ಕಲಬುರಗಿ: ರಸ್ತೆಯಲ್ಲಿ ನಿಂತಿದ್ದ ಲಾರಿ ಒಂದಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಢಿಕ್ಕಿ ಹೊಡೆದ ಪರಿಣಾಮ ಚಾಲಕನೂರ್ವ ಸ್ಥಳದಲ್ಲಿ ಸಾವನ್ನಪ್ಪಿದ್ದು, ಇತರೆ 9 ಜನರಿಗೆ ಗಾಯಗಳಾದ ಘಟನೆ ಸೋಮವಾರ ನಸುಕಿನ ಜಾವ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿ ಸಂಭವಿಸಿದೆ.
ಘಟನೆಯಲ್ಲಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರೆ ಒಂಬತ್ತು ಜನರಿಗೆ ಗಾಯವಾಗಿದ್ದು ಅವರನ್ನು ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ಅಪಘಾತಕ್ಕೀಡಾದ ಬಸ್ ಬಳ್ಳಾರಿಯಿಂದ ಬೀದರಿಗೆ ತೆರಳುತ್ತಿತ್ತು. ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದೆ ಎಂದು ಮಾಹಗಾಂವ್ ಪೊಲೀಸ್ ಠಾಣೆ ಪಿಎಸ್ಐ ತಿಳಿಸಿದ್ದಾರೆ.
ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.
Related Articles
ಅಪಘಾತದಿಂದಾಗಿ ಬೀದರ್ ಮತ್ತು ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರ ವತ್ಯಯ ಉಂಟಾಗಿತ್ತು.