Advertisement

Vijayapura; ಮೊಬೈಲ್ ನಲ್ಲಿ ಮಾತನಾಡುತ್ತ ಬಸ್ ಚಾಲನೆ: ಚಾಲಕನ ವಿಡಿಯೋ ವೈರಲ್

01:10 PM Mar 11, 2024 | keerthan |

ವಿಜಯಪುರ: ಮೊಬೈಲ್ ನಲ್ಲಿ ಮಾತನಾಡುತ್ತಲೇ ಬಸ್ ಚಾಲನೆ ಮಾಡುತ್ತಿದ್ದ ಸಾರಿಗೆ ಸಂಸ್ಥೆಯ ಚಾಲಕನ ವಿಡಿಯೋ ವೈರಲ್ ವೈರಲ್ ಆಗಿದ್ದು, ಪ್ರಯಾಣಿಕರಿಂದ ಆಕ್ರೋಶ ವ್ಯಕ್ತವಾಗಿದೆ.

Advertisement

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ವಿಜಯಪುರ ವಿಭಾಗದ ಬಸ್ ಚಾಲಕನಿಂದ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿದೆ.

ಪ್ರಯಾಣಿಕರು ಇದ್ದ ಬಸ್ ಚಾಲನೆ ಮಾಡುವಾಗ ಸಾರಿಗೆ ಸಂಸ್ಥೆಯ ಬಸ್ ಚಾಲಕ ಮೊಬೈಲ್ ನಲ್ಲಿ ಮಾತನಾಡಿದ್ದು, ಸದರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಚಾಲಕನ ವರ್ತನೆಯ ವಿಡಿಯೋ ಸೆರೆ ಹಿಡಿದಿದ್ದಾರೆ.

ವಿಜಯಪುರ ಕೇಂದ್ರ ಬಸ್ ನಿಲ್ದಾಣದಿಂದ ಇಂಡಿ ಪಟ್ಟಣಕ್ಕೆ ತೆರಳುತ್ತಿದ್ದ ಕೆಎ 28 ಎಫ್ 2466 ನೋಂದಣಿ ಸಂಖ್ಯೆಯ ಬಸ್ ಚಾಲಕನ ವಿಡಿಯೋ ವೈರ್ ಆಗಿದೆ. ಮೊಬೈಲ್ ನಲ್ಲಿ ಮಾತನಾಡುತ್ತ ಬಸ್ ಚಾಲನೆ ಮಾಡಿರುವ ಚಾಲಕನ ನಿರ್ಲಕ್ಷ್ಯಕ್ಕೆ ಪ್ರಯಾಣಿಕರಿಂದ ಅಸಮಾಧಾನ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಚಾಲಕನ ನಿರ್ಲಕ್ಷ್ಯತನದ ವಿಡಿಯೋ ವೈರಲ್ ಆಗುತ್ತಲೇ ಚಾಲಕನ ವಿರುದ್ದ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next