ, ಸಂಚಾಲಕ ಕರ್ನಿರೆ ಶ್ರೀಧರ ಶೆಟ್ಟಿ, ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ್‌ ಪಿ. ಶೆಟ್ಟಿ, ಗೌರವ ಕೋಶಾಧಿಕಾರಿ ವಿಜಯ ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶರ್ಮಿಳಾ ಎಸ್‌. ಶೆಟ್ಟಿ, ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷ ಮಂಜುಳಾ ಎ. ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಸಮಿತಿಯ ನೂರಾರು ವಿದ್ಯಾರ್ಥಿಗಳಿಗೆ ಗಣ್ಯರ ಸಮ್ಮುಖದಲ್ಲಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. 

ಸಮಿತಿಯ ಪದಾಧಿಕಾರಿ ಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 
 

Advertisement
Advertisement

Udayavani is now on Telegram. Click here to join our channel and stay updated with the latest news.

Next