Advertisement

ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್ ಗೆ ಬಸ್ ಢಿಕ್ಕಿ: ಸ್ಥಳದಲ್ಲೇ ಏಳು ಮಂದಿ ಸಾವು, ಮೂವರು ಗಂಭೀರ

12:22 PM Sep 12, 2022 | Team Udayavani |

ಛತ್ತೀಸ್‌ಗಢ : ನಿಂತಿದ್ದ ಟ್ರಕ್ ವೊಂದಕ್ಕೆ ಬಸ್ಸೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಸೋಮವಾರ ಮುಂಜಾನೆ ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ.

Advertisement

ಖಾಸಗಿ ಸಂಸ್ಥೆಗೆ ಸೇರಿದ ಬಸ್ ರಾಯ್‌ಪುರದಿಂದ ಸುರ್ಗುಜಾ ಜಿಲ್ಲೆಗೆ ತೆರಳುತ್ತಿತ್ತು ಎನ್ನಲಾಗಿದ್ದು ಮುಂಜಾನೆ 4 ಗಂಟೆ ಸುಮಾರಿಗೆ ಬಂಗೋ ಪೊಲೀಸ್ ಠಾಣೆ ವ್ಯಾಪ್ತಿಯ ಮದಾಯಿ ಘಾಟ್ ಬಳಿ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಕೊರ್ಬಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್ ತಿಳಿಸಿದ್ದಾರೆ.

ಘಟನೆಯಲ್ಲಿ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ ಮೂವರು ಗಂಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ತ್ರೆಗೆ ದಾಖಲಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next