ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾ. 8ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಯಿತು.
ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಇವರ ಅಧ್ಯಕ್ಷತೆಯಲ್ಲಿ ಕಾರುಕ್ರಮವನ್ನು ದೀಪಪ್ರಜ್ವಲಿಸಿ ಉದ್ಘಾಟಿಸಿದರು. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ನೇತೃತ್ವವನ್ನು ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ ಇವರು ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಖ್ಯಾತ ನಟಿ, ನಿರ್ಮಾಪಕಿ, ಬ್ಯೂಟಿ ಕ್ವೀನ್, ಯುಎನ್ ಎನ್‌ವಾಯರ್°ಮೆಂಟ್ ರಾಯಭಾರಿ ದಿಯಾ ಮಿರ್ಜಾ ಹಾಗೂ ಗೌರವ ಅತಿಥಿಗಳಾಗಿ ಕಸ್ಟಮ್ ಮತ್ತು ಜಿಎಸ್‌ಟಿ ಎಡಿಷನಲ್ ಕಮಿಶನರ್ ರೀನಾ ಶೆಟ್ಟಿ ಐ. ಆರ್. ಎಸ್. ಹಾಗೂ ಕೇರೈಡ್ ಹೊಟೇಲ್ ಗೋವಾ ಇದರ ನಿರ್ದೇಶಕಿ ಶಕಿಲಾ ಪಿ. ವಿ. ಶೆಟ್ಟಿ ಇವರು ಭಾಗವಹಿಸಿದ್ದರು.
ಸಮಾರಂಭದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದ ಸಾಧಕಿ, ಪ್ರತಿಷ್ಠಿತ ರಾಧಾಬಾಯಿ ಟಿ. ಭಂಡಾರಿ ಪ್ರಶಸ್ತಿ ಪುರಸ್ಕೃತೆ ಡಾ| ಲತಾ ಶೆಟ್ಟಿ, ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್. ಹೆಗ್ಡೆ, ಉಪ ಕಾರ್ಯಾಧ್ಯಕ್ಷೆ ಉಮಾ ಕೆ. ಶೆಟ್ಟಿ, ಗೌರವ ಕಾರ್ಯದರ್ಶಿ ಚಿತ್ರಾ ಆರ್. ಶೆಟ್ಟಿ, ಗೌರವ ಕೋಶಾಧಿಕಾರಿ ಆಶಾ ವಿ. ರೈ, ಜತೆ ಕಾರ್ಯದರ್ಶಿ ಮನೋರಮಾ ಎನ್. ಶೆಟ್ಟಿ, ಜತೆ ಕೋಶಾಧಿಕಾರಿ ರತ್ನಾ ಪಿ. ಶೆಟ್ಟಿ ಅವರು ಉಪಸ್ಥಿತರಿದ್ದರು.
ಈ ಸಂದರ್ಭ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸ್ಮಾರಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಬಂಟರ ಸಂಘದ ಒಂಭತ್ತು ಪ್ರಾದೇಶಿಕ ಸಮಿತಿಗಳು, ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸದಸ್ಯೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಬಂಟರ ಸಂಘದ ಮಹಿಳೆಯರು, ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಪ್ರಾದೇಶಿಕ ಸಮಿತಿ ಹಾಗೂ ಯುವ ವಿಭಾಗದ ಸದಸ್ಯ-ಸದಸ್ಯೆಯರು ಮತ್ತಿತರರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂ ಡಿದ್ದರು.
ಚಿತ್ರ-ವರದಿ : ಪ್ರೇಮನಾಥ್ ಶೆಟ್ಟಿ ಮುಂಡ್ಕೂರು.