Advertisement

ಸಾರ್ವಜನಿಕರೆದುರೇ ಬಸ್ ಏಜೆಂಟ್ ನ ಬರ್ಬರ ಕೊಲೆ: ಅನೈತಿಕ ಸಂಬಂಧ ಕಾರಣ ಶಂಕೆ

01:59 PM Jun 21, 2022 | Team Udayavani |

ದಾವಣಗೆರೆ: ಚನ್ನಗಿರಿ ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ಖಾಸಗಿ ಬಸ್ ಏಜೆಂಟ್ ಒಬ್ಬರನ್ನು ಚಾಕುವಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿವೆ.

Advertisement

ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಜಾಕೀರ್ ಹತ್ಯೆಗೀಡಾದ ಏಜೆಂಟ್ ಎಂದು ಗುರುತಿಸಲಾಗಿದೆ. ನಲ್ಲೂರಿನಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದ ಸಲೀಂ ಎಂಬಾತ ಕೊಲೆ ಮಾಡಿದ್ದಾನೆ. ಹತ್ಯೆ ಬಳಿಕ ಆರೋಪಿ ಚನ್ನಗಿರಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾ‌ನೆ.

ಚನ್ನಗಿರಿ ಪಟ್ಟಣದ ತರಳಬಾಳು ವೃತ್ತದಲ್ಲಿ ಘಟನೆ ನಡೆದಿದೆ. ಎಂದಿನಂತೆ ನಲ್ಲೂರಿನಿಂದ ಚನ್ನಗಿರಿಗೆ ಜಾಕೀರ್ ಬಂದಿದ್ದಾನೆ. ಜಾಕೀರ್ ಆಗಮಿಸುತ್ತಿದ್ದಂತೆ ಬೈಕ್ ನಲ್ಲಿ ಬಂದ ಸಲೀಂ ಏಕಾಏಕಿಯಾಗಿ ಜಾಕೀರ್ ಗೆ ಚಾಕುವಿನಿಂದ ಚುಚ್ಚಿದ್ದಾನೆ. ರಕ್ತಸಿಕ್ತವಾಗಿ ಬಿದ್ದ ಬಳಿಕವೂ ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ:ಶಿವಮೊಗ್ಗ: ಬಂಧಿಸಲು ಹೋದ ಪೊಲೀಸ್‌ ಪೇದೆಗಳಿಗೆ ಚಾಕು ಇರಿದು ಪರಾರಿಯಾದ ಆರೋಪಿ!

ಜಾಕೀರ್ ಗೆ ಮಾರಣಾಂತಿಕವಾಗಿ ಚುಚ್ಚುವಾಗ ಸ್ಥಳದಲ್ಲಿದ್ದ ಕೆಲವರು, ಬಿಡಿಸಲು ಪ್ರಯತ್ನ ನಡೆಸಿದರು. ಮನಬಂದಂತೆ ಚುಚ್ಚುತ್ತಿದ್ದ ಕಾರಣ ಹತ್ತಿರ ಹೋಗಲು ಹೆದರಿದ್ದಾರೆ.

Advertisement

ಪ್ರಾಥಮಿಕ ಮಾಹಿತಿ ಪ್ರಕಾರ ಅನೈತಿಕ ಸಂಬಂಧ ಅಥವಾ ಆಸ್ತಿ ವಿವಾದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ‌. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next