ಮಾನ್ವಿ: ಪಟ್ಟಣದ ಗೋರ್ಕಲ್ ಬಳಿ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ.
Advertisement
ಅಪಘಾತದಲ್ಲಿ ರಫಿ ಗೋರ್ಕಲ್ (22) ಮೃತ ವ್ಯಕ್ತಿ. ಗಾಯಗೊಂಡವನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಿಲ್ಲೇಸೂಗೂರಿಂದ ಮಾನ್ವಿ ಕಡೆ ಹೊರಟ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.
ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.