ಮಳವಳ್ಳಿ: ಸಾರಿಗೆ ಇಲಾಖೆ ಮೇಲಧಿಕಾರಿಗಳ ಕಿರುಕುಳ ತಾಳಲಾರದೆ ಚಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಮಾಸುವ ಮುನ್ನವೇ ಮತ್ತೂಬ್ಬ ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಗಾಜನೂರು ಗ್ರಾಮದಲ್ಲಿ ನಡೆದಿದೆ. ಮಳವಳ್ಳಿ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಲೋಕೇಶ್ ಆತ್ಮಹತ್ಯೆಗೆ ಯತ್ನಿಸಿದ್ದು, ಡಿಪೋ ವ್ಯವಸ್ಥಾಪಕರ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಆರೋಪಿಸಲಾಗಿದೆ. ಮಳವಳ್ಳಿ ತಾಲೂಕು ಚಾಲಕರ ಸಂಘದ ಅಧ್ಯಕ್ಷರಾಗಿರುವ ಲೋಕೇಶ್ ತಮ್ಮ ಜಮೀನಿನ ಬಳಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥರಾಗಿದ್ದರು. ಗ್ರಾಮಸ್ಥರು ಲೋಕೇಶ್‌ಗೆ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಕಳೆದ ಮೂರು ದಿನಗಳ ಹಿಂದಷ್ಟೇ ಸಾರಿಗೆ ಬಸ್‌ನ ಮತ್ತೂಬ್ಬ ಚಾಲಕ ಮೇಲಧಿಕಾರಿಗಳ ಕಿರುಕುಳ ಸಹಿಸದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ಆತನೂ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.