ತಿರುವನಂತಪುರಂ: ಶಬರಿಮಲೆ ಯಾತ್ರಿಗಳು ತೆರಳುತ್ತಿದ್ದ ಬಸ್ ಪಲ್ಟಿಯಾಗಿ 20 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ( ಮಾ.28 ರಂದು) ಪತ್ತನಂತಿಟ್ಟ ಜಿಲ್ಲೆಯ ನಿಲಕ್ಕಲ್ ಬಳಿಯ ಎಲವುಂಕಲ್ ನಲ್ಲಿ ನಡೆದಿರುವುದು ವರದಿಯಾಗಿದೆ.
ಶಬರಿಮಲೆ ದರ್ಶನವನ್ನು ಮುಗಿಸಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಕಮರಿಗೆ ಉರುಳಿದೆ. ಪರಿಣಾಮ ತಮಿಳುನಾಡು ಮೂಲದ 9 ಮಕ್ಕಳು ಸೇರಿದಂತೆ ಒಟ್ಟು 64 ಪ್ರಯಾಣಿಕರಲ್ಲಿ 20 ಕ್ಕೂ ಹೆಚ್ಚಿನ ಮಂದಿಗೆ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: Encounter ಸ್ಪೆಷಲಿಸ್ಟ್ ದಯಾ ನಾಯಕ್ ಮತ್ತೆ ಎಟಿಎಸ್ ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗ!
ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಪತ್ತನಂತಿಟ್ಟ ಜನರಲ್ ಆಸ್ಪತ್ರೆಗೆ ಗಾಯಾಳುಗಳನ್ನು ರವಾನಿಸಲಾಗಿದೆ.
Related Articles
ಬಸ್ಸಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿಗಳು ಹೊರ ತೆಗೆದು ರಕ್ಷಿಸಿದ್ದಾರೆ.
ಬಸ್ಸಿನಲ್ಲಿದ್ದ ಪ್ರತಿಯೊಬ್ಬರನ್ನು ರಕ್ಷಿಸಲಾಗಿದೆ. ಓರ್ವ ವ್ಯಕ್ತಿಗೆ ಗಂಭೀರ ಸ್ವರೂಪದ ಏಟಾಗಿದೆ ಎಂದು ʼ ಮನೋರಮಾʼಕ್ಕೆ ದೇವಸ್ವಂ ಸಚಿವ ಕೆ ರಾಧಾಕೃಷ್ಣನ್ ತಿಳಿಸಿದ್ದಾರೆ.