Advertisement

ಭೀಕರ ಅಪಘಾತ: 41ಮಂದಿ ದಾರುಣ ಸಾವು, ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಮೃತದೇಹಗಳು

09:49 AM Nov 26, 2020 | Mithun PG |

ಬ್ರಾಸಿಲಿಯಾ: ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು,  ಸುಮಾರು 41 ಜನರು ದಾರುಣವಾಗಿ ಮೃತಪಟ್ಟು, 10 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ (ನ. 25) ಬ್ರೆಜಿಲ್ ನಲ್ಲಿ ನಡೆದಿದೆ.

Advertisement

ಸಾವೋಪೋಲೋ ರಾಜ್ಯದ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಜವಳಿ ಕಾರ್ಖಾನೆಯ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ  ಬಸ್, ಟ್ರಕ್ ಗೆ ಮುಖಾಮುಖಿ ಢಿಕ್ಕಿಯಾಗಿದೆ. ಪರಿಣಾಮವಾಗಿ 41 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.

ಅವಶೇಷಗಳಡಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಿಸಲಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ನಜ್ಜುಗುಜ್ಜಾಗಿರುವ ವಾಹನಗಳ ಮಧ್ಯೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಇದನ್ನೂ ಓದಿ: ಆರೋಗ್ಯದಲ್ಲಿ ಏರುಪೇರು: ಮಾಜಿ ಸಚಿವ ರೋಷನ್ ಬೇಗ್ ಆಸ್ಪತ್ರೆಗೆ ದಾಖಲು

Advertisement

ಟ್ರಕ್ ಮತ್ತು ಬಸ್ ನಲ್ಲಿ ಎಷ್ಟು ಮಂದಿ ಇದ್ದರು ಎಂಬುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ಸ್ಥಳೀಯ ಮಾಧ್ಯಮದ ಪ್ರಕಾರ 53 ಜನರು ಇದ್ದರು ಎನ್ನಲಾಗಿದೆ.

ಸಾವೋ ಫೋಲೋ ದಿಂದ 340 ಕಿ. ಮೀ ದೂರದಲ್ಲಿ ಈ ಅಪಘಾತ ಸಂಭವಿಸಿದ್ದು, ಈ ಮೊದಲು 32 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿತ್ತು.  ಇದೀಗ 41 ಜನರು ಕೊನೆಯುಸಿರೆಳೆದಿದ್ದು, ಸ್ಥಳದಲ್ಲಿ ಇನ್ನು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ  ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಬ್ರೆಜಿಲ್ ನಲ್ಲಿ ರಸ್ತೆ ಅಪಘಾತ ಮೂಲಕ ಸುಮಾರು 5,332 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:  ಮಂಗಳೂರು: ಬೊಕ್ಕ ಪಟ್ನ ಬೋಟ್ ಯಾರ್ಡ್ ಬಳಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ; ಕೊಲೆ ಶಂಕೆ !

Advertisement

Udayavani is now on Telegram. Click here to join our channel and stay updated with the latest news.

Next