Advertisement

ಲಾರಿಗೆ ಬಸ್ ಡಿಕ್ಕಿ: ಮೂವರ ದುರ್ಮರಣ, ಹತ್ತು ಜನರಿಗೆ ಗಾಯ

10:06 AM Oct 06, 2019 | Team Udayavani |

ಚಿತ್ರದುರ್ಗ: ಲಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟು, ಹತ್ತು ಜನ ಗಾಯಗೊಂಡಿದ್ದಾರೆ.

Advertisement

ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ಶನಿವಾರ ನಸುಕಿನಲ್ಲಿ ಭೀಕರ ಅಪಘಾತ ನಡೆದಿದೆ.

ಕೆಎಸ್ ಆರ್ ಟಿಸಿ ಬಸ್ ವಿಜಯಪುರ ಮೂಲದ ಚಾಲಕ ಪ್ರವಿಣ್ (36), ಬೆಂಗಳೂರು ಮೂಲದ ಪ್ರಯಾಣಿಕ ವಿಜಯಕುಮಾರ್ (37) ಮೃತರು.
ಅಪಘಾತದಲ್ಲಿ ಮತ್ತೋರ್ವ ಮಹಿಳೆ ಮೃತಪಟ್ಟಿದ್ದು ಗುರುತು ಪತ್ತೆಯಾಗಿಲ್ಲ.

ಹಿರಿಯೂರಿನಿಂದ ಚಳ್ಳಕೆರೆ ಕಡೆಗೆ ಸಾಗುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರೆ. ಗಾಯಾಳುಗಳನ್ನು ಚಳ್ಳಕೆರೆ, ಚಿತ್ರದುರ್ಗ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next