Advertisement

ಕಾಶ್ಮೀರದಲ್ಲಿ ಕಣಿವೆಗೆ ಉರುಳಿದ ಬಸ್‌; 13ಕ್ಕೂ ಅಧಿಕ ಸಾವು

11:35 AM Dec 08, 2018 | |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಶನಿವಾರ ಬಸ್ಸೊಂದು  ಪ್ರಪಾತಕ್ಕೆ ಬಿದ್ದ ಪರಿಣಾಮ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದು, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement

ಲೊರನ್‌ನಿಂದ ಪೂಂಚ್‌ಗೆ ತೆರಳುತ್ತಿದ್ದ ಬಸ್‌ ಚಾಲಕನ ನಿಯಂತ್ರಣ ತಪ್ಪಿ  ಏಕಾಏಕಿ ಪ್ರಪಾತಕ್ಕೆ ಉರುಳಿ ಬಿದ್ದು ಭೀಕರ ಅವಘಡ ಸಂಭವಿಸಿದೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿ ಹಲವರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಏರ್‌ಲಿಫ್ಟ್ ಮಾಡಿ ಜಮ್ಮುವಿನ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next