ಹೊಸದಿಲ್ಲಿ: ಚಾರ್ ಧಾಮ್ ಯಾತ್ರೆಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಕಮರಿಗೆ ಉರುಳಿ ಬಿದ್ದು 22 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ಭಾನುವಾರ ನಡೆದಿದೆ.
ಮಧ್ಯ ಪ್ರದೇಶದ ಪನ್ನಾ ಜಿಲ್ಲೆಯಿಂದ 28 ಯಾತ್ರಿಕರನ್ನು ಹೊತ್ತ ಬಸ್ಸು ಪ್ರಮುಖ ಯಾತ್ರಾ ಸ್ಥಳವಾದ ಯಮುನೋತ್ರಿ ಮಾರ್ಗವಾಗಿ ಸಾಗುತ್ತಿದ್ದ ವೇಳೆ ದಮ್ತಾ ಬಳಿ ಕಂದಕಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ, ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ಹದಿನೈದು ಮಂದಿಯ ಮೃತದೇಹವನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಉತ್ತರಾಖಂಡ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು. ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ ₹ 2 ಲಕ್ಷ ಮತ್ತು ಗಾಯಗೊಂಡವರಿಗೆ 50,000 ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.
ಇದನ್ನೂ ಓದಿ : ಹೈದರಾಬಾದ್ ಗ್ಯಾಂಗ್‌ರೇಪ್ ಪ್ರಕರಣ: ನಾಲ್ಕನೇ ಆರೋಪಿ ಬಂಧನ