Advertisement

ನಾಸಿಕ್ ನಲ್ಲಿ ಭೀಕರ ಅಪಘಾತ :ಬಸ್ಸಿಗೆ ಬೆಂಕಿ ತಗುಲಿ 9 ಪ್ರಯಾಣಿಕರು ಸಜೀವ ದಹನ, ಹಲವರು ಗಂಭೀರ

08:21 AM Oct 08, 2022 | Team Udayavani |

ನಾಸಿಕ್ : ಪ್ರಯಾಣಿಕರನ್ನು ಹೊತ್ತ ಬಸ್ಸೊಂದು ಟ್ರಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತಕೀಡಾಗಿ ಬೆಂಕಿ ಹೊತ್ತಿಕೊಂಡು ಒಂಬತ್ತು ಮಂದಿ ಪ್ರಯಾಣಿಕರು ಸಜೀವ ದಹನಗೊಂಡು ಹಲವರು ಗಂಭೀರ ಗಯಾಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

Advertisement

ನಾಸಿಕ್-ಔರಂಗಾಬಾದ್ ಹೆದ್ದಾರಿಯಲ್ಲಿ ಪ್ರಯಾಣಿಕರನ್ನು ಹೊತ್ತ ಐಷಾರಾಮಿ ಬಸ್ ಟ್ರಕ್ ಗೆ ಢಿಕ್ಕಿ ಹೊಡೆದು ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡಿದೆ ಪರಿಣಾಮ ನಿದ್ದೆಯ ಮಂಪರಿನಲ್ಲಿದ್ದ ಒಂಬತ್ತು ಮಂದಿ ಪ್ರಾಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ಪೊಲೀಸರು ಮತ್ತು ಸ್ಥಳೀಯರ ಸಹಕಾರದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತ ಹೇಗಾಯಿತು, ಮೃತ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಇದನ್ನೂ ಓದಿ : ಹೀರೋ ಹೊಸ ಎಲೆಕ್ಟ್ರಿಕ್‌ ಸ್ಕೂಟರ್‌; 165ಕಿ.ಮೀ.ವರೆಗೆ ಮೈಲೇಜ್‌

Advertisement
Advertisement

Udayavani is now on Telegram. Click here to join our channel and stay updated with the latest news.

Next