ದಾವಣಗೆರೆ: ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ದಾವಣಗೆರೆ ನಗರದ ಹೊರ ವಲಯದ ಬೇತೂರ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ದಾವಣಗೆರೆಯಿಂದ ಜಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಎಲೆಬೇತೂರು ಸಮೀಪ ಸೇತುವೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಬಹುತೇಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಬ್ಬ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಖಾಸಗಿ ಬಸ್ ದಾವಣಗೆರೆಯಿಂದ ಜಗಳೂರು ಕಡೆ ಹೋಗುತ್ತಿತ್ತು. ಬೇತೂರು ರಸ್ತೆ ದಾಟಿ ಮುಂದೆ ಬರುತ್ತಿದ್ದಂತೆ ಸಣ್ಣ ಹಳ್ಳಕ್ಕೆ ಕಟ್ಟಲಾದ ಸೇತುವೆಗೆ ಬಸ್ ಢಿಕ್ಕಿಯಾಗಿದೆ. ಹೀಗಾಗಿ ಸೇತುವೆ ಪಕ್ಕದಲ್ಲಿಯೇ ಪಲ್ಟಿಯಾಗಿದೆ. ಒಂದು ವೇಳೆ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದರೆ ಹೆಚ್ಚಿನ ಅನಾಹುತವಾಗುತ್ತಿತ್ತು.
ಇದನ್ನೂ ಓದಿ:ಕಾಫಿನಾಡಲ್ಲಿ ‘ದರ್ಗಾ ದಂಗಲ್’; ದರ್ಗಾದೊಳಗೆ ಹಿಂದೂ ದೇವಾಲಯದ ಕುರುಹುಗಳಿರುವುದಾಗಿ ಶಂಕೆ
Related Articles
ಸ್ಥಳೀಯರು ಪ್ರಯಾಣಿಕರ ರಕ್ಷಣೆಗೆ ಆಗಮಿಸಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.