Advertisement

KSRTC: ಬಸ್‌ಗಳಿಗೆ ಬೆಂಕಿ ಹಚ್ಚುವ ಕೃತ್ಯವನ್ನು ಸಹಿಸೆವು: ಸಚಿವ ರಾಮಲಿಂಗಾ ರೆಡ್ಡಿ

11:25 PM Nov 01, 2023 | Team Udayavani |

ರಾಮನಗರ: ಮಹಾ ರಾಷ್ಟ್ರದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಿಗೆ ಬೆಂಕಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲು ನಮ್ಮ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

Advertisement

ರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯಕ್ಕೂ ಮಹಾರಾಷ್ಟ್ರದ ಬಸ್ಸುಗಳು ಬರುತ್ತವಲ್ಲ, ನಮ್ಮ ರಾಜ್ಯದವರು ಆ ರೀತಿ ಮಾಡಿದ್ದಾರಾ? ಕಿಡಿಗೇಡಿ ಗಳ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಜತೆ ವ್ಯವಹರಿಸಿ ಸಮಸ್ಯೆಯನ್ನು ಪರಿಹರಿಸುವ ಜತೆಗೆ ನಮ್ಮ ರಾಜ್ಯದ ಬಸ್ಸುಗಳಿಗೆ ಭದ್ರತೆ ಕಲ್ಪಿಸುವಂತೆ ತಿಳಿಸಲಾಗುವುದು ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ನಡೆ ಯುತ್ತಿರುವ ಮೀಸಲಾತಿ ಹೋರಾಟಕ್ಕೂ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳನ್ನು ಸುಟ್ಟು ಹಾಕಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ಅವರ ಮೀಸಲಾತಿಗೆ ಅವರು ಹೋರಾಟ ಮಾಡಿಕೊಳ್ಳಲಿ. ಈ ರೀತಿ ಉದ್ಧಟತನ ತೋರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತ್ಯೇಕ ರಾಜ್ಯ ಮುಗಿದ ಕಥೆ
ಪ್ರತ್ಯೇಕ ರಾಜ್ಯದ ಚರ್ಚೆ ಮುಗಿದ ವಿಚಾರ. ಕನ್ನಡ ಮಾತನಾಡುವವರೆಲ್ಲ ಒಂದೇ. ಕರ್ನಾಟಕ ಏಕೀಕರಣಕ್ಕೆ ಹೋರಾಟ ಮಾಡಿದ ಎಲ್ಲ ಮಹನೀ ಯರಿಗೂ ಧನ್ಯವಾದ ಸಲ್ಲಿಸುತ್ತೇನೆ. ಪ್ರತ್ಯೇಕ ರಾಜ್ಯದ ಕೂಗಿಗೆ ಮಾನ್ಯತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next