Advertisement
ಸುಮಾರು ಅರ್ಧ ಗಂಟೆ ಕಾದ ಬಳಿಕ ವಿದ್ಯಾರ್ಥಿನಿಯರು ಬುರ್ಖಾ ತೆಗೆದು ಪರೀಕ್ಷೆ ಬರೆದಿದ್ದಾರೆ.
Related Articles
Advertisement
ಶುಕ್ರವಾರ ಉರ್ದು ಮಾಧ್ಯಮ ಪದವಿ ಪರೀಕ್ಷೆ ಬರೆಯಲು ರಂಗಾ ರೆಡ್ಡಿ ಮಹಿಳಾ ಪದವಿ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಬುರ್ಖಾ ಧರಿಸಿ ಪರೀಕ್ಷಾ ಕೇಂದ್ರ ಪ್ರವೇಶಿಸಿದ್ದರು. ಪರೀಕ್ಷಾ ಕೇಂದ್ರದ ಸಿಬ್ಬಂದಿಯು ಪರೀಕ್ಷಾ ಕೊಠಡಿ ಪ್ರವೇಶಿಸುವ ಮುನ್ನ ಬುರ್ಖಾ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದರು. ಸುಮಾರು ಅರ್ಧ ಗಂಟೆ ಕಾಲ ಅವರನ್ನು ಪರೀಕ್ಷಾ ಕೊಠಡಿಯಿಂದ ಹೊರಗೆ ನಿಲ್ಲಿಸಲಾಗಿತ್ತು. ಕೊನೆಗೆ ಪರೀಕ್ಷೆಗೆ ಹಾಜರಾಗಲು ಬುರ್ಖಾ ತೆಗೆಯಬೇಕಾಯಿತು ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.
ನಾಳೆಯಿಂದ ಬುರ್ಖಾ ಧರಿಸದಂತೆ ಕಾಲೇಜು ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಆದರೆ, ಇದು ಪರೀಕ್ಷಾ ನಿಯಮಗಳಿಗೆ ವಿರುದ್ಧವಾಗಿದೆ. ಈ ಬಗ್ಗೆ ನಮ್ಮ ಪೋಷಕರು ಗೃಹ ಸಚಿವ ಮಹಮೂದ್ ಅಲಿ ಅವರಿಗೆ ದೂರು ನೀಡಿದ್ದಾರೆ. ಬುರ್ಖಾ ಧರಿಸಿದ ವಿದ್ಯಾರ್ಥಿನಿಯರನ್ನು ಕೇಂದ್ರದೊಳಗೆ ಬಿಡದಿರುವುದು ಸರಿಯಲ್ಲ ಎಂದು ವಿದ್ಯಾರ್ಥಿಯೊಬ್ಬರು ಹೇಳಿದರು.