Advertisement
ಸಿದ್ದರಾಮಯ್ಯ ಅವರು ಮಾಡಿರುವ ಸರಣಿ ಟ್ವೀಟ್ ಗಳು ಹೀಗಿವೆ
Related Articles
Advertisement
”ಜಿ.ಎಸ್.ಡಿ.ಪಿ ಯಲ್ಲಿ ಶೇಕಡಾವಾರು ಸಾಲದ ಪ್ರಮಾಣ ನಮ್ಮ ಸರ್ಕಾರದ ಅವಧಿಯಲ್ಲಿ 17 ರಿಂದ 20 ರ ಒಳಗೆ ಇತ್ತು. ಇದು ದೇಶದಲ್ಲಿಯೇ ಅತ್ಯುತ್ತಮ ನಿರ್ವಹಣೆಯಾಗಿತ್ತು. ಆದರೆ ಈಗ ಅದು 26.9 ರಷ್ಟಾಗಿದೆ. ನಿಯಮಗಳ ಪ್ರಕಾರ ಇದು 25% ಮೀರುವಂತಿಲ್ಲ.ಸಾಲಕ್ಕಾಗಿ ನಿಯಮಗಳನ್ನೇ ತಿದ್ದಿದವರು ನೀವಲ್ಲವೇ” ಎಂದು ಪ್ರಶ್ನಿಸಿದ್ದಾರೆ.
”2013 ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದ ಜಿ.ಎಸ್.ಡಿ.ಪಿ ಕೇವಲ 6,01,582 ಕೋಟಿ ಇತ್ತು. ನಾನು ಅಧಿಕಾರದಿಂದ ಇಳಿಯುವಾಗ ಅದು ರೂ.14,08,585 ಕೋಟಿಗೆ ಏರಿಕೆಯಾಗಿತ್ತು.’ನಾವು 2012-13 ರಲ್ಲಿ ಅಧಿಕಾರಕ್ಕೆ ಬಂದಾಗ ಇದ್ದ ಸಾಲ ರೂ. 1,21,000 ಕೋಟಿ. 2017-18 ರಲ್ಲಿ ನಮ್ಮ ಸರ್ಕಾರದ ಕೊನೆ ಬಜೆಟ್ ವೇಳೆ ಇದ್ದ ಸಾಲ ರೂ.2,42,420 ಕೋಟಿ”. ಎಂದು ವಿವರಗಳನ್ನು ನೀಡಿದ್ದಾರೆ.
”ಬಿಜೆಪಿ ಸರ್ಕಾರದ ಅವಧಿಯಲ್ಲಿನ ಸಾಲದ ಪ್ರಮಾಣ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಒಟ್ಟಾರೆ ಶೇ. 94.18 ರಷ್ಟು ಏರಿಕೆಯಾಗಿತ್ತು. ನಮ್ಮ ಸರ್ಕಾರದ ಅವಧಿಯಲ್ಲಿ 2013-18 ರವರೆಗೆ ಏರಿಕೆಯಾಗಿದ್ದು ಶೇಕಡಾ 78 ರಷ್ಟು ಮಾತ್ರ.”
”ಕಳೆದ ಎರಡೂಕಾಲು ವರ್ಷಗಳ ರಾಜ್ಯ ಬಿಜೆಪಿ ಸರ್ಕಾರದ ಮತ್ತು ಏಳು ವರ್ಷಗಳ ನರೇಂದ್ರ ಮೋದಿ ಸರ್ಕಾರದ ವೈಫಲ್ಯಗಳು ಜನರನ್ನು ಭ್ರಮನಿರಸನಗೊಳಿಸಿದೆ. 2014 ರಲ್ಲಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ನೀಡಿದ್ದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ”.
”4ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ ರಾಜ್ಯಕ್ಕೆ 38,000 ಕೋಟಿ ರೂಪಾಯಿ ತೆರಿಗೆ ಪಾಲು ಬರುತ್ತಿತ್ತು. ಈಗದು 20,000 ಕೋಟಿ ರೂಪಾಯಿಗೆ ಬಂದು ನಿಂತಿದೆ. ಕೇಂದ್ರದ ಸಹಾಯಧನ, ಜಿ.ಎಸ್.ಟಿ ಪರಿಹಾರದ ಹಣ ಇವೆಲ್ಲಾ ಕಡಿಮೆಯಾಗಿ ರಾಜ್ಯಕ್ಕೆ ಕನಿಷ್ಟ ರೂ.40,000 ಕೋಟಿ ನಷ್ಟವಾಗ್ತಿದೆ”. ಎಂದು ಎಲ್ಲಾ ಟ್ವೀಟ್ ಅಂತ್ಯದಲ್ಲಿ ಬುರುಡೆ ಬೊಮ್ಮಾಯಿ ಟ್ಯಾಗ್ ಮಾಡುವ ಮೂಲಕ ಭರ್ಜರಿ ತಿರುಗೇಟು ನೀಡಿದ್ದಾರೆ.