Advertisement

ಕಡಬ: ಬಸ್ –ಕಾರು ನಡುವೆ ಢಿಕ್ಕಿ: ಮಗು ಮೃತ್ಯು; ನಾಲ್ವರು ಗಂಭೀರ

02:03 PM Feb 13, 2023 | Team Udayavani |

ಕಡಬ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಗು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರದಂದು ನಡೆದಿದೆ.

Advertisement

ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದವರು ಬೆಂಗಳೂರು ಮೂಲದವರೆಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next