Advertisement

ಪೇರಡ್ಕ ಸಮೀಪ ಬಸ್‌-ಕಾರು ಢಿಕ್ಕಿ: ಇಬ್ಬರಿಗೆ ಗಾಯ

08:17 PM Apr 25, 2023 | Team Udayavani |

ಸುಬ್ರಹ್ಮಣ್ಯ: ಬಸ್‌ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ -ಮರ್ದಾಳ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಪೇರಡ್ಕ ಸಮೀಪ ಮಂಗಳವಾರ ಸಂಭವಿಸಿದೆ.

Advertisement

ಧರ್ಮಸ್ಥಳ ಕಡೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಸುಬ್ರಹ್ಮಣ್ಯ ಕಡೆ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಕಾರಿನ ಹಿಂಬದಿ ಸೀಟಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು ಅವರನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳೆ ಬರುತ್ತಿದ್ದುದರಿಂದ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next